AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್ ರಾಹುಲ್ ಔಟ್: ಟೀಮ್ ಇಂಡಿಯಾದಲ್ಲಿ 3 ಬದಲಾವಣೆ

India vs Afghanistan, 3rd ODI: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಏಕದಿನ ಸರಣಿಯ ಕೊನೆಯ ಮ್ಯಾಚ್​ ಚೆನ್ನೈನಲ್ಲಿ ನಡೆಯುತ್ತಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯವನ್ನು 170 ರನ್​ಗಳಿಂದ ಗೆದ್ದುಕೊಂಡಿತ್ತು. ಇದೀಗ ಮೂರನೇ ಪಂದ್ಯವನ್ನು ಗೆದ್ದು ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಿದೆ.

ಕೆಎಲ್ ರಾಹುಲ್ ಔಟ್: ಟೀಮ್ ಇಂಡಿಯಾದಲ್ಲಿ 3 ಬದಲಾವಣೆ
IND vs AFGImage Credit source: Starsports
ಝಾಹಿರ್ ಯೂಸುಫ್
|

Updated on: Jun 20, 2026 | 1:12 PM

Share

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಏಕದಿನ ಪಂದ್ಯ ಶುರುವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಗೆ ಸ್ಥಾನ ಕಲ್ಪಿಸಲಾಗಿದೆ.

ಹಾಗೆಯೇ ಕಳೆದ ಮ್ಯಾಚ್​ನಲ್ಲಿ ಬೆಂಚ್ ಕಾದಿದ್ದ ಹರ್ಷ್ ದುಬೆ ಹಾಗೂ ಪ್ರಸಿದ್ಧ್ ಕೃಷ್ಣ ಈ ಪಂದ್ಯದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಕುಲ್ದೀಪ್ ಯಾದವ್ ಹಾಗೂ ಅರ್ಷದೀಪ್ ಸಿಂಗ್ ಹೊರುಗಳಿಯಬೇಕಾಗಿ ಬಂದಿದೆ.

ಭಾರತ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷ್ ದುಬೆ, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್.

ಅಫ್ಘಾನಿಸ್ತಾನ್ ಪ್ಲೇಯಿಂಗ್ XI: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ದರ್ವಿಶ್ ರಸೂಲಿ, ಮೊಹಮ್ಮದ್ ನಬಿ, ಅಝ್ಮತ್​ ಒಮರ್​ಝಾಹಿ, ರಶೀದ್ ಖಾನ್, ಅಲ್ಲಾ ಗಝನ್​ಫರ್, ಜಿಯಾ ಉರ್ ರಹಮಾನ್ ಷರೀಫಿ, ಫರೀದ್ ಅಹ್ಮದ್.

ಸರಣಿ ಗೆದ್ದಿರುವ ಟೀಮ್ ಇಂಡಿಯಾ:

ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯವು ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 24.2 ಓವರ್​ಗಳಲ್ಲಿ 194 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ 195 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು.

ಇನ್ನು ಲಕ್ನೋನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 402 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ 232 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತ ತಂಡವು 170 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

ಇದನ್ನೂ ಓದಿ: ಗಂಭೀರ್ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದರು: ಶ್ರೀಶಾಂತ್ ಗಂಭೀರ ಆರೋಪ 

ಅಫ್ಘಾನಿಸ್ತಾನ್ ಏಕದಿನ ತಂಡ: ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಝ್ಮತ್​ ಒಮರ್​ಝಾಹಿ, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗೆಯಾಲಿಯಾ ಖರೋಟಿ, ಅಲ್ಲಾ ಗಝನ್​ಫರ್, ಬಿಲಾಲ್ ಸಮಿ, ದರ್ವೀಶ್ ರಸೂಲಿ, ಫರೀದ್ ಮಲಿಕ್, ಝಿಯಾ ಉರ್ ರೆಹಮಾನ್ ಶರೀಫಿ.

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!