IND vs AFG: 7+4.. ಟೀಂ ಇಂಡಿಯಾದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರರದ್ದೇ ಪಾರುಪತ್ಯ

India vs Afghanistan Series: ಭಾರತ-ಅಫ್ಘಾನಿಸ್ತಾನ ಸರಣಿಗೆ ಶುಭ್​ಮನ್ ಗಿಲ್ ನೇತೃತ್ವದ ಭಾರತ ತಂಡ ಪ್ರಕಟಗೊಂಡಿದೆ. ಈ ತಂಡದಲ್ಲಿ ಗುಜರಾತ್ ಟೈಟಾನ್ಸ್‌ನ 7 ಆಟಗಾರರು ಸ್ಥಾನ ಪಡೆದಿರುವುದು ಅಚ್ಚರಿ ಮೂಡಿಸಿದ್ದು, ಶುಭ್​ಮನ್ ಗಿಲ್ ವಿರುದ್ಧ ಸ್ವಜನಪಕ್ಷಪಾತದ ಆರೋಪ ಕೇಳಿಬಂದಿದೆ. ಆದರೆ, ಬಿಸಿಸಿಐ ವೈಯಕ್ತಿಕ ಪ್ರದರ್ಶನದ ಆಧಾರದ ಮೇಲೆ ಆಟಗಾರರನ್ನು ಆಯ್ಕೆ ಮಾಡಿದೆ ಎಂಬುದರಲ್ಲಿ ಸಂದೇಹವಿಲ್ಲ.

IND vs AFG: 7+4.. ಟೀಂ ಇಂಡಿಯಾದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರರದ್ದೇ ಪಾರುಪತ್ಯ
Gujarat Titans

Updated on: May 20, 2026 | 5:06 PM

ಜೂನ್ 6 ರಿಂದ ಭಾರತ ಹಾಗೂ ಅಫ್ಘಾನಿಸ್ತಾನ (IND vs AFG) ನಡುವೆ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲಿಗೆ ಟೆಸ್ಟ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಈ ಎರಡೂ ಸರಣಿಗಳಿಗಾಗಿ ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಎಂದಿನಂತೆ ಈ ಎರಡು ಸರಣಿಗಳಲ್ಲಿ ಶುಭ್​ಮನ್ ಗಿಲ್ (Shubman Gill) ಭಾರತ ತಂಡವನ್ನು ಮುನ್ನಡೆಸಿದರೆ, ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಉಪನಾಯಕನಾಗಿದ್ದರೆ, ಏಕದಿನ ತಂಡಕ್ಕೆ ಶ್ರೇಯಸ್ ಅಯ್ಯರ್ ಉಪನಾಯಕನಾಗಿದ್ದಾರೆ. ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಅಫ್ಘಾನ್ ವಿರುದ್ಧದ ಸರಣಿಗೆ ಭಾರತದ ಏಕದಿನ ಹಾಗೂ ಟೆಸ್ಟ್ ತಂಡದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡದ 7 ಆಟಗಾರರು ಸ್ಥಾನ ಪಡೆದಿದ್ದಾರೆ.

ಗುಜರಾತ್ ತಂಡದ 7 ಆಟಗಾರರು ಆಯ್ಕೆ

ಕಾಕತಾಳೀಯವೆಂಬಂತೆ ಭಾರತ ತಂಡವನ್ನು ಮುನ್ನಡೆಸುತ್ತಿರುವ ಶುಭ್​ಮನ್ ಗಿಲ್ ಅವರೇ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದಾರೆ. ಹೀಗಾಗಿ ಗುಜರಾತ್ ತಂಡದಿಂದ 7 ಆಟಗಾರರು ಭಾರತ ತಂಡಕ್ಕೆ ಆಯ್ಕೆಯಾಗಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ. ಮತ್ತೊಂದು ಗಮನಿಸಬೇಕಾದ ಅಂಶವೆಂದರೆ ಗುಜರಾತ್ ಟೈಟಾನ್ಸ್ ತಂಡದಿಂದ 7 ಆಟಗಾರರು ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರೆ, ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರುವ ನಾಲ್ಕು ಆಟಗಾರರಿಗೆ ಏಕದಿನ ತಂಡದಲ್ಲೂ ಸ್ಥಾನ ಸಿಕ್ಕಿದೆ. ಒಂದೇ ಐಪಿಎಲ್ ತಂಡದಿಂದ 7 ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವುದನ್ನು ಗಮನಿಸಿರುವ ಕ್ರಿಕೆಟ್ ಪ್ರಿಯರು ಶುಭ್​ಮನ್ ಗಿಲ್ ಸ್ವಜನಪಕ್ಷಪಾತಿ ಎಂಬ ಆರೋಪವನ್ನು ಹೊರಿಸುತ್ತಿದ್ದಾರೆ.

ಆದರೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವ ಗುಜರಾತ್ ಟೈಟಾನ್ಸ್ ತಂಡದ 7 ಆಟಗಾರರಲ್ಲಿ ಐದು ಆಟಗಾರರು ಈ ಮೊದಲೇ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. ಉಳಿದಂತೆ ಇಬ್ಬರು ಆಟಗಾರರಿಗೆ ಮೊದಲ ಬಾರಿಗೆ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ. ಹೀಗಾಗಿ ಆರೋಪಗಳು ಏನೇ ಇದ್ದರೂ, ಪ್ರತಿಯೊಬ್ಬ ಆಟಗಾರನ ವೈಯಕ್ತಿಕ ಪ್ರದರ್ಶನವನ್ನು ಗಮನಿಸಿಯೇ ಬಿಸಿಸಿಐ ಅವರನ್ನು ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಿದೆ. ಗುಜರಾತ್ ತಂಡದಿಂದ ಆಯ್ಕೆಯಾಗಿರುವ ಈ 7 ಆಟಗಾರರಲ್ಲಿ ಎಷ್ಟು ಮಂದಿ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

IND vs AFG: ರಿಷಭ್ ಪಂತ್​ಗೆ ಡಬಲ್ ಶಾಕ್ ನೀಡಿದ ಬಿಸಿಸಿಐ

ಭಾರತ ಟೆಸ್ಟ್ ತಂಡದಲ್ಲಿರುವ 7 ಗುಜರಾತ್ ಆಟಗಾರರು

  • ಶುಭ್​ಮನ್ ಗಿಲ್ (ನಾಯಕ)
  • ಸಾಯಿ ಸುದರ್ಶನ್
  • ವಾಷಿಂಗ್ಟನ್ ಸುಂದರ್
  • ಮೊಹಮ್ಮದ್ ಸಿರಾಜ್
  • ಪ್ರಸಿದ್ಧ್ ಕೃಷ್ಣ
  • ಮಾನವ್ ಸುತಾರ್
  • ಗುರ್ನೂರ್ ಬ್ರಾರ್

ಏಕದಿನ ತಂಡದಲ್ಲಿರುವ 3 ಗುಜರಾತ್ ಆಟಗಾರರು

  • ಶುಭಮನ್ ಗಿಲ್ (ನಾಯಕ)
  • ವಾಷಿಂಗ್ಟನ್ ಸುಂದರ್
  • ಗುರ್ನೂರ್ ಬ್ರಾರ್
  • ಪ್ರಸಿದ್ಧ್ ಕೃಷ್ಣ

ಟೆಸ್ಟ್ ಪಂದ್ಯಕ್ಕೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಧ್ರುವ್ ಜುರೆಲ್.

ಏಕದಿನ ಸರಣಿಗೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್ ಮತ್ತು ಹರ್ಷ್ ದುಬೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Wed, 20 May 26

Follow Us