AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಅಫ್ಘಾನಿಸ್ತಾನ್ ಟಿ20 ಸರಣಿ ವೇಳಾಪಟ್ಟಿ ಇಲ್ಲಿದೆ

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿದೆ. ಈ ಸರಣಿಯ ದ್ವಿತೀಯ ಪಂದ್ಯ ಸೆಪ್ಟೆಂಬರ್ 15 ರಂದು ಹಾಗೂ ತೃತೀಯ ಪಂದ್ಯ ಸೆಪ್ಟೆಂಬರ್ 17 ರಂದು ಜರುಗಲಿದೆ. ಇನ್ನು ಈ ಸರಣಿಯ ಎಲ್ಲಾ ಪಂದ್ಯಗಳಿಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಭಾರತ vs ಅಫ್ಘಾನಿಸ್ತಾನ್ ಟಿ20 ಸರಣಿ ವೇಳಾಪಟ್ಟಿ ಇಲ್ಲಿದೆ
ಭಾರತ Vs ಅಫ್ಘಾನಿಸ್ತಾನ್Image Credit source: x.com
ಝಾಹಿರ್ ಯೂಸುಫ್
|

Updated on: Sep 12, 2026 | 7:31 AM

Share

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಮ್ಯಾಚ್​ಗಳ ಟಿ20 ಸರಣಿಯು ನಾಳೆಯಿಂದ (ಸೆ.13) ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಸರಣಿಯನ್ನು ಆಯೋಜಿಸುತ್ತಿರುವುದು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ಎಂಬುದು ವಿಶೇಷ. ಅಂದರೆ ಇದು ಅಫ್ಘಾನ್ ಪಾಲಿಗೆ ತವರು ಸರಣಿ. ಈ ಸರಣಿಯ ವೇಳಾಪಟ್ಟಿ ಮತ್ತು ತಂಡಗಳು ಈ ಕೆಳಗಿನಂತಿದೆ…

ಪಂದ್ಯಗಳ ವೇಳಾಪಟ್ಟಿ:

  1. ಮೊದಲ ಟಿ20 ಪಂದ್ಯ: ಸೆಪ್ಟೆಂಬರ್ 13, ಭಾನುವಾರ (ಅರುಣ್ ಜೇಟ್ಲಿ ಸ್ಟೇಡಿಯಂ, ನವದೆಹಲಿ)
  2. ಎರಡನೇ ಟಿ20 ಪಂದ್ಯ: ಸೆಪ್ಟೆಂಬರ್ 15, ಮಂಗಳವಾರ (ಅರುಣ್ ಜೇಟ್ಲಿ ಸ್ಟೇಡಿಯಂ, ನವದೆಹಲಿ)
  3. ಮೂರನೇ ಟಿ20 ಪಂದ್ಯ: ಸೆಪ್ಟೆಂಬರ್ 17, ಗುರುವಾರ (ಅರುಣ್ ಜೇಟ್ಲಿ ಸ್ಟೇಡಿಯಂ, ನವದೆಹಲಿ)

ಎಲ್ಲಾ ಮೂರು ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಪ್ರಕ್ರಿಯೆ 6:30ಕ್ಕೆ ನಡೆಯಲಿದೆ.

ಪಿಚ್ ಮತ್ತು ಟಾಸ್ ಆಯ್ಕೆ:

ದೆಹಲಿಯ ಅರುಣ್ ಜೇಟ್ಲಿ ಮೈದಾನವು ಸಾಮಾನ್ಯವಾಗಿ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡುತ್ತದೆ. ಸಣ್ಣ ಬೌಂಡರಿ ಇರುವುದರಿಂದ ರನ್ ಮಳೆ ಹರಿಯುವ ಸಾಧ್ಯತೆ ದಟ್ಟವಾಗಿದೆ. ಪಂದ್ಯಗಳು ರಾತ್ರಿ ನಡೆಯುವುದರಿಂದ ಇಬ್ಬನಿ ಪ್ರಮುಖ ಪಾತ್ರ ವಹಿಸಲಿದ್ದು, ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

ಉಭಯ ತಂಡಗಳು:

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: ಟೀಮ್ ಇಂಡಿಯಾದ ಹೊಸ ಪ್ಲಾನ್: ಅಸಲಿ ಸವಾಲು ಎತ್ತಿ ತೋರಿಸಿದ ಮಾಜಿ ಕ್ರಿಕೆಟಿಗ!

ಅಫ್ಘಾನಿಸ್ತಾನ್ ಟಿ20 ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ನೂರ್ ರಹಮಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್​ಝಾಹಿ, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗ್ಯಾಲ್ ಖರೋತಿ, ನೂರ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಫಝಲ್ ​ಹಕ್​ ಫಾರೂಖಿ, ಅಬ್ದುಲ್ಲಾ ಅಹ್ಮದ್​ಝಾಹಿ, ನವೀನ್-ಉಲ್-ಹಕ್.

Follow Us