AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಟೀಂ ಇಂಡಿಯಾಗೆ ಆಘಾತ; ಟೆಸ್ಟ್ ಪಂದ್ಯಕ್ಕೆ ಸ್ಟಾರ್ ವೇಗಿ ಅಲಭ್ಯ

Mohammed Siraj injury: ಮೊಹಮ್ಮದ್ ಸಿರಾಜ್ ಗಾಯದಿಂದಾಗಿ ಭಾರತ-ಅಫ್ಘಾನಿಸ್ತಾನ ಟೆಸ್ಟ್‌ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ. ಜೂನ್ 6ರಿಂದ ನಡೆಯುವ ಈ ಸರಣಿಗೆ ಸಿರಾಜ್ ಬದಲಿಗೆ ಗುರ್ನೂರ್ ಬ್ರಾರ್ ಅಥವಾ ಆಕಿಬ್ ನಬಿಗೆ ಅವಕಾಶ ಸಿಗಬಹುದು. ಐಪಿಎಲ್ ನಂತರ ಭಾರತ ತಂಡ ಅಂತರಾಷ್ಟ್ರೀಯ ಸರಣಿಗೆ ಸಜ್ಜಾಗಿದ್ದು, ಏಕದಿನ ಪಂದ್ಯಗಳ ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ.

IND vs AFG: ಟೀಂ ಇಂಡಿಯಾಗೆ ಆಘಾತ; ಟೆಸ್ಟ್ ಪಂದ್ಯಕ್ಕೆ ಸ್ಟಾರ್ ವೇಗಿ ಅಲಭ್ಯ
Team India
ಪೃಥ್ವಿಶಂಕರ
|

Updated on: Jun 03, 2026 | 3:58 PM

Share

2026 ರ ಐಪಿಎಲ್ (IPL 2026) ಆಡಿ ಮುಗಿಸಿರುವ ಟೀಂ ಇಂಡಿಯಾ  (Team India) ಆಟಗಾರರು ಇದೀಗ ರಾಷ್ಟ್ರೀಯ ಕರ್ತವ್ಯದತ್ತ ಗಮನಹರಿಸಲಿದ್ದಾರೆ. ಬಹಳ ದಿನಗಳ ಬಳಿಕ ಟೀಂ ಇಂಡಿಯಾ ಅಂತರರಾಷ್ಟ್ರೀಯ ಸರಣಿಯನ್ನು ಆಡಲು ಸಜ್ಜಾಗಿದೆ. ಅದರಂತೆ ಭಾರತ ಹಾಗೂ ಅಫ್ಘಾನಿಸ್ತಾನದ ನಡುವೆ ಇದೇ ಜೂನ್ 6 ರಿಂದ ಟೆಸ್ಟ್ ಪಂದ್ಯ ಶುರುವಾಗಬೇಕಿದೆ. ಆದಾಗ್ಯೂ ಈ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟಾಗಿದೆ. ತಂಡದ ಅನುಭವಿ ಬೌಲರ್ ಮೊಹಮ್ಮದ್ ಸಿರಾಜ್ (Mohammed Siraj) ಈ ಟೆಸ್ಟ್ ಪಂದ್ಯದಲ್ಲಿ ಆಡುವ ಸಾಧ್ಯತೆ ಕಡಿಮೆ ಎಂದು ವರದಿಯಾಗಿದೆ. ಸಿರಾಜ್ ಪ್ರಸ್ತುತ ಗಾಯದಿಂದ ಬಳಲುತ್ತಿದ್ದು, ಚೇತರಿಕೆಗೆ ಸಮಯಬೇಕಾಗಿರುವುದರಿಂದ ಅವರು ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದು.

ಐಪಿಎಲ್ 2026 ರ ಫೈನಲ್ ಸಮಯದಲ್ಲಿ ಸಿರಾಜ್ ಗಾಯಗೊಂಡಿದ್ದರು. ಆದರೆ ಇದರ ಹೊರತಾಗಿಯೂ ಸಿರಾಜ್ ಫೈನಲ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರಯ. ಸಿರಾಜ್ ಬಲ ಭುಜದ ಗಾಯದಿಂದ ಬಳಲುತ್ತಿದ್ದು, ಬೌಲಿಂಗ್ ಮಾಡುವಾಗ ನೋವು ಅನುಭವಿಸುತ್ತಿದ್ದರು. ಈಗ, ನ್ಯೂ ಚಂಡೀಗಢ ಟೆಸ್ಟ್‌ನಲ್ಲಿ ಸಿರಾಜ್ ಭಾಗವಹಿಸುವುದು ಅನುಮಾನ ಎಂಬ ವರದಿಯಾಗಿದೆ. ಆದಾಗ್ಯೂ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಸಿರಾಜ್ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಆ ಪರೀಕ್ಷೆಯಲ್ಲಿ ಸಿರಾಜ್ ಪಾಸಾದರೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪಂಜಾಬ್‌ ಬೌಲರ್​ಗೆ ಜಾಕ್​ಪಾಟ್

ಒಂದು ವೇಳೆ ಸಿರಾಜ್ ಆಡಲು ಅನರ್ಹ ಎಂಬ ಫಲಿತಾಂಶ ಬಂದರೆ, ಅವರ ಬದಲಿಗೆ ವೇಗದ ಬೌಲರ್ ಗುರ್ನೂರ್ ಬ್ರಾರ್ ತಂಡದಲ್ಲಿ ಆಡಬಹುದು ಎಂಬ ವರದಿಗಳಿವೆ. ಪಂಜಾಬ್‌ನ ಗುರ್ನೂರ್ ಬ್ರಾರ್ ದೇಶೀಯ ಕ್ರಿಕೆಟ್‌ನಲ್ಲಿ ಸರಾಸರಿ ಪ್ರದರ್ಶನ ನೀಡಿದ ಹೊರತಾಗಿಯೂ ಅವರನ್ನು ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿದೆ. ಬ್ರಾರ್ ಪಂಜಾಬ್ ಪರ ಇದುವರೆಗೆ 18 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 52 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಒಂದು ಇನ್ನಿಂಗ್ಸ್‌ನಲ್ಲಿ ಒಮ್ಮೆ ಐದು ವಿಕೆಟ್‌ಗಳನ್ನು ಮತ್ತು ಮೂರು ಬಾರಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ. ಬ್ರಾರ್ 2025-26 ರ ರಣಜಿ ಟ್ರೋಫಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ.

ಆಕಿಬ್ ನಬಿಗೂ ಇದೇ ಅವಕಾಶ

ಗಾಯದ ಕಾರಣದಿಂದಾಗಿ ಮೊಹಮ್ಮದ್ ಸಿರಾಜ್ ಅಫ್ಘಾನಿಸ್ತಾನ ಟೆಸ್ಟ್ ಪಂದ್ಯದಿಂದ ಹೊರಗುಳಿದರೆ, ಅವರ ಸ್ಥಾನವನ್ನು ತುಂಬುವ ಅವಕಾಶ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಆಕಿಬ್ ನಬಿಗೂ ಇದೆ. ಕಳೆದ ರಣಜಿ ಟ್ರೋಫಿಯಲ್ಲಿ 60 ವಿಕೆಟ್‌ ಉರುಳಿಸಿದ್ದ ನಬಿ, ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಇದರ ಹೊರತಾಗಿಯೂ, ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಆದರೆ ಮಂಗಳವಾರ ಅವರನ್ನು ಮೀಸಲು ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಅವರಿಗೂ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳಿವೆ.

IND vs AFG: ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

ಭಾರತ-ಅಫ್ಘಾನಿಸ್ತಾನ ಸರಣಿ

  • ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ನಡೆಯಲಿದೆ.
  • ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜೂನ್ 13 ರಂದು ಧರ್ಮಶಾಲಾದಲ್ಲಿ ನಡೆಯಲಿದೆ.
  • ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದಲ್ಲಿ ನಡೆಯಲಿದೆ.
  • ಮೂರನೇ ಏಕದಿನ ಪಂದ್ಯ ಜೂನ್ 20 ರಂದು ಚೆನ್ನೈನಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಹಗಲು-ರಾತ್ರಿ ಪಂದ್ಯಗಳಾಗಿರುತ್ತವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ