
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ಗೆ ತೆರೆಬಿದ್ದಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಇತ್ತ ಐಪಿಎಲ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಮುಂದಿನ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿ ಶುರುವಾಗಲಿದೆ.
ಈ ಸರಣಿಯಲ್ಲಿ 1 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆದರೆ, ಆ ಬಳಿಕ ಮೂರು ಮ್ಯಾಚ್ಗಳ ಏಕದಿನ ಸರಣಿ ನಡೆಯಲಿದೆ. ಈ ಪಂದ್ಯಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
ದಿನಾಂಕ |
ಸಮಯ |
ಪಂದ್ಯ |
ಸ್ವರೂಪ |
ಸ್ಥಳ |
ಜೂನ್ 6 |
ಬೆಳಿಗ್ಗೆ 9:30 |
ಭಾರತ vs ಅಫ್ಘಾನಿಸ್ತಾನ್ |
ಟೆಸ್ಟ್ |
ನ್ಯೂ ಚಂಡೀಗಢ್ |
ಜೂನ್ 14 |
ಮಧ್ಯಾಹ್ನ 1:30 |
ಭಾರತ vs ಅಫ್ಘಾನಿಸ್ತಾನ್ |
ಏಕದಿನ |
ಧರ್ಮಶಾಲಾ |
ಜೂನ್ 17 |
ಮಧ್ಯಾಹ್ನ 1:30 |
ಭಾರತ vs ಅಫ್ಘಾನಿಸ್ತಾನ್ |
ಏಕದಿನ |
ಲಕ್ನೋ |
ಜೂನ್ 20 |
ಮಧ್ಯಾಹ್ನ 1:30 |
ಭಾರತ vs ಅಫ್ಘಾನಿಸ್ತಾನ್ |
ಏಕದಿನ |
ಚೆನ್ನೈ |
ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್ಗಳ ಜಯ ಸಾಧಿಸಿತ್ತು.
ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯಲಿರುವುದು ಚಂಡೀಗಢ್ನ ಮುಲ್ಲನ್ಪುರ್ ಸ್ಟೇಡಿಯಂನಲ್ಲಿ.
ಅಂದರೆ ಇದೇ ಮೊದಲ ಬಾರಿಗೆ ಚಂಡೀಗಢ್ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲಿದೆ. ಮುಲ್ಲನ್ಪುರ್ನಲ್ಲಿರುವ ಎಂವೈಎಸ್ ಸ್ಟೇಡಿಯಂನಲ್ಲಿ ಈವರೆಗೆ ಐಪಿಎಲ್ ಪಂದ್ಯಗಳು, ಒಂದು ಪುರುಷರ ಟಿ20 ಪಂದ್ಯ ಮತ್ತು ಎರಡು ಮಹಿಳಾ ಏಕದಿನ ಪಂದ್ಯಗಳನ್ನು ಆಯೋಜಿಸಲಾಗಿದೆ. ಇದೀಗ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯಕ್ಕೆ ಆತಿಥ್ಯವಹಿಸಲು ಸಜ್ಜಾಗಿದೆ.
ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್ನಲ್ಲಿ ಮಹತ್ವದ ಬದಲಾವಣೆ..!
ಜೂನ್ 14 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯಲಿದ್ದಾರೆ. ಅಂದರೆ ಈ ಇಬ್ಬರು ದಿಗ್ಗಜರು ಟೀಮ್ ಇಂಡಿಯಾ ಪರ ಕೊನೆಯ ಬಾರಿ ಆಡಿದ್ದು ಅಕ್ಟೋಬರ್ನಲ್ಲಿ. ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯ ಮೂಲಕ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
Published On - 2:06 pm, Tue, 2 June 26