IND vs AUS 2nd Test LIVE: ಟಾಸ್ ಗೆದ್ದ ಆಸ್ಟ್ರೇಲಿಯಾ: ಭಾರತದ ಪ್ಲೇಯಿಂಗ್ XI ನಲ್ಲಿ ಒಂದು ಬದಲಾವಣೆ

India vs Australia 2nd Test: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

IND vs AUS 2nd Test LIVE: ಟಾಸ್ ಗೆದ್ದ ಆಸ್ಟ್ರೇಲಿಯಾ: ಭಾರತದ ಪ್ಲೇಯಿಂಗ್ XI ನಲ್ಲಿ ಒಂದು ಬದಲಾವಣೆ
IND vs AUS 2nd Test
Follow us
Vinay Bhat
|

Updated on:Feb 17, 2023 | 9:11 AM

ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ದ್ವಿತೀಯ ಟೆಸ್ಟ್​ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಕಾಂಗರೂ ಪಡೆಗೆ ಗೆಲುವು ಮುಖ್ಯವಾಗಿದೆ. ಇತ್ತ ಭಾರತಕ್ಕೂ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ದೃಷ್ಟಿಯಿಂದ ಜಯಿಸಬೇಕಿದೆ. ಉಭಯ ತಂಡಗಳು ಪ್ಲೇಯಿಂಗ್ ಇಲೆವೆನ್​ನಲ್ಲಿ (Playing XI) ಕೆಲವು ಬದಲಾವಣೆ ಮಾಡಲಾಗಿದೆ.

ಭಾರತ ಪರ ಓಪನರ್ ಆಗಿ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಅವರೇ ಆಡಲಿದ್ದಾರೆ. ಈ ಮೂಲಕ ಕಳಪೆ ಫಾರ್ಮ್​ನಲ್ಲಿರುವ ರಾಹುಲ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ. ಈ ಟೆಸ್ಟ್​ ಕೆಎಲ್​ಗೆ ಅಗ್ನಿಪರೀಕ್ಷೆಯಾಗಿದ್ದು ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದ್ದಾರೆ. ಚೇತೇಶ್ವರ್ ಪೂಜಾರ ಈ ಪಂದ್ಯದ ಮೂಲಕ 100ನೇ ಟೆಸ್ಟ್ ಆಡುತ್ತಿದ್ದಾರೆ. ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಶ್ರೇಯಸ್ ಅಯ್ಯರ್ ಫಿಟ್ ಆಗಿರುವ ಕಾರಣ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆದಿದ್ದು ಸೂರ್ಯಕುಮಾರ್ ಯಾದವ್​ರನ್ನು ಕೈಬಿಡಲಾಗಿದೆ.

ಕ್ಲಬ್​ನಲ್ಲಿ ಸೆಲ್ಫಿ ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ; 8 ಜನರ ವಿರುದ್ಧ ಪ್ರಕರಣ ದಾಖಲು

ಇದನ್ನೂ ಓದಿ
Image
Cheteshwar Pujara: ಚೇತೇಶ್ವರ್ ಪೂಜಾರ 100ನೇ ಟೆಸ್ಟ್​ಗೆ ಬಿಗ್ ಸರ್​ಪ್ರೈಸ್ ರೆಡಿ ಮಾಡಿದ ಬಿಸಿಸಿಐ: ಏನು ಗೊತ್ತೇ?
Image
IND vs AUS 2nd Test: ಇಂದಿನಿಂದ ಭಾರತ- ಆಸ್ಟ್ರೇಲಿಯಾ ದ್ವಿತೀಯ ಟೆಸ್ಟ್: ರೋಹಿತ್ ಪಡೆಯಲ್ಲಿ ಬದಲಾವಣೆ ಖಚಿತ
Image
Asia Cup 2023: 2 ದೇಶಗಳಲ್ಲಿ ನಡೆಯಲಿದೆ ಏಷ್ಯಾಕಪ್
Image
IND vs AUS 2nd Test: ಇಬ್ಬರು ಔಟ್, ಮತ್ತಿಬ್ಬರು ಇನ್​: ಹೀಗಿರಲಿದೆಯಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಈ ಪಂದ್ಯದಲ್ಲೂ ಭಾರತ ಮೂವರು ಆಲ್ರೌಂಡರ್​ಗಳೊಂದಿಗೆ ಕಣಕ್ಕಿಳಿಯುತ್ತಿದೆ. ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಸ್ಥಾನ ಪಡೆದುಕೊಂಡಿದ್ದಾರೆ. ವಿಕೆಟ್ ಕೀಪಿಂಗ್ ಜವಾಬ್ದಾರಿ ಕೆಎಸ್ ಭರತ್ ಅವರೇ ವಹಿಸಿಕೊಂಡಿದ್ದಾರೆ. ವೇಗಿಗಳಾಗಿ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಇತ್ತ ಆಸ್ಟ್ರೇಲಿಯಾ ತಂಡದಲ್ಲೂ ಬದಲಾವಣೆ ಮಾಡಲಾಗಿದೆ. ಕ್ಯಾಮ್ರೋನ್ ಗ್ರೀನ್ ಮತ್ತು ಮಿಚೆಲ್ ಸ್ಟಾರ್ಕ್ ಆಡುತ್ತಿಲ್ಲ. ಬದಲಾಗಿ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಈ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಜೊತೆಗೆ ಟ್ರಾವಿಸ್ ಹೆಡ್ ಸ್ಥಾನ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್.

ಪೂಜಾರಗೆ 100ನೇ ಟೆಸ್ಟ್:

ವಿಶೇಷ ಎಂದರೆ ಇದು ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅವರ 100ನೇ ಟೆಸ್ಟ್ ಪಂದ್ಯ. ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಪೂಜಾರ ಶತಕದ ಟೆಸ್ಟ್ ಆಡಿದ ಸಾಧನೆ ಮಾಡಲಿದ್ದಾರೆ. ಈ ಮೂಲಕ 100 ಅಂತರರಾಷ್ಟ್ರೀಯ ಟೆಸ್ಟ್‌ ಪಂದ್ಯಗಳಾಡಿದ ಭಾರತದ 13ನೇ ಆಟಗಾರ ಎಂಬ ಕೀರ್ತಿಗೆ ಪೂಜಾರ ಭಾಜನರಾಗಲಿದ್ದಾರೆ. 2010ರಲ್ಲಿ ಆಸ್ಟ್ರೇಲಿಯಾ ವಿರುದ್ದ ಅಂತರರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಪೂಜಾರ, ಇದೀಗ 100ನೇ ಟೆಸ್ಟ್‌ ಪಂದ್ಯವನ್ನೂ ಕೂಡ ಇದೇ ತಂಡದ ವಿರುದ್ಧ ಆಡುತ್ತಿರುವುದು ವಿಶೇಷ. ಇಲ್ಲಿಯವರೆಗೂ 99 ಟೆಸ್ಟ್‌ ಪಂದ್ಯಗಳಲ್ಲಿ ಭಾರತ ತಂಡವನ್ನುಪ್ರತಿನಿಧಿಸಿರುವ ಅವರು 19 ಶತಕಗಳು ಹಾಗೂ 34 ಅರ್ಧಶತಕಗಳೊಂದಿಗೆ 7021 ರನ್‌ಗಳನ್ನು ಗಳಿಸಿದ್ದಾರೆ. ಅಜೇಯ 206* ರನ್‌ ಇವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 am, Fri, 17 February 23

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ