IND vs AUS: ಸಿರಾಜ್ ಸೇರಿದಂತೆ ನಾಲ್ವರಿಗೆ ವಿಶ್ರಾಂತಿ, ಅಶ್ವಿನ್ ವಾಪಸಾತಿ! ಇಲ್ಲಿದೆ ಪ್ಲೇಯಿಂಗ್ ಇಲೆವೆನ್

|

Updated on: Sep 22, 2023 | 2:10 PM

IND vs AUS: ಏಷ್ಯಾಕಪ್ ಗೆದ್ದ ಬಳಿಕ ಇದೀಗ ಟೀಂ ಇಂಡಿಯಾ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರೊಂದಿಗೆ ತಂಡದ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

IND vs AUS: ಸಿರಾಜ್ ಸೇರಿದಂತೆ ನಾಲ್ವರಿಗೆ ವಿಶ್ರಾಂತಿ, ಅಶ್ವಿನ್ ವಾಪಸಾತಿ! ಇಲ್ಲಿದೆ ಪ್ಲೇಯಿಂಗ್ ಇಲೆವೆನ್
ಭಾರತ- ಆಸ್ಟ್ರೇಲಿಯಾ
Follow us on

ಏಷ್ಯಾಕಪ್ ಗೆದ್ದ ಬಳಿಕ ಇದೀಗ ಟೀಂ ಇಂಡಿಯಾ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು (India vs Australia) ಎದುರಿಸುತ್ತಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರೊಂದಿಗೆ ತಂಡದ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಏಷ್ಯಾಕಪ್ ಫೈನಲ್​ನಲ್ಲಿ ವಿಕೆಟ್​ಗಳ ಬೇಟೆಯಾಡಿದ್ದ ಮೊಹಮ್ಮದ್ ಸಿರಾಜ್ (Mohammed Siraj) ಅವರನ್ನು ತಂಡದಿಂದ ಹೊರಗಿಡಲಾಗಿದೆ. ಆರ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿರುವುದು ದೊಡ್ಡ ಸುದ್ದಿಯಾಗಿದೆ. ಇವರೊಂದಿಗೆ ರುತುರಾಜ್ ಗಾಯಕ್ವಾಡ್ ಅವರನ್ನೂ ತಂಡದಲ್ಲಿ ಆಯ್ಕೆ ಮಾಡಲಾಗಿದೆ. ರೋಹಿತ್ ಶರ್ಮಾಗೆ (Rohit Sharma) ವಿಶ್ರಾಂತಿ ನೀಡಿರುವ ಕಾರಣ ಕೆಎಲ್ ರಾಹುಲ್ (KL Rahul) ಮೊದಲ ಎರಡು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾ ಕೂಡ ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಮೊದಲ ಏಕದಿನ ಪಂದ್ಯದಿಂದ ಹೊರಗಿಟ್ಟಿದೆ.

ಭಾರತ ಬೌಲಿಂಗ್ ಆಯ್ಕೆ

ಮೊಹಾಲಿ ಮೈದಾನದಲ್ಲಿ ಚೇಸ್ ಮಾಡುವುದು ಸುಲಭ ಹಾಗಾಗಿ ಮೊದಲು ಬೌಲಿಂಗ್ ಮಾಡುತ್ತೇನೆ ಎಂದು ಟಾಸ್ ಗೆದ್ದ ಕೆಎಲ್ ರಾಹುಲ್ ಹೇಳಿದ್ದಾರೆ. ಆಸ್ಟ್ರೇಲಿಯಾ ತಂಡ ವಿಶ್ವದಲ್ಲಿಯೇ ಅತ್ಯುತ್ತಮವಾಗಿದ್ದು, ಅವರ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಬಯಸುವುದಾಗಿ ರಾಹುಲ್ ಹೇಳಿದ್ದಾರೆ.

IND VS AUS, 1st ODI Live Score: ಭಾರತಕ್ಕೆ ಉತ್ತಮ ಆರಂಭ: ಮಾರ್ಷ್​ ಔಟ್

ಮೊಹಾಲಿ ಪಿಚ್

ಮೊಹಾಲಿಯ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಸಹಕಾರಿಯಾಗಿದೆ. ಹಾಗೆಯೇ ಇಲ್ಲಿ ವೇಗದ ಬೌಲರ್‌ಗಳಿಗೂ ಖಂಡಿತವಾಗಿಯೂ ಸಹಾಯ ಸಿಗುತ್ತದೆ. ಹೀಗಾಗಿ ಈ ಮೈದಾನದಲ್ಲಿ ರನ್ ಹೊಳೆಯೇ ಹರಿಯುವ ಸಾಧ್ಯತೆ ಇದೆ. ಅಲ್ಲದೆ ಇಬ್ಬನಿಯಿಂದಾಗಿ ರಾತ್ರಿಯಲ್ಲಿ ಗುರಿ ಬೆನ್ನಟ್ಟುವುದು ಸುಲಭವಾಗಲಿದೆ.

ಟೀಂ ಇಂಡಿಯಾದ ಹಾದಿ ಸುಲಭವಲ್ಲ

ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಹಾದಿ ಸುಲಭವಲ್ಲ. ಏಕೆಂದರೆ ಈ ವರ್ಷ ಮಾರ್ಚ್‌ನಲ್ಲಿ ನಡೆದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಟೀಂ ಇಂಡಿಯಾವನ್ನು ಸೋಲಿಸಿತ್ತು. ವಿರಾಟ್-ರೋಹಿತ್ ಕೂಡ ಆ ಸರಣಿಯಲ್ಲಿ ತಂಡದ ಸೋಲನ್ನು ತಡೆಯಲು ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ: ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಶಾನ್ ಅಬಾಟ್ ಮತ್ತು ಆಡಮ್ ಝಂಪಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Fri, 22 September 23