AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

Shubman Gill century: ಮಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಆರಂಭಿಕ ಕೆಎಲ್ ರಾಹುಲ್ ಶತಕ ಸಿಡಿಸಿದರೆ, ನಾಯಕ ಶುಭ್​ಮನ್ ಗಿಲ್ ತಮ್ಮ 11ನೇ ಟೆಸ್ಟ್ ಶತಕ ದಾಖಲಿಸಿ ಮಿಂಚಿದ್ದಾರೆ. ಗಿಲ್ ರಿಷಭ್ ಪಂತ್ ಮತ್ತು ರಾಹುಲ್ ಜೊತೆ ಪ್ರಮುಖ ಜೊತೆಯಾಟಗಳನ್ನು ಆಡಿದ್ದು, ಭಾರತ ಬೃಹತ್ ಮೊತ್ತದತ್ತ ಸಾಗುತ್ತಿದೆ.

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್
Shubman Gill
ಪೃಥ್ವಿಶಂಕರ
|

Updated on:Jun 06, 2026 | 5:53 PM

Share

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ( KL Rahul) ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ (Shubman Gill) ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1 ಸಿಕ್ಸರ್ ಸಹ ಬಾರಿಸಿದರು. ಗಿಲ್ ಈ ಶತಕದ ಜೊತೆಗೆ ರಿಷಭ್ ಪಂತ್ ಜೊತೆಗೂಡಿ 4ನೇ ವಿಕೆಟ್​ಗೆ ಶತಕದ ಜೊತೆಯಾಟವನ್ನು ಕಟ್ಟಿದರು. ಇದಕ್ಕೂ ಮುನ್ನ ಗಿಲ್, ರಾಹುಲ್ ಜೊತೆಗೂ 67 ರನ್​ಗಳ ಜೊತೆಯಾಟವನ್ನಾಡಿದ್ದರು.

ಅಜೇಯ ಶತಕ ಬಾರಿಸಿದ ಗಿಲ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 180 ರನ್​ಗಳಿಗೆ ಸಾಯಿ ಸುದರ್ಶನ್ (81) ರೂಪದಲ್ಲಿ ಎರಡನೇ ವಿಕೆಟ್ ಕಳೆದುಕೊಂಡಿತು. ಹೀಗಾಗಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ನಾಯಕ ಶುಭ್​ಮನ್ ಗಿಲ್, ಕೆಎಲ್ ರಾಹುಲ್ (100) ಅವರೊಂದಿಗೆ ಮೂರನೇ ವಿಕೆಟ್‌ಗೆ 67 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ರಾಹುಲ್ ಔಟಾದ ನಂತರ ಬಂದ ರಿಷಭ್ ಪಂತ್ ಅವರೊಂದಿಗೆ ನಾಲ್ಕನೇ ವಿಕೆಟ್‌ಗೆ ಅಜೇಯ ಶತಕದ ಪಾಲುದಾರಿಕೆಯನ್ನು ನೀಡಿದರು. ಗಿಲ್ ಅವರ ಈ ಜೊತೆಯಾಟದಿಂದಾಗಿ ತಂಡ ಬೃಹತ್ ಮೊತ್ತ ದಾಖಲಿಸಿತು.

ನಾಯಕನಾಗಿ 1000 ರನ್ ಪೂರ್ಣ

ಈ ಪಂದ್ಯದಲ್ಲಿ ಗಿಲ್ ಶತಕ ಬಾರಿಸುವುದರ ಜೊತೆಗೆ ನಾಯಕನಾಗಿ ವಿಶೇಷ ಮೈಲಿಗಲ್ಲನ್ನು ದಾಟಿದರು. ಗಿಲ್ 50 ರನ್​ಗಳ ಗಡಿ ದಾಟುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕನಾಗಿ 1,000 ರನ್‌ಗಳನ್ನು ಪೂರೈಸಿದರು. ಟೆಸ್ಟ್ ತಂಡದ ನಾಯಕನಾಗಿ ಇದುವರೆಗೆ ಒಂಬತ್ತು ಪಂದ್ಯಗಳನ್ನಾಡಿರುವ ಗಿಲ್ 15 ಇನ್ನಿಂಗ್ಸ್‌ಗಳಲ್ಲಿ 86 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 1,040 ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಈ ಅವಧಿಯಲ್ಲಿ, ಅವರು ಆರು ಶತಕಗಳು ಮತ್ತು ಒಂದು ಅರ್ಧಶತಕವನ್ನು ಬಾರಿಸಿದ್ದಾರೆ.

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಔಟ್..! ಬದಲಿ ಆಟಗಾರನನ್ನು ಘೋಷಿಸಿದ ಬಿಸಿಸಿಐ

ಗಿಲ್ ಟೆಸ್ಟ್ ವೃತ್ತಿಜೀವನ

2020 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಗಿಲ್ ಇಲ್ಲಿಯವರೆಗೆ 41 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಆಡಿರುವ 74 ಇನ್ನಿಂಗ್ಸ್‌ಗಳಲ್ಲಿ 44 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 2,930 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 11 ಶತಕಗಳು ಮತ್ತು ಎಂಟು ಅರ್ಧಶತಕಗಳು ಸೇರಿವೆ. ಟೆಸ್ಟ್​ನಲ್ಲಿ ಗಿಲ್ ಅವರ ಅತ್ಯುತ್ತಮ ಸ್ಕೋರ್ 269 ರನ್ ಆಗಿದೆ. ಹಾಗೆಯೇ ಗಿಲ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಐದು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Sat, 6 June 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More