India vs Australia 1st Test: ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನಾಳೆಯಿಂದ ಶುರುವಾಗಲಿದೆ. ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರೆಲ್ಲಾ ಕಣಕ್ಕಿಳಿಯುತ್ತಾರೆ ಎಂಬುದೇ ಯಕ್ಷ ಪ್ರಶ್ನೆ. ಏಕೆಂದರೆ ತಂಡದಲ್ಲಿ ಸ್ಥಾನ ಪಡೆದಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ಕೂಡ ತಂಡದಲ್ಲಿಲ್ಲ. ಹೀಗಾಗಿ ಎರಡು ಸ್ಥಾನದಲ್ಲಿ ಬದಲಾವಣೆ ಕಂಡು ಬರುವುದು ಖಚಿತ.
ಇದರ ನಡುವೆ ಆರಂಭಿಕರ ಸ್ಥಾನಕ್ಕಾಗಿ ಇಬ್ಬರು ಆಟಗಾರರ ನಡುವೆ ಪೈಪೋಟಿ ಕೂಡ ಇದೆ. ಅಂದರೆ ಇಲ್ಲಿ ಓಪನರ್ ಆಗಿ ಕೆಎಲ್ ರಾಹುಲ್ ಹಾಗೂ ಶುಭ್ಮನ್ ಗಿಲ್ ಇದ್ದಾರೆ. ಇವರಿಬ್ಬರಿಗೂ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ನೀಡಿದರೆ ಒಬ್ಬರು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಾಗುತ್ತದೆ.
ಇಲ್ಲಿ ಶುಭ್ಮನ್ ಗಿಲ್ಗೆ ಕಣಕ್ಕಿಳಿದ್ರೆ ಸೂರ್ಯಕುಮಾರ್ ಯಾದವ್ ಅವಕಾಶ ವಂಚಿತರಾಗಲಿದ್ದಾರೆ. ಅಂದರೆ ಇಲ್ಲಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಲು ಶುಭ್ಮನ್ ಹಾಗೂ ಸೂರ್ಯ ನಡುವೆ ಪೈಪೋಟಿ ಇದೆ.
ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
ಮತ್ತೊಂದೆಡೆ ಸ್ಪಿನ್ನರ್ ಸ್ಥಾನದಲ್ಲಿ ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಇದೆ. ಇಲ್ಲಿ ಮುಖ್ಯ ಸ್ಪಿನ್ನರ್ ಆಗಿ ಅಶ್ವಿನ್ ಕಣಕ್ಕಿಳಿಯುವುದು ಖಚಿತ. ಹಾಗೆಯೇ ಹೆಚ್ಚುರಿ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಮೂರನೇ ಸ್ಪಿನ್ನರ್ ಆಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.