AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ- ಆಸೀಸ್ 2ನೇ ಟಿ20 ಪಂದ್ಯ ಯಾವಾಗ, ಎಲ್ಲಿ ನಡೆಯಲ್ಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ?

India vs Australia 2nd T20I Live Streaming: ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಆರಂಭಿಸಿದೆ. ಸರಣಿಯ ಮೊದಲ ಪಂದ್ಯವನ್ನು 2 ವಿಕೆಟ್‌ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಸರಣಿಯಲ್ಲಿ 2-0 ಮುನ್ನಡೆಯ ಮೇಲೆ ಕಣ್ಣಿಟ್ಟಿದೆ.

IND vs AUS: ಭಾರತ- ಆಸೀಸ್ 2ನೇ ಟಿ20 ಪಂದ್ಯ ಯಾವಾಗ, ಎಲ್ಲಿ ನಡೆಯಲ್ಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ- ಆಸ್ಟ್ರೇಲಿಯಾImage Credit source: insidesport
ಪೃಥ್ವಿಶಂಕರ
|

Updated on:Nov 25, 2023 | 2:52 PM

Share

ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ (India vs Australia) ಗೆಲುವಿನೊಂದಿಗೆ ಆರಂಭಿಸಿದೆ. ಸರಣಿಯ ಮೊದಲ ಪಂದ್ಯವನ್ನು 2 ವಿಕೆಟ್‌ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಸರಣಿಯಲ್ಲಿ 2-0 ಮುನ್ನಡೆಯ ಮೇಲೆ ಕಣ್ಣಿಟ್ಟಿದೆ. 2024 ರ ಟಿ 20 ವಿಶ್ವಕಪ್ (T20 World Cup 2024) ತಯಾರಿಗಾಗಿ ಟೀಂ ಇಂಡಿಯಾಕ್ಕೆ ಈ ಸರಣಿಯು ಬಹಳ ಮುಖ್ಯವಾಗಿದೆ. ಇನ್ನು ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 208 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಟೀಂ ಇಂಡಿಯಾ (Team India) 1 ಎಸೆತ ಬಾಕಿ ಇರುವಾಗಲೇ ಗೆಲುವಿನ ದಡ ಸೇರಿತ್ತು. ತಂಡದ ಪರ ಇಶಾನ್ ಕಿಶನ್ 58 ರನ್​ಗಳ ಇನಿಂಗ್ಸ್ ಆಡಿದರೆ, ಸೂರ್ಯ 42 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 80 ರನ್ ಬಾರಿಸಿದ್ದರು.

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ನವೆಂಬರ್ 26 ರಂದು ನಡೆಯಲ್ಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಕೇರಳದ ತಿರುವನಂತಪುರಂನಲ್ಲಿ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯನ್ನು ಸ್ಪೋರ್ಟ್ಸ್-18 ಮತ್ತು ಕಲರ್ಸ್ ಸಿನೆಪ್ಲೆಕ್ಸ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಅದೇ ಸಮಯದಲ್ಲಿ, ಡಿಡಿ ಫ್ರೀ ಡಿಶ್ ಬಳಸುವ ವೀಕ್ಷಕರು ಡಿಡಿ ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಎರಡನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದ್ದು, ಇದು ಸಂಪೂರ್ಣವಾಗಿ ಉಚಿತವಾಗಿದೆ.

ಉಭಯ ತಂಡಗಳು

ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಶ್ರೇಯಸ್ ಅಯ್ಯರ್ (ಕೊನೆಯ 2 ಪಂದ್ಯಗಳ ಉಪನಾಯಕ)

ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಜೇಸನ್ ಬೆಹ್ರೆನ್‌ಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ತನ್ವಿರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:51 pm, Sat, 25 November 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್