IND vs AUS: ಇಬ್ಬರು ಕನ್ನಡಿಗರಿಗೆ ಸ್ಥಾನ; ಪರ್ತ್​ ಟೆಸ್ಟ್​ಗೆ ಹೇಗಿರಲಿದೆ ಭಾರತದ ಪ್ಲೇಯಿಂಗ್-11?

India's Probable Playing XI: ಭಾರತ ತಂಡ ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಅವರ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ. ಜಸ್ಪ್ರೀತ್ ಬುಮ್ರಾ ತಂಡದ ನಾಯಕತ್ವ ವಹಿಸಲಿದ್ದಾರೆ. ದೇವದತ್ ಪಡಿಕ್ಕಲ್, ಕೆ.ಎಲ್. ರಾಹುಲ್, ಮತ್ತು ಯಶಸ್ವಿ ಜೈಸ್ವಾಲ್ ಅವರ ಪ್ರದರ್ಶನ ಪ್ರಮುಖ ಪಾತ್ರ ವಹಿಸಲ್ಲಿದ್ದು, ಕೊಹ್ಲಿ ಮತ್ತು ಪಂತ್ ಅವರ ಪ್ರದರ್ಶನ ಕೂಡ ನಿರ್ಣಾಯಕವಾಗಿದೆ.

IND vs AUS: ಇಬ್ಬರು ಕನ್ನಡಿಗರಿಗೆ ಸ್ಥಾನ; ಪರ್ತ್​ ಟೆಸ್ಟ್​ಗೆ ಹೇಗಿರಲಿದೆ ಭಾರತದ ಪ್ಲೇಯಿಂಗ್-11?
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Nov 21, 2024 | 10:25 PM

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡ ಶುಕ್ರವಾರದಿಂದ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡಲಿದೆ. ಪರ್ತ್‌ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಸೋತಿರುವುದು, ಖಂಡಿತವಾಗಿಯೂ ಭಾರತ ತಂಡದ ನೈತಿಕ ಸ್ಥೈರ್ಯವನ್ನು ಕಡಿಮೆ ಮಾಡಿದೆ. ಆದರೆ ಹಳೆಯ ಕಹಿ ನೆನಪುಗಳನ್ನು ಮರೆತು, ಆಸ್ಟ್ರೇಲಿಯಾ ವಿರುದ್ಧದ ಹಿಂದಿನ ಪ್ರದರ್ಶನದಿಂದ ಸ್ಫೂರ್ತಿ ಪಡೆಯುವ ಮೂಲಕ ಭಾರತ ಈ ಟೆಸ್ಟ್​ ಪಂದ್ಯವನ್ನು ಆಡಬೇಕಿದೆ. ಆದರೆ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅಲಭ್ಯರಾಗಿರುವುದು ತಂಡದ ಪ್ಲೇಯಿಂಗ್ 11 ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಹೀಗಾಗಿ ಮೊದಲ ಟೆಸ್ಟ್​ನಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ರೋಹಿತ್- ಗಿಲ್ ಅಲಭ್ಯ

ಮೇಲೆ ಹೇಳಿದಂತೆ ನಾಯಕ ರೋಹಿತ್ ಈಗಾಗಲೇ ಈ ಪಂದ್ಯಕ್ಕೆ ಲಭ್ಯರಿರಲಿಲ್ಲ. ಇತ್ತ ಶುಭ್​ಮನ್ ಗಿಲ್ ಕೂಡ ಗಾಯಗೊಂಡಿದ್ದು ಭಾರತದ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಗಿಲ್ ಅವರ ಅನುಪಸ್ಥಿತಿಯಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ರೋಹಿತ್ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ. ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಟೆಸ್ಟ್‌ನಲ್ಲಿ ರಾಹುಲ್ ಓಪನಿಂಗ್ ಮಾಡಿದ್ದರು. ಆದರೆ ಉತ್ತಮ ಪ್ರದರ್ಶನ ನೀಡಲು ಅವರಿಗೆ ಸಾಧ್ಯವಾಗಲಿಲ್ಲ. ಆದರೂ ರೋಹಿತ್ ಅನುಪಸ್ಥಿತಿಯಲ್ಲಿ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಮಧ್ಯಮ ಕ್ರಮಾಂಕ ಯಾರ ಹೆಗಲಿಗೆ?

ನಾಲ್ಕನೇ ಕ್ರಮಾಂಕದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ತಮ್ಮ ಅನುಭವವನ್ನು ಧಾರೆ ಎರೆಯಲು ಸಿದ್ಧರಾಗಿದ್ದಾರೆ. ಕೊಹ್ಲಿಗೂ ಕೂಡ ಈ ಸರಣಿ ಅತ್ಯವಶ್ಯಕವಾಗಿದೆ. ಏಕೆಂದರೆ ಕಳೆದ ಕೆಲವು ಪಂದ್ಯಗಳಲ್ಲಿ ಕೊಹ್ಲಿ ಪ್ರದರ್ಶನ ಅಷ್ಟಕಷ್ಟೆ. ಹೀಗಾಗಿ ಕೊಹ್ಲಿ ಈ ಸರಣಿಯಲ್ಲಿ ಮಿಂಚಲೇ ಬೇಕಿದೆ. ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ಆಗಿ ರಿಷಬ್ ಪಂತ್ ಕಣಕ್ಕಿಳಿಯುವುದು ಖಚಿತ. ಆರನೇ ಕ್ರಮಾಂಕದ ಬಗ್ಗೆ ಕೊಂಚ ಗೊಂದಲಗಳಿದ್ದು, ಸರ್ಫರಾಜ್ ಖಾನ್ ಅಥವಾ ಧೃವ್ ಜುರೇಲ್​ಗೆ ಈ ಸ್ಥಾನ ಸಿಗುವ ಸಾಧ್ಯತೆಗಳಿವೆ.ಸರ್ಫರಾಜ್​ಗೆ ಹೋಲಿಸಿದರೆ, ಆಸ್ಟ್ರೇಲಿಯಾ ಎ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಧೃವ್​ಗೆ ಅವಕಾಶ ಸಿಗುವುದು ಖಚಿತ ಎನ್ನಲಾಗುತ್ತಿದೆ.

ಬೌಲಿಂಗ್ ವಿಭಾಗದಲ್ಲಿ ಯಾರ್ಯಾರು?

ಬೌಲಿಂಗ್ ಆಲ್‌ರೌಂಡರ್ ಆಗಿ ನಿತೀಶ್ ಕುಮಾರ್ ರೆಡ್ಡಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಬಹುದು. ಒಂದು ವೇಳೆ ನಿತೀಶ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರೆ, ಇದು ಅವರಿಗೆ ಚೊಚ್ಚಲ ಟೆಸ್ಟ್ ಪಂದ್ಯವಾಗಲಿದೆ. ಉಳಿದಂತೆ ಸ್ಪಿನ್ನರ್ ಖೋಟಾದಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಕಣಕ್ಕಿಳಿಸಬಹುದು. ಉಳಿದಂತೆ ಬೌಲಿಂಗ್ ವಿಭಾಗದಲ್ಲಿ ನಾಯಕ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಕಾಣಿಸಿಕೊಳ್ಳಬಹುದು.

ಉಭಯ ಸಂಭಾವ್ಯ ತಂಡಗಳು

ಮೊದಲ ಟೆಸ್ಟ್​ಗೆ ಭಾರತ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್, ನಿತೀಶ್ ರೆಡ್ಡಿ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ (ನಾಯಕ), ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಆಸ್ಟ್ರೇಲಿಯಾ ಸಂಭಾವ್ಯ ತಂಡ: ನಾಥನ್ ಮೆಕ್‌ಸ್ವೀನಿ, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Thu, 21 November 24

ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ