AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

India vs Afghanistan: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿಗಾಗಿ ವೇದಿಕೆ ಸಿದ್ಧವಾಗಿದೆ. ಜೂನ್ 6 ರಿಂದ ಭಾರತದಲ್ಲಿ ಶುರುವಾಗಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 4 ಪಂದ್ಯಗಳನ್ನಾಡಲಿದೆ. ಈ ನಾಲ್ಕು ಮ್ಯಾಚ್​ಗಳಲ್ಲಿ ಒಂದು ಪಂದ್ಯವು ಟೆಸ್ಟ್​. ಅಂದರೆ 8 ವರ್ಷಗಳ ಬಳಿಕ ಅಫ್ಘಾನಿಸ್ತಾನ್ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಪಂದ್ಯವಾಡಲು ಸಜ್ಜಾಗಿದೆ.

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
Team India Image Credit source: TOI
ಝಾಹಿರ್ ಯೂಸುಫ್
|

Updated on:Jun 02, 2026 | 2:09 PM

Share

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆಬಿದ್ದಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಇತ್ತ ಐಪಿಎಲ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಮುಂದಿನ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿ ಶುರುವಾಗಲಿದೆ.

ಈ ಸರಣಿಯಲ್ಲಿ 1 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆದರೆ, ಆ ಬಳಿಕ ಮೂರು ಮ್ಯಾಚ್​ಗಳ ಏಕದಿನ ಸರಣಿ ನಡೆಯಲಿದೆ. ಈ ಪಂದ್ಯಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಭಾರತ vs ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

ದಿನಾಂಕ

ಸಮಯ

ಪಂದ್ಯ

ಸ್ವರೂಪ

ಸ್ಥಳ

ಜೂನ್ 6

ಬೆಳಿಗ್ಗೆ 9:30

ಭಾರತ vs ಅಫ್ಘಾನಿಸ್ತಾನ್

ಟೆಸ್ಟ್

ನ್ಯೂ ಚಂಡೀಗಢ್

ಜೂನ್ 14

ಮಧ್ಯಾಹ್ನ 1:30

ಭಾರತ vs ಅಫ್ಘಾನಿಸ್ತಾನ್

ಏಕದಿನ

ಧರ್ಮಶಾಲಾ

ಜೂನ್ 17

ಮಧ್ಯಾಹ್ನ 1:30

ಭಾರತ vs ಅಫ್ಘಾನಿಸ್ತಾನ್

ಏಕದಿನ 

ಲಕ್ನೋ

ಜೂನ್ 20

ಮಧ್ಯಾಹ್ನ 1:30

ಭಾರತ vs ಅಫ್ಘಾನಿಸ್ತಾನ್

ಏಕದಿನ 

ಚೆನ್ನೈ

8 ವರ್ಷಗಳ ಬಳಿಕ ಟೆಸ್ಟ್:

ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು.

ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯಲಿರುವುದು ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ.

ಅಂದರೆ ಇದೇ ಮೊದಲ ಬಾರಿಗೆ ಚಂಡೀಗಢ್​ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲಿದೆ. ಮುಲ್ಲನ್​ಪುರ್​ನಲ್ಲಿರುವ ಎಂವೈಎಸ್ ಸ್ಟೇಡಿಯಂನಲ್ಲಿ ಈವರೆಗೆ ಐಪಿಎಲ್ ಪಂದ್ಯಗಳು, ಒಂದು ಪುರುಷರ ಟಿ20 ಪಂದ್ಯ ಮತ್ತು ಎರಡು ಮಹಿಳಾ ಏಕದಿನ ಪಂದ್ಯಗಳನ್ನು ಆಯೋಜಿಸಲಾಗಿದೆ. ಇದೀಗ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯಕ್ಕೆ ಆತಿಥ್ಯವಹಿಸಲು ಸಜ್ಜಾಗಿದೆ.

ಇದನ್ನೂ ಓದಿ: ಟೆಸ್ಟ್​ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ..!

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಂಬ್ಯಾಕ್:

ಜೂನ್ 14 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯಲಿದ್ದಾರೆ. ಅಂದರೆ ಈ ಇಬ್ಬರು ದಿಗ್ಗಜರು ಟೀಮ್ ಇಂಡಿಯಾ ಪರ ಕೊನೆಯ ಬಾರಿ ಆಡಿದ್ದು ಅಕ್ಟೋಬರ್​ನಲ್ಲಿ. ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯ ಮೂಲಕ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

Published On - 2:06 pm, Tue, 2 June 26

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ