AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಯುವ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

IND vs AFG: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿಯು ಜೂನ್ 6 ರಿಂದ ಶುರುವಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೆಸ್ಟ್ ಮ್ಯಾಚ್ ಅನ್ನು ಆಡಲಾಗುತ್ತಿದ್ದು, ಇದಾದ ಬಳಿಕ ಭಾರತ ತಂಡವು ಅಫ್ಘಾನಿಸ್ತಾನ್ ವಿರುದ್ಧ ಮೂರು ಮ್ಯಾಚ್​ಗಳ ಏಕದಿನ ಪಂದ್ಯಗಳನ್ನಾಡಲಿದೆ. 

IND vs AFG: ಯುವ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India Image Credit source: BCCI
ಝಾಹಿರ್ ಯೂಸುಫ್
|

Updated on:Jun 06, 2026 | 9:14 AM

Share

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯದ ಮೂಲಕ 23 ವರ್ಷದ ಯುವ ಸ್ಪಿನ್ನರ್ ಮಾನವ್ ಸುತಾರ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಮಾನವ್ ಸುತಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ಸೇದಿಕುಲ್ಲಾ ಅಟಲ್, ರಹಮಾನುಲ್ಲಾ ಗುರ್ಬಾಝ್, ಅಬ್ದುಲ್ ಮಲಿಕ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಫ್ಸರ್ ಝಜೈ(ವಿಕೆಟ್ ಕೀಪರ್), ಅಝ್ಮತುಲ್ಲಾ ಒಮಝಾಹಿ, ಶರಫುದ್ದೀನ್ ಅಶ್ರಫ್, ನಂಗಿಯಾಲೈ ಖರೋಟಿ, ಝಿಯಾವುರ್ ರಹಮಾನ್ ಶರೀಫಿ, ಮೊಹಮ್ಮದ್ ಶರೀಫಿ.

8 ವರ್ಷಗಳ ಬಳಿಕ ಮುಖಾಮುಖಿ:

ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಒಂದು ಟೆಸ್ಟ್ ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಅಂದಿನ ಟೀಮ್ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.

  • ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 474 ರನ್​ ಕಲೆಹಾಕಿದ್ದರು.
  • ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಅಫ್ಘಾನಿಸ್ತಾನ್ ತಂಡ 109 ರನ್​ಗಳಿಗೆ ಆಲೌಟ್ ಆಗಿದ್ದರು.
  • ಟೀಮ್ ಇಂಡಿಯಾ ಫಾಲೋಆನ್ ಹೇರಿದ ಹಿನ್ನಲೆ ಅಫ್ಘಾನಿಸ್ತಾನ್ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು.
  • ದ್ವಿತೀಯ ಇನಿಂಗ್ಸ್​ನಲ್ಲಿ ಅಫ್ಘಾನಿಸ್ತಾನ್ ತಂಡವು ಕೇವಲ 103 ರನ್​ಗಳಿಸಿ ಆಲೌಟ್ ಆಯಿತು.
  • ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಭರ್ಜರಿ ಜಯ ಸಾಧಿಸಿದ್ದರು.

ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಉಭಯ ತಂಡಗಳು ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಈ ಬಾರಿ ಅಫ್ಘಾನ್ ಪಡೆ ಎದುರಿಸುತ್ತಿರುವುದು ಯಂಗ್ ಇಂಡಿಯಾವನ್ನು. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್, ಹರ್ಷ್ ದುಬೆ.

ಇದನ್ನೂ ಓದಿ: FIFA World cup 2026: ಫುಟ್‌ಬಾಲ್ ಆಟವನ್ನೇ ಬದಲಿಸಲಿದೆ ಹೊಸ ನಿಯಮಗಳು!

ಅಫ್ಘಾನಿಸ್ತಾನ್ ಟೆಸ್ಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಅಬ್ದುಲ್ ಮಲಿಕ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ರಹಮಾನುಲ್ಲಾ ಗುರ್ಬಾಝ್, ರಹಮಾನುಲ್ಲಾ ಝದ್ರಾನ್, ಅಫ್ಸರ್ ಝಜೈ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮಝಾಹಿ, ಶರಫುದಿನ್ ಅಶ್ರಫ್, ನಂಗಿಯಾಲೈ ಖರೋಟಿ, ಖೈಸ್ ಅಹ್ಮದ್, ಬಿಲಾಲ್ ಸಮಿ, ಜಿಯಾ ಶರೀಫಿ, ಸಲೀಂ ಸಫಿ.

Published On - 9:09 am, Sat, 6 June 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More