IND vs AFG: ಇಂದೋರ್‌ನಲ್ಲಿ ಟಾಸ್ ಗೆದ್ದವರೇ ಬಾಸ್; ಈ ಮೈದಾನವೆಂದರೆ ರೋಹಿತ್​ಗೆ ಬಹಳ ಅಚ್ಚುಮೆಚ್ಚು! ಏಕೆ ಗೊತ್ತಾ?

IND vs AFG, Holkar Cricket Stadium Pitch Report: ಭಾರತ ತಂಡ ಇಲ್ಲಿಯವರೆಗೆ ಈ ಮೈದಾನದಲ್ಲಿ 7 ಏಕದಿನ ಪಂದ್ಯಗಳನ್ನು ಆಡಿದ್ದು, ಎಲ್ಲವನ್ನೂ ಗೆದ್ದಿದೆ. ಕೇವಲ ಒಂದು ಟಿ20 ಮತ್ತು 1 ಟೆಸ್ಟ್ ಪಂದ್ಯವನ್ನು ಸೋತಿದೆ. ಇಂತಹ ಪರಿಸ್ಥಿತಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲ್ಲುವ ನಿರೀಕ್ಷೆಯಿದೆ.

IND vs AFG: ಇಂದೋರ್‌ನಲ್ಲಿ ಟಾಸ್ ಗೆದ್ದವರೇ ಬಾಸ್; ಈ ಮೈದಾನವೆಂದರೆ ರೋಹಿತ್​ಗೆ ಬಹಳ ಅಚ್ಚುಮೆಚ್ಚು! ಏಕೆ ಗೊತ್ತಾ?
ಹೋಳ್ಕರ್ ಪಿಚ್ ವರದಿ
Follow us
ಪೃಥ್ವಿಶಂಕರ
|

Updated on: Jan 13, 2024 | 6:34 PM

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಎರಡನೇ ಟಿ20 ಪಂದ್ಯ ನಾಳೆ ಅಂದರೆ ಭಾನುವಾರದಮದು ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ (Holkar Stadium in Indore) ನಡೆಯಲಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ (Team India) ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಇಂದೋರ್ ಟಿ20 ಗೆದ್ದು ಸರಣಿ ವಶಪಡಿಸಿಕೊಳ್ಳಲು ರೋಹಿತ್ ಪಡೆ ಕಾತುರವಾಗಿದೆ. ಅದಕ್ಕೆ ಪೂರಕವಾಗಿ ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಎರಡನೇ ಟಿ20 ಪಂದ್ಯ ನಡೆಯುತ್ತಿದೆ. ಏಕೆಂದರೆ ಭಾರತ ತಂಡ ಇಲ್ಲಿಯವರೆಗೆ ಈ ಮೈದಾನದಲ್ಲಿ 7 ಏಕದಿನ ಪಂದ್ಯಗಳನ್ನು ಆಡಿದ್ದು, ಎಲ್ಲವನ್ನೂ ಗೆದ್ದಿದೆ. ಕೇವಲ ಒಂದು ಟಿ20 ಮತ್ತು 1 ಟೆಸ್ಟ್ ಪಂದ್ಯವನ್ನು ಸೋತಿದೆ. ಇಂತಹ ಪರಿಸ್ಥಿತಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲ್ಲುವ ನಿರೀಕ್ಷೆಯಿದೆ.

ಪಿಚ್ ಯಾರಿಗೆ ಸಹಕಾರಿ?

ಇಂದೋರ್‌ನ ಹೋಳ್ಕರ್ ಸ್ಟೇಡಿಯಂನ ಪಿಚ್​ ಬ್ಯಾಟಿಂಗ್‌ಗೆ ಹೆಚ್ಚು ಸೂಕ್ತವಾಗಿದೆ. ಅಲ್ಲದೆ ಬೌಂಡರಿ ಕೂಡ ಚಿಕ್ಕದಾಗಿದೆ. ಈ ಕಾರಣಕ್ಕಾಗಿ ಬ್ಯಾಟ್ಸ್‌ಮನ್‌ಗಳಿಗೆ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸುವುದು ಸುಲಭವಾಗಿದೆ. ಈ ಪಿಚ್​ನಲ್ಲಿ ಟಿ20ಯ ಸರಾಸರಿ ಸ್ಕೋರ್ 210 ರನ್ ಆಗಿದೆ. ಹೀಗಾಗಿ ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟ್ ಮಾಡಿದರೆ ಅನುಕೂಲ. ಇಲ್ಲಿಯವರೆಗೆ ಎರಡು ಟಿ20 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದ್ದರೆ, ಒಂದರಲ್ಲಿ ರನ್ ಚೇಸಿಂಗ್ ತಂಡ ಗೆದ್ದಿದೆ.

IND vs AFG: ಕಿಂಗ್ ಕೊಹ್ಲಿ ರೀ ಎಂಟ್ರಿ; 2ನೇ ಟಿ20 ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಮಾಹಿತಿ

ಟಾಸ್ ಪ್ರಮುಖ ಪಾತ್ರ ವಹಿಸಲಿದೆ

ಭಾರತ-ಅಫ್ಘಾನಿಸ್ತಾನ ಪಂದ್ಯದಲ್ಲಿ ಟಾಸ್ ಪ್ರಮುಖ ಪಾತ್ರ ವಹಿಸಬಹುದು. ಏಕೆಂದರೆ ಇಂದೋರ್‌ನಲ್ಲಿ ರಾತ್ರಿ ತಾಪಮಾನ ಕಡಿಮೆಯಾಗಲಿದ್ದು, ರಾತ್ರಿಯಾದಂತೆ ಇಬ್ಬನಿ ಪರಿಣಾಮ ಬೀರಲಿದೆ. ಇಂತಹ ಪರಿಸ್ಥಿತಿಯಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಮಾಡಲು ಆದ್ಯತೆ ನೀಡಬಹುದು.

ಕೊನೆಯ ಟಿ20ಯಲ್ಲಿ ಭಾರತಕ್ಕೆ ಸೋಲು

ಈ ಮೈದಾನದಲ್ಲಿ ಕೊನೆಯ ಬಾರಿಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಅಕ್ಟೋಬರ್ 2022 ರಲ್ಲಿ ಟಿ20 ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 227 ರನ್ ಕಲೆಹಾಕಿತ್ತು. ಇದಕ್ಕೆ ಉತ್ತರವಾಗಿ ಭಾರತ ತಂಡ 18.3 ಓವರ್‌ಗಳಲ್ಲಿ 178 ರನ್‌ಗಳಿಗೆ ಆಲೌಟ್ ಆಗಿತ್ತು. ಆ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ರಿಲೆ ರುಸ್ಸೋ ಕೇವಲ 48 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅವರ ಇನ್ನಿಂಗ್ಸ್​ನಲ್ಲಿ 8 ಸಿಕ್ಸರ್ ಮತ್ತು 7 ಬೌಂಡರಿಗಳೂ ಸೇರಿದ್ದವು. ಇಡೀ ಪಂದ್ಯದಲ್ಲಿ ಒಟ್ಟು 29 ಸಿಕ್ಸರ್‌ಗಳು ದಾಖಲಾಗಿದ್ದವು.

ಅತಿ ವೇಗದ ಶತಕ ಬಾರಿಸಿದ್ದ ರೋಹಿತ್

ವಾಸ್ತವವಾಗಿ ರೋಹಿತ್ ಶರ್ಮಾಗೆ ಈ ಮೈದಾನ ಬಹಳ ಅಚ್ಚುಮೆಚ್ಚು. ಏಕೆಂದರೆ ಇಂದೋರ್‌ನಲ್ಲಿಯೇ ಭಾರತದ ಪರ ಟಿ20ಯಲ್ಲಿ ರೋಹಿತ್ ವೇಗದ ಶತಕ ಬಾರಿಸಿದ್ದಾರೆ. 2017ರಲ್ಲಿ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ರೋಹಿತ್ ಶತಕ ಬಾರಿಸಿದ್ದರು. ತಮ್ಮ ಇನ್ನಿಂಗ್ಸ್​ನಲ್ಲಿ ಒಟ್ಟು 43 ಎಸೆತಗಳನ್ನು ಎದುರಿಸಿದ್ದ ರೋಹಿತ್ 12 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ 118 ರನ್ ಗಳಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ