IND vs AUS 2nd T20I: ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ: ಮತ್ತೊಂದು ಜಯದತ್ತ ಸೂರ್ಯ ಪಡೆಯ ಕಣ್ಣು

India vs Australia 2nd T20I Preview: ಇಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ ನಡೆಯಲಿದೆ. 200ಕ್ಕೂ ಅಧಿಕ ರನ್ ಕಲೆಹಾಕಿದರೂ ಆಸೀಸ್ ಕಳೆದ ಪಂದ್ಯದಲ್ಲಿ ಸೋಲುಂಡಿತ್ತು. ಹೀಗಾಗಿ ಬೇರೆ ಪ್ಲಾನ್ ರೂಪಿಸಬಹುದು. ಇತ್ತ ಭಾರತ ಕೂಡ ದುಬಾರಿ ಬೌಲರ್​ಗಳಿಗೆ ಕೊಕ್ ಕೊಡುತ್ತಾ ನೋಡಬೇಕು.

IND vs AUS 2nd T20I: ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ: ಮತ್ತೊಂದು ಜಯದತ್ತ ಸೂರ್ಯ ಪಡೆಯ ಕಣ್ಣು
ಭಾರತ- ಆಸ್ಟ್ರೇಲಿಯಾ
Follow us
Vinay Bhat
|

Updated on: Nov 26, 2023 | 6:48 AM

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 200+ ರನ್​ಗಳ ಟಾರ್ಗೆಟ್ ಬೆನ್ನಟ್ಟಿ ರೋಚಕ ಜಯ ಸಾಧಿಸಿರುವ ಭಾರತ (India vs Australia), ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟಿ20ಗೆ ಸಜ್ಜಾಗುತ್ತಿವೆ. ಇಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಡೋ-ಆಸೀಸ್ ಎರಡನೇ ಟಿ20 ಪಂದ್ಯ ನಡೆಯಲಿದೆ. 200ಕ್ಕೂ ಅಧಿಕ ರನ್ ಕಲೆಹಾಕಿದರೂ ಆಸೀಸ್ ಕಳೆದ ಪಂದ್ಯದಲ್ಲಿ ಸೋಲುಂಡಿತ್ತು. ಹೀಗಾಗಿ ಬೇರೆ ಪ್ಲಾನ್ ರೂಪಿಸಬಹುದು. ಇತ್ತ ಭಾರತ ಕೂಡ ದುಬಾರಿ ಬೌಲರ್​ಗಳಿಗೆ ಕೊಕ್ ಕೊಡುತ್ತಾ ನೋಡಬೇಕು.

ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ನೀಡುತ್ತಿದ್ದಾರೆ. ರುತುರಾಜ್ ಗಾಯಕ್ವಾಡ್​ಗೆ ಕಳೆದ ಪಂದ್ಯದಲ್ಲಿ ಒಂದೂ ಎಸೆತ ಆಡಲು ಅವಕಾಶ ಸಿಗಲಿಲ್ಲ. ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಪಾತ್ರ ಬಹಳ ಮಹತ್ವದ್ದಾಗಿದೆ. ತಿಲಕ್ ವರ್ಮಾ ಮತ್ತು ರಿಂಕು ಸಿಂಗ್ ಮೇಲೆ ಫಿನಿಶಿಂಗ್ ಜವಾಬ್ದಾರಿಯಿದೆ. ಆದರೆ, ಸೂಕ್ತ ಆಲ್ರೌಂಡರ್ ತಂಡಕ್ಕೆ ಬೇಕಿದೆ. ಅಕ್ಷರ್ ಪಟೇಲ್ ಬ್ಯಾಟಿಂಗ್​ನಲ್ಲಿ ಮೋಡಿ ಮಾಡಲಿಲ್ಲ. ಬೌಲಿಂಗ್​ನಲ್ಲಿ ಕೂಡ ಭಾರತ ದುಬಾರಿ ಆಗಿದ್ದು, ಈ ವಿಭಾಗದಲ್ಲಿ ಬದಲಾವಣೆ ಮಾಡುವ ಸಂಭವವಿದೆ.

ಮಿನಿ ಹರಾಜಿಗೂ ಮುನ್ನ ಎಲ್ಲಾ 10 ತಂಡಗಳ ಬಳಿ ಉಳಿದಿರುವ ಹಣವೆಷ್ಟು ಗೊತ್ತಾ?

ಇದನ್ನೂ ಓದಿ
Image
ಹಾರ್ದಿಕ್​ ಪಾಂಡ್ಯ ಹಿಂದಿರುಗುವಿಕೆಯಿಂದ​​ MI ತೊರಿತಾರಾ ರೋಹಿತ್ ಶರ್ಮಾ?
Image
2ನೇ ಟಿ20 ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ
Image
ಅಂಡರ್-19 ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್
Image
ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಯಲು ಸೂರ್ಯ ಒಂದು ಹೆಜ್ಜೆ ದೂರ

ಇತ್ತ ಮೊದಲ ಟಿ20 ಯಲ್ಲಿ ಆಸ್ಟ್ರೇಲಿಯಾ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿಸಿದೆ. ಯಂಗ್ ಬ್ಯಾಟರ್ ಜೋಶ್ ಇಂಗ್ಲಿಸ್ 47 ಎಸೆತಗಳ ಶತಕವನ್ನು ಪೂರೈಸಿದರು. ಸ್ಟೀವ್ ಸ್ಮಿತ್ 41 ರಲ್ಲಿ 52 ರನ್ ಗಳಿಸಿದರು. ಮೊದಲ ಪಂದ್ಯದಲ್ಲಿ ವಿಫಲರಾಗಿದ್ದರೂ, ಮಾರ್ಕಸ್ ಸ್ಟೊಯಿನಿಸ್ ಟೀಮ್ ಇಂಡಿಯಾಕ್ಕೆ ಅಪಾಯಕಾರಿ ಆಗಿದ್ದಾರೆ. ಆಸ್ಟ್ರೇಲಿಯಾದ ಆಲ್ ರೌಂಡರ್ ಕಳೆದ 10 ಟಿ20 ಪಂದ್ಯಗಳಲ್ಲಿ 206 ರನ್ ಗಳಿಸಿದ್ದಾರೆ. ಸ್ಟೊಯಿನಿಸ್ 41.2 ರ ಅತ್ಯುತ್ತಮ ಸರಾಸರಿ ಮತ್ತು 157.25 ರ ಸ್ಟ್ರೈಕ್ ರೇಟ್ ಅನ್ನು ಹೊಂದಿದ್ದಾರೆ. ಗ್ಲೆನ್ ಮ್ಯಾಕ್ಸ್​ವೆಲ್ ಇಂದಿನ ಪಂದ್ಯ ಆಡುತ್ತಾರ ಎಂಬುದು ನೋಡಬೇಕಿದೆ.

ಪಿಚ್ ವರದಿ:

ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿನ ವಿಕೆಟ್ ನಿಧಾನಗತಿಯ ಟ್ರ್ಯಾಕ್‌ಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿ ನಡೆದ ನಾಲ್ಕು ಅಂತರರಾಷ್ಟ್ರೀಯ ಟಿ20 ಕೂಡ ಕಡಿಮೆ ಸ್ಕೋರಿಂಗ್ ಪಂದ್ಯಗಳಾಗಿವೆ. ಸರಾಸರಿ ಸ್ಕೋರ್ 114 ಆಗಿದೆ. ಪಿಚ್ ಬೌಲರ್‌ಗಳಿಗೆ, ವಿಶೇಷವಾಗಿ ಸ್ಪಿನ್ ಬೌಲರ್‌ಗಳಿಗೆ ಅನುಕೂಲಕರವಾಗಿರುತ್ತದೆ. ಮೊದಲ ಪಂದ್ಯದಲ್ಲಿ ವಿಫಲರಾಗಿದ್ದ ಸ್ಪಿನ್ನರ್‌ಗಳು 2 ನೇ ಟಿ 20 ನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುವ ನಿರೀಕ್ಷೆಯಿದೆ. ಇಲ್ಲಿನ ಪಿಚ್‌ನ ತೇವಾಂಶವು ವೇಗದ ಬೌಲರ್‌ಗಳಿಗೆ ಕೂಡ ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ಬೌಲರ್‌ಗಳಿಗೆ ಅನುಕೂಲವಾಗುವ ಈ ಪಿಚ್​ನಲ್ಲಿ ಅಂಕಿಅಂಶಗಳನ್ನು ಪರಿಗಣಿಸಿದರೆ, ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವ ಸಾಧ್ಯತೆಯಿದೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ