AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಇಂದು ಭಾರತ-ಅಫ್ಘಾನಿಸ್ತಾನ್ ನಡುವಣ 2ನೇ ಟಿ20 ಪಂದ್ಯ

India vs Afghanistan, 2nd T20I: ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಈ ಮ್ಯಾಚ್​ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಲಿದ್ದಾರೆ. 2022ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿಗೆ ಕಣಕ್ಕಿಳಿದಿದ್ದ ಕೊಹ್ಲಿ ಆ ಬಳಿಕ ಭಾರತ ಪರ ಟಿ20 ಕ್ರಿಕೆಟ್​ ಆಡಿರಲಿಲ್ಲ.

IND vs AFG: ಇಂದು ಭಾರತ-ಅಫ್ಘಾನಿಸ್ತಾನ್ ನಡುವಣ 2ನೇ ಟಿ20 ಪಂದ್ಯ
India vs Afghanistan
TV9 Web
| Edited By: |

Updated on: Jan 14, 2024 | 6:16 AM

Share

ಭಾರತ ಮತ್ತು ಅಫ್ಘಾನಿಸ್ತಾನ್ (India vs Afghanistan) ತಂಡಗಳ ನಡುವಣ 2ನೇ ಟಿ20 ಪಂದ್ಯವು ಇಂದು ನಡೆಯಲಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್​​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಏಕೆಂದರೆ ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

ಇದೀಗ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾಗೆ ಇಂದಿನ ಪಂದ್ಯದ ಮೂಲಕ ಸರಣಿ ಗೆಲ್ಲುವ ಅವಕಾಶವಿದೆ. ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಲು ಅಫ್ಘಾನಿಸ್ತಾನ್ ಇಂದು ಗೆಲ್ಲಲೇಬೇಕು. ಹೀಗಾಗಿ ಅಫ್ಘಾನ್ ಪಡೆಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಕಿಂಗ್ ಕೊಹ್ಲಿ ಕಂಬ್ಯಾಕ್:

ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಈ ಮ್ಯಾಚ್​ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಲಿದ್ದಾರೆ. 2022ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿಗೆ ಕಣಕ್ಕಿಳಿದಿದ್ದ ಕೊಹ್ಲಿ ಆ ಬಳಿಕ ಭಾರತ ಪರ ಟಿ20 ಕ್ರಿಕೆಟ್​ ಆಡಿರಲಿಲ್ಲ. ಇದೀಗ 14 ತಿಂಗಳುಗಳ ಬಳಿಕ ಮತ್ತೊಮ್ಮೆ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಸಜ್ಜಾಗಿದ್ದಾರೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಇಂದೋರ್​ನ ಹೋಲ್ಕರ್ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಅದಕ್ಕೂ ಮುನ್ನ 6.30 ಕ್ಕೆ ಟಾಸ್ ಪ್ರಕ್ರಿಯೆ ಜರುಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯದ ನೇರ ಪ್ರಸಾರವು ಸ್ಪೋರ್ಟ್ಸ್​ 18 ಚಾನೆಲ್​ನಲ್ಲಿ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಉಭಯ ತಂಡಗಳು ಈ ಕೆಳಗಿನಂತಿದೆ:

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ.

ಇದನ್ನೂ ಓದಿ: ನನಗೆ RCB ಪರ ಆಡೋದು ಇಷ್ಟವಿರಲಿಲ್ಲ, ಬೆದರಿಸಿ ಆಡ್ಸಿದ್ರು..!

ಅಫ್ಘಾನಿಸ್ತಾನ್ ತಂಡ: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ (ನಾಯಕ) , ಹಝರತುಲ್ಲಾ ಝಝೈ , ನಜಿಬುಲ್ಲಾ ಝದ್ರಾನ್ , ಮೊಹಮ್ಮದ್ ನಬಿ , ಅಜ್ಮತುಲ್ಲಾ ಒಮರ್​ಝೈ , ಮುಜೀಬ್ ಉರ್ ರಹಮಾನ್ , ಶರಫುದ್ದೀನ್ ಅಶ್ರಫ್ , ಖೈಸ್ ಅಹ್ಮದ್ , ನವೀನ್ -ಉಲ್-ಹಕ್, ಫಝಲ್​ ಹಕ್ ಫಾರೂಖಿ, ನೂರ್ ಅಹ್ಮದ್, ಮೊಹಮ್ಮದ್ ಸಲೀಂ ಶಫಿ, ಕರೀಂ ಜನತ್ , ಇಕ್ರಮ್ ಅಲಿಖಿಲ್ , ಫರೀದ್ ಅಹ್ಮದ್ ಮಲಿಕ್ , ರಹಮತ್ ಶಾ , ಗುಲ್ಬದಿನ್ ನೈಬ್.

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು