IND vs AUS 1st Test: ಟಾಸ್ ಗೆದ್ದ ಆಸ್ಟ್ರೇಲಿಯಾ: ಸೂರ್ಯಕುಮಾರ್, ಕೆಎಸ್ ಭರತ್ ಪದಾರ್ಪಣೆ, ಇಲ್ಲಿದೆ ಭಾರತದ ಪ್ಲೇಯಿಂಗ್ XI

|

Updated on: Feb 09, 2023 | 9:10 AM

India vs Australia 1st Test, BGT: ನಾಗ್ಪುರದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಚಾಲನೆ ದೊರೆತಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

IND vs AUS 1st Test: ಟಾಸ್ ಗೆದ್ದ ಆಸ್ಟ್ರೇಲಿಯಾ: ಸೂರ್ಯಕುಮಾರ್, ಕೆಎಸ್ ಭರತ್ ಪದಾರ್ಪಣೆ, ಇಲ್ಲಿದೆ ಭಾರತದ ಪ್ಲೇಯಿಂಗ್ XI
IND vs AUS 1st Test
Follow us on

ಬಾರ್ಡರ್-ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಸಜ್ಜಾಗಿ ನಿಂತಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದು ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳು ಬಲಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಿದೆ. ಅಂದುಕೊಂಡಂತೆ ಟೀಮ್ ಇಂಡಿಯಾದ (Team India) ಆಡುವ ಬಳಗಕ್ಕೆ ಮೂವರು ಸ್ಪಿನ್ನರ್​ಗಳನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಭಾರತ ಪರ ಇಬ್ಬರು ಆಟಗಾರರು ಹಾಗೂ ಆಸೀಸ್ ಪರ ಟಾಡ್ ಮರ್ಫಿ ಪದಾರ್ಪಣೆ ಮಾಡಿದ್ದಾರೆ. ಇಲ್ಲಿದೆ ನೋಡಿ ಉಭಯ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ (IND vs AUS Playing XI).

ಭಾರತ ಪರ ಓಪನರ್ ಆಗಿ ನಾಯಕ ರೋಹಿತ್ ಶರ್ಮಾ ಹಾಗೂ ಉಪ ನಾಯಕ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಆಡಲಿದ್ದು ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಭಾರೀ ಕುತೂಹಲ ಕೆರಳಿಸಿದ್ದ ನಾಲ್ಕನೇ ಕ್ರಮಾಂಕಕ್ಕೆ ಸೂರ್ಯಕುಉಮಾರ್ ಯಾದವ್ ಆಯ್ಕೆ ಆಗಿದ್ದಾರೆ. ಈ ಮೂಲಕ ಸೂರ್ಯ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ.

ಐದನೇ ಕ್ರಮಾಂಕದಲ್ಲಿ ಕೆಎಸ್ ಭರತ್ ಆಡುತ್ತಿದ್ದು ವಿಕೆಟ್ ಕೀಪರ್ ಜವಾಬ್ದಾರಿ ನೀಡಲಾಗಿದೆ. ಇವರು ಕೂಡ ಟೆಸ್ಟ್ ಕ್ರಿಕೆಟ್​ಗೆ ಕಾಲಿಟ್ಟಿದ್ದು ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನು ಆಡುತ್ತಿದ್ದಾರೆ. ಸೂರ್ಯ ಹಾಗೂ ಭರತ್​ಗೆ ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಟೆಸ್ಟ್ ಕ್ಯಾಪ್ ನೀಡಿದರು. ಇನ್ನು ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್- ಆಲ್ರೌಂಡರ್​ಗಳಾಗಿದ್ದಾರೆ. ಮೂರನೇ ಸ್ಪಿನ್ನರ್ ಆಗಿ ಅಕ್ಷರ್ ಪಟೇಲ್ ಕೂಡ ಕಣಕ್ಕಿಳಿಯಲಿದ್ದಾರೆ. ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
IND vs AUS 1st Test: ಪ್ಲೇಯಿಂಗ್ XIಗೆ ಶುರುವಾಯಿತು ಚರ್ಚೆ: ಒಂದು ಸ್ಥಾನಕ್ಕಾಗಿ ಇಬ್ಬರ ನಡುವೆ ಪೈಪೋಟಿ
IND vs AUS 1st Test: ಇಂದಿನಿಂದ ಬಹುನಿರೀಕ್ಷಿತ ಭಾರತ-ಆಸ್ಟ್ರೇಲಿಯಾ ಮೊದಲ ಟೆಸ್ಟ್: ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ
India vs Australia 1st Test: ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆಯಲು 4 ಆಟಗಾರರ ನಡುವೆ ಪೈಪೋಟಿ
India vs Australia: ಭಾರತ-ಆಸ್ಟ್ರೇಲಿಯಾ ಟೆಸ್ಟ್​ ಸರಣಿಯ ವೇಳಾಪಟ್ಟಿ ಮತ್ತು ತಂಡಗಳು ಹೀಗಿವೆ

ಭಾರತ ಪ್ಲೇಯಿಂಗ್ XI: ರೋಹಿತ್ ಶರರ್ಮಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್/ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಇತ್ತ ಆಸ್ಟ್ರೇಲಿಯಾ ತಂಡ ಕೂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡಿದೆ. ಸ್ಪಿನ್ನರ್ ಟಾಡ್ ಮರ್ಫಿ ಪದಾರ್ಪಣೆ ಮಾಡಿದ್ದಾರೆ. ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಓಪನರ್​ಗಳಾದರೆ ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ ಪೀಟರ್ ಹ್ಯಾಂಡ್ಸ್​ಕಾಂಬ್ ಮತ್ತು ಮ್ಯಾಟ್ ರೆನ್ಶಾ ಮಧ್ಯಮ ಕ್ರಮಾಂಕದಲ್ಲಿದ್ದಾರೆ. ಅಲೆಕ್ಸ್ ಕ್ಯಾರಿ ವಿಕೆಟ್ ಕೀಪರ್ ಜವಾಬ್ದಾರಿ ವಹಿಸಲಿದ್ದಾರೆ. ಹೀಗೆ ಆಸೀಸ್ ಬ್ಯಾಟಿಂಗ್ ಕ್ರಮಾಂಕ ದೊಡ್ಡದಿದೆ. ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲರು. ಸ್ಕಾಟ್ ಬೊಲಂಡ್, ಟಾಡ್ ಮರ್ಫಿ ಹಾಗೂ ನೇಥನ್ ಲ್ಯಾನ್ ಬೌಲರ್​ಗಳಾಗಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್​ಕಾಂಬ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸ್ಕಾಟ್ ಬೊಲಂಡ್, ಟಾಡ್ ಮರ್ಫಿ, ನೇಥನ್ ಲ್ಯಾನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:07 am, Thu, 9 February 23