AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಟೀಮ್ ಇಂಡಿಯಾ

IND vs AFG: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿರುವ ಟೀಮ್ ಇಂಡಿಯಾ ದಾಂಡಿಗರು ಭರ್ಜರಿ ಬ್ಯಾಟಿಂಗ್​ ಪ್ರದರ್ಶಿಸಿ ಮೊದಲ ಇನಿಂಗ್ಸ್​ ಬೃಹತ್ ಮೊತ್ತ ಪೇರಿಸಿದೆ.

IND vs AFG: ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಟೀಮ್ ಇಂಡಿಯಾ
Team India Image Credit source: BCCI
ಝಾಹಿರ್ ಯೂಸುಫ್
|

Updated on:Jun 07, 2026 | 2:19 PM

Share

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಿಂದಲೇ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಈ ಜೋಡಿಯು ಮೊದಲ ವಿಕೆಟ್​ಗೆ 41 ರನ್​ಗಳ ಜೊತೆಯಾಟವಾಡಿದ್ದರು. ಈ ಹಂತದಲ್ಲಿ 24 ರನ್​ಗಳಿಸಿದ್ದ ಜೈಸ್ವಾಲ್ ವಿಕೆಟ್ ಕೀಪರ್​ಗೆ ಕ್ಯಾಚಿತ್ತು ನಿರ್ಗಮಿಸಿದರು.

ಆ ಬಳಿಕ ಜೊತೆಗೂಡಿದ ಕೆಎಲ್ ರಾಹುಲ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ನಡುವೆ 104 ಎಸೆತಗಳಲ್ಲಿ 81 ರನ್ ಬಾರಿಸಿದ ಸಾಯಿ ಸುದರ್ಶನ್ ಬಿರುಸಿನ ಬ್ಯಾಟಿಂಗ್​ಗೆ ಮುಂದಾಗಿ ಕ್ಯಾಚ್ ನೀಡಿದರು.

ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ಕೆಎಲ್ ರಾಹುಲ್ 165 ಎಸೆತಗಳಲ್ಲಿ 11 ಫೋರ್​ಗಳೊಂದಿಗೆ ಶತಕ ಸಿಡಿಸಿದರು. ಅದರೆ ಶತಕದ ಬೆನ್ನಲ್ಲೇ ರಾಹಲ್ (100) ಕೂಡ ಕ್ಯಾಚ್ ನೀಡಿ ನಿರ್ಗಮಿಸಿದರು.

ರಾಹುಲ್ ನಿ್ರ್ಗಮನದ ಬಳಿಕ ಇನಿಂಗ್ಸ್ ಕಟ್ಟುವ ಜವಾಬ್ದಾರಿಯನ್ನು ಶುಭ್​​ಮನ್ ಗಿಲ್ ಹಾಗೂ ರಿಷಭ್ ಪಂತ್ ಹೆಗಲೇರಿಸಿಕೊಂಡರು. ಅದರಂತೆ ಗಿಲ್ 138 ಎಸೆತಗಳಲ್ಲಿ ಸೆಂಚುರಿ ಪೂರೈಸಿದರೆ, ರಿಷಭ್ ಪಂತ್ 70 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು.

ಆ ಬಳಿಕ ಬಂದ ವಾಅಷಿಂಗ್ಟನ್ ಸುಂದರ್ ಅಜೇಯ 52 ರನ್ ಬಾರಿಸಿದರು.  ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 8 ವಿಕೆಟ್ ಕಳೆದುಕೊಂಡು 564 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ.

ಟೀಮ್ ಇಂಡಿಯಾ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರರು:

  • ಶುಭ್​ಮನ್ ಗಿಲ್-126
  • ಕೆಎಲ್ ರಾಹುಲ್-100
  • ಸಾಯಿ ಸುದರ್ಶನ್- 81
  • ರಿಷಭ್ ಪಂತ್- 81
  • ವಾಷಿಂಗ್ಟನ್ ಸುಂದರ್- 52

ಅಫ್ಘಾನಿಸ್ತಾನ್ ಪರ ಉತ್ತಮ ದಾಳಿ ಸಂಘಟಿಸಿದ ಮೊಹಮ್ಮದ್ ಸಲೀಮ್ 27 ಓವರ್​ಗಳಲ್ಲಿ 140 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಮಾನವ್ ಸುತಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ವಿಶ್ವ ದಾಖಲೆ: ಕೇವಲ 5 ಎಸೆತಗಳಲ್ಲಿ ಮುಗಿದ ಟಿ20 ಪಂದ್ಯ

ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ಸೇದಿಕುಲ್ಲಾ ಅಟಲ್, ರಹಮಾನುಲ್ಲಾ ಗುರ್ಬಾಝ್, ಅಬ್ದುಲ್ ಮಲಿಕ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಫ್ಸರ್ ಝಜೈ(ವಿಕೆಟ್ ಕೀಪರ್), ಅಝ್ಮತುಲ್ಲಾ ಒಮರ್ಝಾಹಿ, ಶರಫುದ್ದೀನ್ ಅಶ್ರಫ್, ನಂಗಿಯಾಲೈ ಖರೋಟಿ, ಝಿಯಾವುರ್ ರಹಮಾನ್ ಶರೀಫಿ, ಮೊಹಮ್ಮದ್ ಸಲೀಮ್.

Published On - 1:43 pm, Sun, 7 June 26

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!