
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 25 ಓವರ್ಗಳಿಗೆ ಸೀಮಿತವಾಗಿದ್ದ ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು. ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಅಫ್ಘಾನಿಸ್ತಾನ್ ತಂಡವು 24.5 ಓವರ್ಗಳಲ್ಲಿ 194 ರನ್ಗಳಿಸಿ ಸರ್ವಪತನ ಕಂಡಿತು.
195 ರನ್ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ ಅಜೇಯ 84 ರನ್ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಸ್ಫೋಟಕ 39 ರನ್ ಚಚ್ಚಿದರು. ಈ ಮೂಲಕ ಟೀಮ್ ಇಂಡಿಯಾ 22.5 ಓವರ್ಗಳಲ್ಲಿ 195 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳ ದ್ವಿತೀಯ ಪಂದ್ಯಕ್ಕಾಗಿ ಲಕ್ನೋಗೆ ತೆರಳಲು ಸಜ್ಜಾಗಿದ್ದಾರೆ.
ಈ ಸರಣಿಯ ದ್ವಿತೀಯ ಪಂದ್ಯವು ಜೂನ್ 17 ರಂದು ನಡೆಯಲಿದೆ. ಬುಧವಾರ ನಡೆಯಲಿರುವ ಈ ಪಂದ್ಯಕ್ಕೆ ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಈ ಸರಣಿಯ ಎಲ್ಲಾ ಪಂದ್ಯಗಳನ್ನು ಟಿವಿಯಲ್ಲಿ ‘ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್’ ಮೂಲಕ ವೀಕ್ಷಿಸಬಹುದು. ಹಾಗೆಯೇ ಮೊಬೈಲ್ ಹಾಗೂ ಡಿಜಿಟಲ್ ಪರದೆಯಲ್ಲಿ ‘ಜಿಯೋಸ್ಟಾರ್’ ಆ್ಯಪ್ ಮೂಲಕ ಲೈವ್ ಸ್ಟ್ರೀಮಿಂಗ್ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
ಭಾರತ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.
ಇದನ್ನೂ ಓದಿ: 24 ಫೋರ್, 2 ಭರ್ಜರಿ ಸಿಕ್ಸ್: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್
ಅಫ್ಘಾನಿಸ್ತಾನ್ ಏಕದಿನ ತಂಡ: ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಝ್ಮತ್ ಒಮರ್ಝಾಹಿ, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗೆಯಾಲಿಯಾ ಖರೋಟಿ, ಅಲ್ಲಾ ಗಝನ್ಫರ್, ಬಿಲಾಲ್ ಸಮಿ, ದರ್ವೀಶ್ ರಸೂಲಿ, ಫರೀದ್ ಮಲಿಕ್, ಝಿಯಾ ಉರ್ ರೆಹಮಾನ್ ಶರೀಫಿ.