
ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಸರಣಿಯನ್ನು ತನ್ನದಾಗಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ ಏತನ್ಮಧ್ಯೆ, ಸರಣಿಯನ್ನು ಜೀವಂತವಾಗಿರಿಸುವ ಇರಾದೆಯೊಂದಿಗೆ ಅಫ್ಘಾನಿಸ್ತಾನ ಮೈದಾನಕ್ಕಿಳಿದಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಮಾಡಲಿದೆ.
ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಅಭಿಮಾನಿಗಳಿಗೆ ನಿರಾಶೆಯಾಗಿದ್ದು, ಎರಡನೇ ಪಂದ್ಯದಲ್ಲೂ ವೈಭವ್ ಸೂರ್ಯವಂಶಿಗೆ ಆಡುವ ಅವಕಾಶ ಸಿಕ್ಕಿಲ್ಲ. ಇದರರ್ಥ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಆರಂಭಿಕರಾಗಿ ಆಡಲಿದ್ದಾರೆ. ಆದರೆ ಈ ಮೊದಲ ವರದಿಯಾದಂತೆ ಗಾಯಗೊಂಡಿರುವ ಸ್ಪಿನ್ನರ್ ವರುಣ್ ಚಕ್ರವರ್ತಿ ಈ ಸರಣಿಯಿಂದಲೇ ಹೊರಬಿದ್ದಿದ್ದು, ಅವರ ಬದಲಿಗೆ ರವಿ ಬಿಷ್ಣೋಯಿಗೆ ತಂಡದಲ್ಲಿ ಆಡುವ ಅವಕಾಶ ಸಿಕ್ಕಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇತ್ತ ಅಫ್ಘಾನಿಸ್ತಾನ ಮೊದಲ ಟಿ20 ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.
ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇದುವರೆಗೆ ಒಟ್ಟು 10 ಪಂದ್ಯಗಳು ನಡೆದಿವೆ. ಈ ಪಂದ್ಯಗಳಲ್ಲಿ ಟೀಂ ಇಂಡಿಯಾ 9 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರರ್ಥ ಅಫ್ಘಾನಿಸ್ತಾನ ಇನ್ನೂ ಒಂದೇ ಒಂದು ಪಂದ್ಯದಲ್ಲಿ ಭಾರತವನ್ನು ಸೋಲಿಸಿಲ್ಲ.
Here’s a look at #TeamIndia‘s Playing XI for the 2️⃣nd T20I 🙌
Updates ▶️ https://t.co/96e4nhbYLf#AFGvIND pic.twitter.com/y6ress4i9N
— BCCI (@BCCI) September 15, 2026
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ (ವರುಣ್ ಚಕ್ರವರ್ತಿ ಬದಲಿಗೆ), ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್ದೀಪ್ ಸಿಂಗ್.
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್ ಮತ್ತು ಫಜಲ್ಹಕ್ ಫಾರೂಕಿ.
Published On - 7:16 pm, Tue, 15 September 26