ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಬದಲಾಗುವುದು ಖಚಿತ. ಏಕೆಂದರೆ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ಶುಭ್ಮನ್ ಗಿಲ್ ಕೂಡ ಈ ಮ್ಯಾಚ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಆಡುವ ಬಳಗದಲ್ಲಿ ಎರಡು ಬದಲಾವಣೆ ಕಂಡು ಬರುವುದು ಖಚಿತ.
ಈ ಎರಡು ಬದಲಾವಣೆಗಳೊಂದಿಗೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದನ್ನು ಲೆಜೆಂಡ್ ಸುನಿಲ್ ಗವಾಸ್ಕರ್ ಹೆಸರಿಸಿದ್ದಾರೆ. ಗವಾಸ್ಕರ್ ಪ್ರಕಾರ, ಅಡಿಲೇಡ್ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.
ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಕಳೆದ ಪಂದ್ಯದಲ್ಲಿ ಆರಂಭಿಕನಾಗಿ ಆಡಿದ ಕೆಎಲ್ ರಾಹುಲ್ ಆರನೇ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಆಲ್ ರೌಂಡರ್ ಗಳಾಗಿ ರವೀಂದ್ರ ಜಡೇಜಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳಲಿದ್ದಾರೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಹರ್ಷಿತ್ ರಾಣಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ೧೧ ಈ ಕೆಳಗಿನಂತೆ ಇರಲಿದೆ…
ಇದನ್ನೂ ಓದಿ: IPL 2025: RCB ತಂಡಕ್ಕೆ 4 ತವರು ಮೈದಾನ..!
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.
Published On - 7:10 am, Mon, 2 December 24