
ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಲಿದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಆದಾಗ್ಯೂ ಈ ಸರಣಿಯಲ್ಲಿ ಕೊಹ್ಲಿ (Virat Kohlli) ಆಡುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಕೊಹ್ಲಿ ಜೊತೆಗೆ ರೋಹಿತ್ ಶರ್ಮಾ ಆಡುವುದು ಸಹ ಅನುಮಾನ ಎನ್ನಲಾಗುತ್ತಿದೆ. ಹೀಗಾಗಿ ಈ ಇಬ್ಬರು ದಿಗ್ಗಜರ ಅನುಪಸ್ಥಿತಿಯಲ್ಲಿ ಯುವ ಟೀಂ ಇಂಡಿಯಾ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಇಲ್ಲಿಯವರೆಗೆ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ಟೀಂ ಇಂಡಿಯಾ ಮೂರರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದೆ. ಅಂದರೆ ಅಫ್ಘಾನಿಸ್ತಾನ ಇದುವರೆಗೆ ಭಾರತದ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ.
ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಪ್ರತಿಯೊಂದು ಪಂದ್ಯವೂ ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿವೆ. ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿಧ ಚಾನೆಲ್ಗಳಲ್ಲಿ ವೀಕ್ಷಿಸಬಹುದಾಗಿದೆ. ಹಾಗೆಯೇ ಹಾಟ್ಸ್ಟಾರ್ನಲ್ಲೂ ನೇರಪ್ರಸಾರವಿರಲಿದೆ.
IND vs AFG: ಏಕದಿನ ಸರಣಿಯಿಂದ ಕೊಹ್ಲಿ ಔಟ್..! ಬದಲಿ ಆಟಗಾರನನ್ನು ಘೋಷಿಸಿದ ಬಿಸಿಸಿಐ
ಏಕದಿನ ಸರಣಿಗೆ ಟೀಂ ಇಂಡಿಯಾ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.
ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:53 pm, Mon, 8 June 26