ಭಾರತ vs ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಯಾವಾಗ? ಇಲ್ಲಿದೆ ಮಾಹಿತಿ

India vs Australia 2nd Test: ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೀಗ ಉಭಯ ತಂಡಗಳು ಎರಡನೇ ಟೆಸ್ಟ್ ಪಂದ್ಯದ ತಯಾರಿಯಲ್ಲಿದೆ.

ಭಾರತ vs ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಯಾವಾಗ? ಇಲ್ಲಿದೆ ಮಾಹಿತಿ
Australia vs India
Follow us
ಝಾಹಿರ್ ಯೂಸುಫ್
|

Updated on:Nov 26, 2024 | 10:21 AM

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆಸೀಸ್ ಪಡೆಯನ್ನು 295 ರನ್​ಗಳಿಂದ ಸೋಲಿಸಿ ಭಾರತ ತಂಡ ಶುಭಾರಂಭ ಮಾಡಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಬಾರ್ಡರ್-ಗವಾಸ್ಕರ್ ಸರಣಿಯ 2ನೇ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನಲ್ಲಿ ನಡೆಯಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಈ ಟೆಸ್ಟ್ ಪಂದ್ಯವನ್ನು ಹೊನಲು ಬೆಳಕಿನಲ್ಲಿ ಆಡಲಾಗುತ್ತದೆ. ಹೀಗಾಗಿಯೇ ಈ ಪಂದ್ಯದಲ್ಲಿ ರೆಡ್ ಬಾಲ್ ಬದಲಿಗೆ ಪಿಂಕ್ ಬಾಲ್ ಬಳಸಲಾಗುತ್ತದೆ.

ಅದರಂತೆ ಡಿಸೆಂಬರ್ 6 ರಿಂದ ಅಡಿಲೇಡ್​ನ ಓವಲ್​ ಮೈದಾನದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಪರ್ತ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೆ ಹಿಟ್​​ಮ್ಯಾನ್ ಅಲಭ್ಯರಾಗಿದ್ದರು.

ವೈಯುಕ್ತಿಕ ಕಾರಣಗಳಿಂದಾಗಿ ಮೊದಲ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿದಿದ್ದರು. ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಇದೀಗ ರೋಹಿತ್ ಶರ್ಮಾ ತಂಡವನ್ನು ಕೂಡಿಕೊಂಡಿರುವ ಕಾರಣ ನಾಯಕನ ಸ್ಥಾನದೊಂದಿಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಹಿಟ್​​ಮ್ಯಾನ್ ಆಗಮನದೊಂದಿಗೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಹೊರಬೀಳಲಿದ್ದಾರೆ.

ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್​ದತ್ ಪಡಿಕ್ಕಲ್.

ಇದನ್ನೂ ಓದಿ: IPL 2025: ಅನ್​ಸೋಲ್ಡ್ ಆದ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

ಭಾರತ-ಆಸ್ಟ್ರೇಲಿಯಾ ನಡುವಣ ಉಳಿದ ಟೆಸ್ಟ್ ಪಂದ್ಯಗಳ ವೇಳಾಪಟ್ಟಿ:

  • ಭಾರತ vs ಆಸ್ಟ್ರೇಲಿಯಾ, 2ನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (9:30 AM IST)
  • ಭಾರತ vs ಆಸ್ಟ್ರೇಲಿಯಾ, 3ನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್ (5:50 AM IST)
  • ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್ (5:00 AM IST)
  • ಭಾರತ vs ಆಸ್ಟ್ರೇಲಿಯಾ, 5ನೇ ಟೆಸ್ಟ್: ಜನವರಿ 2-7, ಸಿಡ್ನಿ (5:00 AM IST)

Published On - 10:18 am, Tue, 26 November 24

ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ