AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಭಾರತ- ಅಫ್ಘನ್ 2ನೇ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ? ಹೇಗಿರಲಿದೆ ಹವಾಮಾನ?

India vs Afghanistan 2nd ODI: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಸರಣಿ ಗೆಲ್ಲಲು ಎದುರು ನೋಡುತ್ತಿದ್ದರೆ, ಅಫ್ಘಾನಿಸ್ತಾನ ಸರಣಿಯನ್ನು ಜೀವಂತವಾಗಿಡಲು ಹೋರಾಡಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಯಿಲ್ಲ, ಆದರೆ 40-45 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಪಿಚ್ ಸ್ಪಿನ್ನರ್‌ಗಳಿಗೆ ಸಹಾಯಕವಾಗಿದ್ದು, ಕಡಿಮೆ ಸ್ಕೋರಿಂಗ್ ಪಂದ್ಯ ನಿರೀಕ್ಷಿಸಲಾಗಿದೆ.

IND vs AFG: ಭಾರತ- ಅಫ್ಘನ್ 2ನೇ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ? ಹೇಗಿರಲಿದೆ ಹವಾಮಾನ?
Ind Vs Afg
ಪೃಥ್ವಿಶಂಕರ
|

Updated on: Jun 16, 2026 | 10:37 PM

Share

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಉತ್ತರ ಪ್ರದೇಶದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಕೂಡ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ. ಮೊದಲನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಸುಲಭವಾಗಿ ಮಣಿಸಿದ್ದ ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನ ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಇತ್ತ ಅಫ್ಘಾನಿಸ್ತಾನ ಕೂಡ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಲಿದೆ. ಆದಾಗ್ಯೂ ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ ಎಂಬ ಆತಂಕ ಅಭಿಮಾನಿಗಳಿಗಿದೆ. ಏಕೆಂದರೆ ಮಳೆಯಿಂದಾಗಿ ಮೊದಲ ಏಕದಿನ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿತ್ತು. ಹೀಗಾಗಿ ಈ ಪಂದ್ಯದ ದಿನದಂದು ಹವಾಮಾನ ವರದಿ ಹೇಗಿರಲಿದೆ ಎಂಬುದು ಪ್ರಶ್ನೆ?

ಹವಾಮಾನ ಹೇಗಿರಲಿದೆ?

ಮೇಲೆ ಹೇಳಿದಂತೆ ಎರಡನೇ ಪಂದ್ಯ ಲಕ್ನೋದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಯಾವುದೇ ಮಳೆಯ ಆತಂಕವಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಂದ್ಯದ ದಿನದಂದು ಲಕ್ನೋದಲ್ಲಿ ಬಿಸಿಲು ಹೆಚ್ಚಿರಲಿದ್ದು, ಮಳೆಯಾಗುವ ಸಾಧ್ಯತೆಗಳಿಲ್ಲ. ಆದರೆ ಬಿಸಿ ತಾಪಮಾನದಿಂದ ಆಟಗಾರರು ತೊಂದರೆಗೊಳಗಾಗಬಹುದು. ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಿರಲಿದ್ದು, 45 ಡಿಗ್ರಿ ತಲುಪಬಹುದು ಎಂದು ನಿರೀಕ್ಷಿಸಲಾಗಿದೆ.

ಪಿಚ್ ಹೇಗಿರಲಿದೆ?

ಇನ್ನು ಏಕನಾ ಕ್ರೀಡಾಂಗಣದ ಪಿಚ್ ಬಗ್ಗೆ ಹೇಳುವುದಾದರೆ, ಇದು ಸಾಮಾನ್ಯವಾಗಿ ಬೌಲರ್‌ಗಳಿಗೆ, ವಿಶೇಷವಾಗಿ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿರುತ್ತದೆ. ಪಂದ್ಯ ಮುಂದುವರೆದಂತೆ, ಪಿಚ್ ನಿಧಾನವಾಗುತ್ತದೆ, ಇದರಿಂದಾಗಿ ಬ್ಯಾಟಿಂಗ್ ಕಷ್ಟವಾಗುತ್ತದೆ. ಹೀಗಾಗಿ ಬ್ಯಾಟ್ಸ್‌ಮನ್‌ಗಳು ದೊಡ್ಡ ಇನ್ನಿಂಗ್ಸ್ ಕಟ್ಟಬೇಕೆಂದರೆ ಆರಂಭದಲ್ಲಿ ತಾಳ್ಮೆಯ ಬ್ಯಾಟಿಂಗ್‌ ಮಾಡುವುದು ಅವಶ್ಯಕ. ಈ ಮೈದಾನದಲ್ಲಿ ಏಕದಿನ ಪಂದ್ಯದಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 213 ರನ್ ಆಗಿದೆ. ಆದ್ದರಿಂದ, ಈ ಪಂದ್ಯ ಹೆಚ್ಚಿನ ಸ್ಕೋರಿಂಗ್ ಪಂದ್ಯವಾಗುವುದು ಅನುಮಾನ.

IND vs AFG: ಮೊದಲ ಏಕದಿನ ಪಂದ್ಯದ ನಡುವೆ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ

ಉಭಯ ತಂಡಗಳು

ಏಕದಿನ ಸರಣಿಗೆ ಟೀಂ ಇಂಡಿಯಾ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!