IND vs AUS: ತಿರುವನಂತಪುರಂನಲ್ಲಿ ಭಾರತದ ದಾಖಲೆ ಹೇಗಿದೆ? ಪಿಚ್ ಯಾರಿಗೆ ಹೆಚ್ಚು ಸಹಕಾರಿ?
India vs Australia, 2nd T20I, Greenfield Stadium Pitch Report: ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಉತ್ತಮ ದಾಖಲೆ ಹೊಂದಿದೆ. ಟೀಂ ಇಂಡಿಯಾ ಇಲ್ಲಿಯವರೆಗೆ ಈ ಮೈದಾನದಲ್ಲಿ ಒಟ್ಟು 3 ಟಿ20 ಪಂದ್ಯಗಳನ್ನು ಆಡಿದೆ. ಇದೀಗ ನಾಲ್ಕನೇ ಪಂದ್ಯಕ್ಕೆ ಭಾನುವಾರ ಮೈದಾನಕ್ಕಿಳಿಯಲಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಇನ್ನು ಪಂದ್ಯಕ್ಕೂ ಮುನ್ನ ತಿರುವನಂತಪುರಂನಲ್ಲಿ (Thiruvananthapuram) ಭಾರತದ ದಾಖಲೆ ಹೇಗಿದೆ ಎಂಬುದನ್ನು ನೋಡುವುದಾದರೆ.. ಇಲ್ಲಿನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India) ಉತ್ತಮ ದಾಖಲೆ ಹೊಂದಿದೆ. ಟೀಂ ಇಂಡಿಯಾ ಇಲ್ಲಿಯವರೆಗೆ ಈ ಮೈದಾನದಲ್ಲಿ ಒಟ್ಟು 3 ಟಿ20 ಪಂದ್ಯಗಳನ್ನು ಆಡಿದೆ. ಇದೀಗ ನಾಲ್ಕನೇ ಪಂದ್ಯಕ್ಕೆ ಭಾನುವಾರ ಮೈದಾನಕ್ಕಿಳಿಯಲಿದ್ದಾರೆ.
ಒಟ್ಟು 3 ಪಂದ್ಯಗಳನ್ನು ಆಡಿದೆ
ತಿರುವನಂತಪುರದಲ್ಲಿ ಭಾರತ ಇದುವರೆಗೆ ಒಟ್ಟು 3 ಪಂದ್ಯಗಳನ್ನು ಆಡಿದೆ. ಇದರಲ್ಲಿ 2 ಪಂದ್ಯ ಗೆದ್ದಿರುವ ಭಾರತ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಭಾರತ ತನ್ನ ಮೊದಲ ಟಿ20 ಪಂದ್ಯವನ್ನು 2017ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಇದೇ ಮೈದಾನದಲ್ಲಿ ಆಡಿತ್ತು. ಆ ಪಂದ್ಯದಲ್ಲಿ 6 ರನ್‌ಗಳಿಂದ ಜಯ ಸಾಧಿಸಿತು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಸೋಲನುಭವಿಸಬೇಕಾಯಿತು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳ ಜಯ ಸಾಧಿಸಿದೆ.
IND vs AUS: ಭಾರತ- ಆಸೀಸ್ 2ನೇ ಟಿ20 ಪಂದ್ಯ ಯಾವಾಗ, ಎಲ್ಲಿ ನಡೆಯಲ್ಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ?
ಸೂರ್ಯ- ದುಬೆ ಅರ್ಧಶತಕ
ಈ ಮೈದಾನದಲ್ಲಿ ಭಾರತದ ಪರ ಶಿವಂ ದುಬೆ ಅರ್ಧಶತಕ ಸಿಡಿಸಿರುವುದು ಪ್ರಮುಖ ಸಂಗತಿ. ಸೂರ್ಯಕುಮಾರ್ ಯಾದವ್ ಕೂಡ ಇಲ್ಲಿ ಅರ್ಧಶತಕ ಬಾರಿಸಿದ್ದಾರೆ. ಸೂರ್ಯ 33 ಎಸೆತಗಳಲ್ಲಿ 50 ರನ್ ಬಾರಿಸಿದ್ದರೆ, ಶಿವಂ ದುಬೆ 30 ಎಸೆತಗಳಲ್ಲಿ 54 ರನ್ ಸಿಡಿಸಿದ್ದರು. ಈ ಇಬ್ಬರನ್ನು ಹೊರತುಪಡಿಸಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಕೂಡ ಇಲ್ಲಿ ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೀಂ ಇಂಡಿಯಾ ಪರ ಸೂರ್ಯ ಮತ್ತೊಮ್ಮೆ ಈ ಮೈದಾನದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಲಿದ್ದಾರೆ.
ಪಿಚ್ ಯಾರಿಗೆ ಸಹಕಾರಿ?
ಈ ಕ್ರೀಡಾಂಗಣದ ಪಿಚ್ನಲ್ಲಿ ಬೌಲರ್ ಮತ್ತು ಬ್ಯಾಟ್ಸ್‌ಮನ್ ಇಬ್ಬರೂ ಸಮಾನ ಸಹಾಯವನ್ನು ಪಡೆಯುತ್ತಾರೆ. ವೇಗದ ಬೌಲರ್ ಇಲ್ಲಿ ಉತ್ತಮ ಸ್ವಿಂಗ್ ಪಡೆದರೆ, ಮಧ್ಯಮ ಓವರ್‌ಗಳಲ್ಲಿ ಸ್ಪಿನ್ ಬೌಲರ್‌ಗಳು ಸಹ ಉತ್ತಮ ಸಹಾಯವನ್ನು ಪಡೆಯುತ್ತಾರೆ. ಹಾಗೆಯೇ ಪಿಚ್ ಅತ್ಯಂತ ಸಮತೋಲಿತ ಆಗಿರುವುದರಿಂದ ಬ್ಯಾಟ್ಗೂ ಬಾಲ್ ಚೆನ್ನಾಗಿ ಬರುತ್ತದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂದು ಹೇಳುವುದು ಕಷ್ಟ. ಈ ಮೈದಾನದಲ್ಲಿ ಇದುವರೆಗೆ 3 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಒಂದು ಪಂದ್ಯವನ್ನು ಗೆದ್ದಿದ್ದರೆ, ಮೊದಲು ಬೌಲಿಂಗ್ ಮಾಡಿದ ತಂಡ 2 ಪಂದ್ಯಗಳನ್ನು ಗೆದ್ದಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.