India Vs Australia 3rd Odi: ಭಾರತ-ಆಸ್ಟ್ರೇಲಿಯಾ ಫೈನಲ್ ಫೈಟ್: ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
India Vs Australia 3rd Odi: ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್ನಲ್ಲಿ ನೋಡಬಹುದು. ಹಾಗೆಯೇ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್-ಸ್ಟ್ರೀಮ್ ವೀಕ್ಷಿಸಬಹುದು.

India Vs Australia 3rd Odi: ಭಾರತ-ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯವು ನಾಳೆ (ಮಾ.22) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಅನ್ನು ಟೀಮ್ ಇಂಡಿಯಾ ಗೆದ್ದುಕೊಂಡರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಇದೀಗ ಅಂತಿಮ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಟ್ರೋಫಿಯನ್ನು ತನ್ನದಾಗಿಸಿಕೊಳ್ಳಲಿದೆ. ಇದೇ ಕಾರಣದಿಂದಾಗಿ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇನ್ನು ಈ ಪಂದ್ಯವು ಎಷ್ಟು ಗಂಟೆಗೆ ಶುರುವಾಗಲಿದೆ? ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
IND vs AUS 3ನೇ ದಿನ ಪಂದ್ಯ ಯಾವಾಗ ನಡೆಯಲಿದೆ?
3ನೇ ಏಕದಿನ ಪಂದ್ಯ ಮಾರ್ಚ್ 22, ಬುಧವಾರ ನಡೆಯಲಿದೆ.
ಈ ಪಂದ್ಯವು ಎಲ್ಲಿ ನಡೆಯಲಿದೆ?
ಮೂರನೇ ಏಕದಿನ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?
ಮಧ್ಯಾಹ್ನ 1:30 IST ಕ್ಕೆ ಪಂದ್ಯ ಆರಂಭವಾಗಲಿದೆ. ಇನ್ನು ಟಾಸ್ ಅನ್ನು ಪ್ರಕ್ರಿಯೆ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್ನಲ್ಲಿ ಇರಲಿದೆ. ಹಾಗೆಯೇ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್-ಸ್ಟ್ರೀಮ್ ವೀಕ್ಷಿಸಬಹುದು.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಯುಜ್ವೇಂದ್ರ ಚಾಹಲ್ , ಇಶಾನ್ ಕಿಶನ್, ರವೀಂದ್ರ ಜಡೇಜಾ , ವಿರಾಟ್ ಕೊಹ್ಲಿ , ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ಕೆಎಲ್ ರಾಹುಲ್ , ಶುಭಮನ್ ಗಿಲ್ , ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್ , ವಾಷಿಂಗ್ಟನ್ ಸುಂದರ್, ಸೂರ್ಯಕುಮಾರ್ ಯಾದವ್.
ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವ್ ಸ್ಮಿತ್ (ನಾಯಕ) ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜ್ಯೆ ರಿಚರ್ಡ್ಸನ್ , ಸ್ಟೀವ್ ಸ್ಮಿತ್ , ಮಾರ್ಕಸ್ ಸ್ಟೋಯಿನಿಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.
