India vs Australia: ಫೆಬ್ರವರಿ 9 ರಿಂದ ಟೀಮ್ ಇಂಡಿಯಾ ವಿರುದ್ಧ ಶುರುವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್‌ವುಡ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಹ್ಯಾಝಲ್‌ವುಡ್ ಅವರ ಎಡಗಾಲಿಗೆ ಗಾಯವಾಗಿತ್ತು. ಈ ಗಾಯವು ಇನ್ನೂ ಕೂಡ ಸಂಪೂರ್ಣವಾಗಿ ಗುಣವಾಗಿರದ ಕಾರಣ ನಾಗಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ತಂಡ ಅಭ್ಯಾಸ ಶಿಬಿರದಲ್ಲೂ ಜೋಶ್ ಹ್ಯಾಝಲ್‌ವುಡ್ ಸಂಪೂರ್ಣವಾಗಿ ತೊಡಗಿಸಿಕೊಂಡಿರಲಿಲ್ಲ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರ ಕಾರಣ ವಿಶ್ರಾಂತಿ ಪಡೆದಿದ್ದರು. ಸದ್ಯ ಫಿಟ್ನೆಸ್ ಸಮಸ್ಯೆಯಲ್ಲಿರುವ ಹ್ಯಾಝಲ್ವುಡ್ನನ್ನು ಮೊದಲ ಪಂದ್ಯದಲ್ಲಿ ಕಣಕ್ಕಿಳಿಸದಿರಲು ಆಸ್ಟ್ರೇಲಿಯಾ ತಂಡದ ಆಡಳಿತ ಮಂಡಳಿ ನಿರ್ಧರಿಸಿದೆ.
ಬದಲಿ ಆಟಗಾರ ಯಾರು?
ಜೋಶ್ ಹ್ಯಾಝಲ್‌ವುಡ್ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ. ಅವರು ತಂಡದಿಂದ ಹೊರಗುಳಿದರೆ ಮತ್ತೋರ್ವ ಬೌಲರ್ನನ್ನು ಕಣಕ್ಕಿಳಿಸಬೇಕಾಗುತ್ತದೆ. ಹೀಗಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
ಏಕೆಂದರೆ ತಂಡದಲ್ಲಿರುವ ಮತ್ತೋರ್ವ ಆಟಗಾರ ಕ್ಯಾಮರೋನ್ ಗ್ರೀನ್ ಕೂಡ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಆಸ್ಟ್ರೇಲಿಯಾ ಮುಂದಿರುವ ಆಯ್ಕೆ ಸ್ಕಾಟ್ ಬೌಲ್ಯಾಂಡ್. ಆದರೆ ಬೌಲ್ಯಂಡ್ ಇದುವರೆಗೆ ವಿದೇಶದಲ್ಲಿ ಟೆಸ್ಟ್ ಪಂದ್ಯವನ್ನು ಆಡಿಲ್ಲ. ಇನ್ನು ಆಡಿರುವುದು ಕೇವಲ 6 ಟೆಸ್ಟ್ ಪಂದ್ಯಗಳನ್ನು ಮಾತ್ರ. ಅಂದರೆ ಅನಾನುಭವಿ ಬೌಲರ್ನನ್ನು ಕಣಕ್ಕಿಳಿಸಬೇಕಾದ ಅನಿವಾರ್ಯತೆ ಇದೀಗ ಆಸ್ಟ್ರೇಲಿಯಾ ತಂಡದ ಮುಂದಿದೆ.
ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ:
ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ: