ಐಸಿಸಿ ಏಕದಿನ ವಿಶ್ವಕಪ್ 2023 (ICC ODI World Cup) ಟೂರ್ನಿಯಲ್ಲಿ ಭಾರತ ಭರ್ಜರಿ ಶುಭಾರಂಭ ಮಾಡಿದೆ. ಭಾನುವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಕೆಎಲ್ ರಾಹುಲ್ (ಅಜೇಯ 97) ಹಾಗೂ ವಿರಾಟ್ ಕೊಹ್ಲಿ (85) 165 ರನ್ಗಳ ಜೊತೆಯಾಟ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಆತ್ಮವಿಶ್ವಾಸದಲ್ಲಿರುವ ರೋಹಿತ್ ಪಡೆ ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗಬೇಕಿದೆ. ಹಾಗಾದರೆ, ಭಾರತದ ಮುಂದಿನ ಟಾರ್ಗೆಟ್ ಯಾರು?, ಪಂದ್ಯ ಯಾವಾಗ ನಡೆಯಲಿದೆ?.
ವಿಶ್ವಕಪ್ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?
ವಿಶ್ವಕಪ್ನಲ್ಲಿ ಭಾರತದ ಮುಂದಿನ ಪಂದ್ಯ ಅಫ್ಘಾನಿಸ್ತಾನ ವಿರುದ್ಧ ನಡೆಯಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 11 ರಂದು (ಬುಧವಾರ) ನಡೆಯಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ.
36 ವರ್ಷಗಳ ದಾಖಲೆ ಉಡೀಸ್; 1992 ರ ನಂತರ ಮೊದಲ ಬಾರಿಗೆ ಈ ರೀತಿಯ ಸೋಲು ಕಂಡ ಆಸ್ಟ್ರೇಲಿಯಾ..!
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಅಜ್ಮತುಲ್ಲಾ ಒಮರ್ಜಾಯ್, ಫಜಲ್ಹಕ್ ಹಾಸನ, ಅಬ್ದುಲ್ ರಹಮಾನ್, ಇಕ್ರಂ ಅಲಿಖಿಲ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ