AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: 6 ರನ್​ಗೆ 4 ವಿಕೆಟ್..! ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಅಫ್ಘನ್

India vs Afghanistan 3rd ODI: ಭಾರತ-ಅಫ್ಘಾನಿಸ್ತಾನ 3ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಸ್ಫೋಟಕ ಬೌಲಿಂಗ್‌ನಿಂದ ಅಫ್ಘನ್ ಬ್ಯಾಟಿಂಗ್ ಲೈನ್ಅಪ್ ಅಲುಗಾಡಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಕೇವಲ 6 ರನ್ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿ, ಅಫ್ಘನ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು. ಅವರ ಮಾರಕ ದಾಳಿಗೆ ತತ್ತರಿಸಿದ ಅಫ್ಘಾನಿಸ್ತಾನ ಪವರ್‌ಪ್ಲೇನಲ್ಲಿ ಕೇವಲ 37 ರನ್ ಗಳಿಸಿ 4 ವಿಕೆಟ್ ಕಳೆದುಕೊಂಡಿತು.

IND vs AFG: 6 ರನ್​ಗೆ 4 ವಿಕೆಟ್..! ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಅಫ್ಘನ್
Prasidh KrishnaImage Credit source: BCCI X
ಪೃಥ್ವಿಶಂಕರ
|

Updated on:Jun 20, 2026 | 2:45 PM

Share

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿದ್ದ ಅಫ್ಘಾನಿಸ್ತಾನ 2-0 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆದ್ದು ವೈಟ್ ವಾಶ್ ಮುಖಭಂಗದಿಂದ ಪಾರಾಗುವ ಸಲುವಾಗಿ ಅಫ್ಘನ್ ತಂಡ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿತು. ಆದರೆ ಚಿದಂಬರಂ ಮೈದಾನದಲ್ಲಿ ಅಫ್ಘನ್ ಬ್ಯಾಟಿಂಗ್‌ ವಿಭಾಗವನ್ನು ಕಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಪವರ್ ಪ್ಲೇ ಮುಗಿಯುವುದಕ್ಕೂ ಮುನ್ನವೇ ಪ್ರಮುಖ 4 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

6 ರನ್ ನೀಡಿ 4 ವಿಕೆಟ್ ಪಡೆದ ಪ್ರಸಿದ್ಧ್

ಪವರ್​ ಪ್ಲೇನಲ್ಲಿ ಅಂದರೆ ಮೊದಲ 10 ಓವರ್​ಗಳಲ್ಲಿ 5 ಓವರ್​ಗಳನ್ನು ಬೌಲ್ ಮಾಡಿದ ಪ್ರಸಿದ್ಧ್ ಕೃಷ್ಣ ಕೇವಲ 6 ರನ್ ನೀಡಿ ಪ್ರಮುಖ 4 ವಿಕೆಟ್‌ಗಳನ್ನು ಉರುಳಿಸಿದರು. ಪ್ರಸಿದ್ಧ್ ಬೌಲ್ ಮಾಡಿದ ಈ 5 ಓವರ್​ಗಳಲ್ಲಿ 2 ಓವರ್​ಗಳು ಮೇಡನ್ ಆಗಿದ್ದವು. ಪ್ರಸಿದ್ಧ್ ಮಾರಕ ದಾಳಿಗೆ ತತ್ತರಿಸಿದ ಅಫ್ಘಾನಿಸ್ತಾನ ತಂಡ ಮೊದಲ 10 ಓವರ್​ಗಳಲ್ಲಿ ಕೇವಲ 37 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ನಾಲ್ವರು ಅಗ್ರ ಬ್ಯಾಟ್ಸ್‌ಮನ್​ಗಳಲ್ಲಿ ಮೂವರು ಆಟಗಾರರು ಒಂದಂಕಿಗೆ ವಿಕೆಟ್ ಒಪ್ಪಿಸಿದರೆ, ಒಬ್ಬ ಬ್ಯಾಟ್ಸ್‌ಮನ್ ಮಾತ್ರ 11 ರನ್ ಕಲೆಹಾಕಿ ಎರಡಂಕಿ ಮೊತ್ತ ದಾಟಿದರು.

IND vs AFG: ನಾಯಕನಾಗಿ ಚೊಚ್ಚಲ ಏಕದಿನ ಸರಣಿ ಗೆದ್ದ ಶುಭ್​ಮನ್ ಗಿಲ್

ಪ್ರಸಿದ್ಧ್ ಬೌಲ್ ಮಾಡಿದ 5 ಓವರ್​ಗಳು

  • ತಮ್ಮ ಖೋಟಾದ ಮೊದಲ ಓವರ್​ನ ಮೊದಲ ಎಸೆತದಲ್ಲೇ ಪ್ರಸಿದ್ಧ್, ಅಫ್ಘನ್ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಅವರ ವಿಕೆಟ್ ಉರುಳಿಸಿದರು. ಗುರ್ಬಾಜ್ 7 ಎಸೆತಗಳಲ್ಲಿ 5 ರನ್ ಬಾರಿಸಿ ಔಟಾದರು. ಉಳಿದಂತೆ ಈ ಓವರ್​ನಲ್ಲಿ ಲೆಗ್ ಬೈಸ್ ಮೂಲಕ 4 ರನ್​ಗಳು ಬಂದವು.
  • ತಮ್ಮ ಖೋಟಾದ ಎರಡನೇ ಓವರ್​ನಲ್ಲೂ ಕರಾರುವಕ್ಕಾದ ದಾಳಿ ಮಾಡಿದ ಪ್ರಸಿದ್ಧ್ ಈ ಓವರ್​ನಲ್ಲಿ ಲೆಗ್ ಬೈಸ್ ಮೂಲಕ ಕೇವಲ 1 ರನ್ ಬಿಟ್ಟುಕೊಟ್ಟರು.
  • ಪ್ರಸಿದ್ಧ್ ಬೌಲ್ ಮಾಡಿದ ಮೂರನೇ ಓವರ್​ನ 4ನೇ ಎಸೆತದಲ್ಲಿ ರಹಮತ್ ಶಾ ಬೌಂಡರಿ ಬಾರಿಸಿದರು. ಆದರೆ ಅದೇ ಓವರ್​ನ ಕೊನೆಯ ಎಸೆತದಲ್ಲಿ ಪ್ರಸಿದ್ಧ್ ರಹಮತ್ ಶಾ ವಿಕೆಟ್ ಪಡೆದರು.
  • ನಾಲ್ಕನೇ ಓವರ್​ನ ಎರಡನೇ ಎಸೆತದಲ್ಲಿ ಅಫ್ಘನ್ ಆರಂಭಿಕ ಇಬ್ರಾಹಿಂ ಜದ್ರಾನ್ ಅವರ ವಿಕೆಟ್ ಉರುಳಿಸಿದ ಪ್ರಸಿದ್ಧ್ ಈ ಓವರ್​ನಲ್ಲೂ ನೀಡಿದ್ದು ಕೇವಲ 1 ರನ್.
  • 5ನೇ ಓವರ್​ನಲ್ಲೂ ತಮ್ಮ ವಿಕೆಟ್ ಬೇಟೆ ಮುಂದುವರೆಸಿದ ಪ್ರಸಿದ್ಧ್, ಈ ಓವರ್​ನ ಎರಡನೇ ಎಸೆತದಲ್ಲಿ ದರ್ವಿಶ್ ರಸೂಲಿ ಅವರ ವಿಕೆಟ್ ಕಬಳಿಸಿದರು. ಜೊತೆಗೆ ಕೇವಲ 1 ರನ್ ಮಾತ್ರ ಬಿಟ್ಟುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Sat, 20 June 26

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ