IND vs AUS: ದುಬಾರಿ ಬೌಲರ್​ಗಳಿಗೆ ಕೋಕ್? 2ನೇ ಟಿ20ಗೆ ಇಲ್ಲಿದೆ ಭಾರತ ಸಂಭಾವ್ಯ ತಂಡ

IND vs AUS: ಎರಡನೇ ಟಿ20 ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ. ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬೌಲರ್‌ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಮುಖೇಶ್ ಕುಮಾರ್ ಬಿಟ್ಟರೆ ಉಳಿದ ಯಾವ ಬೌಲರ್‌ಗಳೂ ಉತ್ತಮ ಪ್ರದರ್ಶನ ನೀಡಲಿಲ್ಲ. ಹಾಗಾಗಿ ಬೌಲಿಂಗ್ ವಿಭಾಗದಲ್ಲಿ ಸ್ವಲ್ಪ ಬದಲಾವಣೆ ಆಗಬಹುದು.

IND vs AUS: ದುಬಾರಿ ಬೌಲರ್​ಗಳಿಗೆ ಕೋಕ್? 2ನೇ ಟಿ20ಗೆ ಇಲ್ಲಿದೆ ಭಾರತ ಸಂಭಾವ್ಯ ತಂಡ
ಭಾರತ- ಆಸ್ಟ್ರೇಲಿಯಾ
Follow us
ಪೃಥ್ವಿಶಂಕರ
|

Updated on: Nov 25, 2023 | 6:46 PM

ಎರಡನೇ ಟಿ20 ಪಂದ್ಯಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ಎರಡೂ ತಂಡಗಳು ಸಜ್ಜಾಗಿವೆ. ಐದು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಈಗ ಎರಡನೇ ಪಂದ್ಯವನ್ನು ಗೆದ್ದು 2-0 ಮುನ್ನಡೆ ಸಾಧಿಸುವ ಮೂಲಕ ಆಸ್ಟ್ರೇಲಿಯಾವನ್ನು ಹಿಮ್ಮೆಟ್ಟಿಸುವ ಯೋಜನೆಯನ್ನು ಭಾರತ ಹಾಕಿಕೊಂಡಿದೆ. ಆದರೆ ಎರಡನೇ ಟಿ20 ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ (Suryakumar Yadav) ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ. ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬೌಲರ್‌ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಮುಖೇಶ್ ಕುಮಾರ್ ಬಿಟ್ಟರೆ ಉಳಿದ ಯಾವ ಬೌಲರ್‌ಗಳೂ ಉತ್ತಮ ಪ್ರದರ್ಶನ ನೀಡಲಿಲ್ಲ. ಹಾಗಾಗಿ ಬೌಲಿಂಗ್ ವಿಭಾಗದಲ್ಲಿ ಸ್ವಲ್ಪ ಬದಲಾವಣೆ ಆಗಬಹುದು.

ಬೌಲಿಂಗ್ ವಿಭಾಗದಲ್ಲಿ ಬದಲಾವಣೆ?

ತಿರುವನಂತಪುರಂನಲ್ಲಿರುವ ಗ್ರೀನ್ ಫೀಲ್ಡ್ ಪಿಚ್ ವಿಶಾಖಪಟ್ಟಣಂನಂತೆಯೇ ಇರುತ್ತದೆ. ಹಾಗಾಗಿ ಸೂರ್ಯಕುಮಾರ್ ಯಾದವ್ ಹಿಂದಿನ ಪಂದ್ಯದ ಕೆಲವು ತಪ್ಪುಗಳನ್ನು ಸರಿಪಡಿಸುವ ಉದ್ದೇಶ ಹೊಂದಿದ್ದಾರೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್ ರವಿ ಬಿಷ್ಣೋಯ್ 13.50 ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟಿದ್ದರು. ಹಾಗಾಗಿ ಅವರು ಆಡುವ ಹನ್ನೊಂದರಿಂದ ಹೊರಗುಳಿಯಬಹುದು. ಅರ್ಷದೀಪ್ ಸಿಂಗ್ ಮತ್ತು ಪ್ರಸಿದ್ಧ ಕೃಷ್ಣ ಕೂಡ ದುಬಾರಿ ಓವರ್‌ಗಳನ್ನು ಬೌಲ್ ಮಾಡಿದ್ದರು. ಅರ್ಷದೀಪ್ ಸರಾಸರಿ 10.25 ಮತ್ತು ಪ್ರಸಿದ್ಧ್ ಕೃಷ್ಣ 12.50 ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟಿದ್ದರು. ಹಾಗಾಗಿ ಈ ಮೂವರಲ್ಲಿ ಒಬ್ಬರು ಬೆಂಚ್ ಮೇಲೆ ಕುಳಿತುಕೊಳ್ಳಬೇಕಾಗಬಹುದು.

IND vs AUS: ತಿರುವನಂತಪುರಂನಲ್ಲಿ ಭಾರತದ ದಾಖಲೆ ಹೇಗಿದೆ? ಪಿಚ್ ಯಾರಿಗೆ ಹೆಚ್ಚು ಸಹಕಾರಿ?

ಯಾರಿಗೆ ಸಿಗಲಿದೆ ಅವಕಾಶ?

ಮೊದಲ ಟಿ20 ಪಂದ್ಯಕ್ಕಾಗಿ ಆಡುವ ಹನ್ನೊಂದರಲ್ಲಿ ಮೂವರು ವೇಗದ ಬೌಲರ್‌ಗಳು ಮತ್ತು ಇಬ್ಬರು ಸ್ಪಿನ್ನರ್‌ಗಳು ಸ್ಥಾನ ಪಡೆದಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ರವಿ ಬಿಷ್ಣೋಯ್‌ ಅವರನ್ನು ಕೂರಿಸುವ ಸಾಧ್ಯತೆ ಹೆಚ್ಚಿದೆ. ಅಕ್ಷರ್ ಪಟೇಲ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಕೊಡುಗೆ ನೀಡುವ ಸಾಮಥ್ಯ್ರ ಹೊಂದಿದ್ದಾರೆ. ಹಾಗಾಗಿ ಬಿಷ್ಣೋಯ್ ಬದಲಿಗೆ ಅವೇಶ್ ಖಾನ್ ಆಡುವ ಹನ್ನೊಂದರಲ್ಲಿ ಅವಕಾಶ ಪಡೆಯಬಹುದು. ತಿಲಕ್ ವರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಸ್ಪಿನ್ನರ್ ಸ್ಥಾನವನ್ನು ತುಂಬುವ ಸಾಧ್ಯತೆಗಳಿವೆ.

ಆಸೀಸ್ ತಂಡದಲ್ಲೂ ಬದಲಾವಣೆ ಸಾಧ್ಯತೆ

ಆಸ್ಟ್ರೇಲಿಯದ ಪ್ಲೇಯಿಂಗ್ ಇಲೆವೆನ್‌ನಲ್ಲೂ ಬದಲಾವಣೆಗಳಾಗುವುದರಲ್ಲಿ ಸಂಶಯವಿಲ್ಲ. ಮೊದಲ ಟಿ20 ಪಂದ್ಯದಲ್ಲಿ ತನ್ವೀರ್ ಸಂಘ ಅತ್ಯಂತ ದುಬಾರಿ ಬೌಲರ್ ಆಗಿದ್ದರು. ಹಾಗೆಯೇ ಮ್ಯಾಥ್ಯೂ ಶಾರ್ಟ್ ಮತ್ತು ಆರನ್ ಹಾರ್ಡಿ ಕೂಡ ಉತ್ತಮ ಪ್ರದರ್ಶನ ನೀಡಲಿಲ್ಲ. ಆದ್ದರಿಂದ ಈ ಮೂವರು ಆಟಗಾರರಿಗೆ ಕೋಕ್ ನೀಡುವ ಸಾಧ್ಯತೆ ಇದ್ದು, ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಆಡಮ್ ಝಂಪಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು.

ಉಭಯ ಸಂಭಾವ್ಯ ತಂಡಗಳು

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್/ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ/ವಿಕೆಟ್ ಕೀಪರ್), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ಆಡಮ್ ಝಂಪಾ.

ಭಾರತ: ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್/ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ