Team India: ಟಿ20 ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಔಟ್

| Updated By: ಝಾಹಿರ್ ಯೂಸುಫ್

Updated on: Dec 24, 2023 | 2:21 PM

India vs Afghanistan: ಭಾರತ-ಅಫ್ಘಾನ್ ನಡುವಣ ಟಿ20 ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲ ಪಂದ್ಯಕ್ಕೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಆತಿಥ್ಯವಹಿಸಿದರೆ, 2ನೇ ಪಂದ್ಯವು ಜನವರಿ 14 ರಂದು ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

Team India: ಟಿ20 ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಔಟ್
Team India
Follow us on

ಭಾರತ ತಂಡದ ಈ ವರ್ಷದ ಸೀಮಿತ ಓವರ್​ಗಳ ಸರಣಿ ಪೂರ್ಣಗೊಂಡಿದೆ. ಇದೀಗ ಟೀಮ್ ಇಂಡಿಯಾ (Team India)  ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿಯ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಹೊಸ ವರ್ಷದಲ್ಲಿ ಟಿ20 ಸರಣಿ ಆಡಲಿದೆ. ಆದರೆ ವರ್ಷಾರಂಭದಲ್ಲಿ ನಡೆಯಲಿರುವ ಮೊದಲ ಸೀಮಿತ ಓವರ್​ಗಳ ಸರಣಿಗೆ ಟೀಮ್ ಇಂಡಿಯಾಗೆ ಇಬ್ಬರು ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

ಭಾರತ-ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 11, 2024 ರಿಂದ ಶುರುವಾಗಲಿದೆ. ಆದರೆ ಈ ಸರಣಿಗೆ ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಲಭ್ಯರಾಗಲಿದ್ದಾರೆ. ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಪಾಂಡ್ಯ ಇದೀಗ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರು ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ.

ಇನ್ನು ಈ ಸರಣಿಗೆ ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಕೂಡ ಅಲಭ್ಯರಾಗಲಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಸೂರ್ಯಕುಮಾರ್ ಯಾದವ್ ಅವರ ಮೊಣಕಾಲಿಗೆ ಗಾಯವಾಗಿತ್ತು. ಇದೀಗ ವಿಶ್ರಾಂತಿಯಲ್ಲಿರುವ ಸೂರ್ಯ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಇನ್ನು ರುತುರಾಜ್ ಗಾಯಕ್ವಾಡ್ ಕೂಡ ಗಾಯಗೊಂಡಿದ್ದು, ಜನವರಿ 11 ರೊಳಗೆ ಫಿಟ್​ನೆಸ್​ ಸಾಧಿಸಿದರೆ ಅವರು ಟೀಮ್ ಇಂಡಿಯಾ ಪರ ಕಾಣಿಸಿಕೊಳ್ಳಲಿದ್ದಾರೆ.

ಭಾರತ-ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

ಭಾರತ-ಅಫ್ಘಾನ್ ನಡುವಣ ಟಿ20 ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲ ಪಂದ್ಯಕ್ಕೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಆತಿಥ್ಯವಹಿಸಿದರೆ, 2ನೇ ಪಂದ್ಯವು ಜನವರಿ 14 ರಂದು ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಗೆಯೇ 3ನೇ ಟಿ20 ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

  • ಜನವರಿ 11- ಮೊದಲ ಟಿ20 ಪಂದ್ಯ (ಮೊಹಾಲಿ)
  • ಜನವರಿ 14- ಎರಡನೇ ಟಿ20 ಪಂದ್ಯ (ಇಂದೋರ್)
  • ಜನವರಿ 17- ಮೂರನೇ ಟಿ20 ಪಂದ್ಯ (ಬೆಂಗಳೂರು)

ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ:

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 2 ಪಂದ್ಯಗಳನ್ನಾಡಲಿದ್ದು, ಮೊದಲ ಪಂದ್ಯಕ್ಕೆ ಸೆಂಚುರಿಯನ್​ನ ಸೂಪರ್​ಸ್ಪೋರ್ಟ್​ ಪಾರ್ಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಜನವರಿ 3 ರಿಂದ ಶುರುವಾಗಲಿರುವ 2ನೇ ಪಂದ್ಯವು ಕೇಪ್​ಟೌನ್​ನ ನ್ಯೂಲ್ಯಾಂಡ್ ಮೈದಾನದಲ್ಲಿ ನಡೆಯಲಿದೆ.

ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
  • ಜನವರಿ 3 ರಿಂದ- ಎರಡನೇ ಟೆಸ್ಟ್ ಪಂದ್ಯ (ಕೇಪ್​ಟೌನ್).

 

Published On - 8:57 am, Sun, 24 December 23