India Vs Australia 3rd Odi: ಭಾರತ-ಆಸ್ಟ್ರೇಲಿಯಾ ಫೈನಲ್ ಫೈಟ್: ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

India Vs Australia 3rd Odi: ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್​ನಲ್ಲಿ ನೋಡಬಹುದು. ಹಾಗೆಯೇ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್-ಸ್ಟ್ರೀಮ್ ವೀಕ್ಷಿಸಬಹುದು.

India Vs Australia 3rd Odi: ಭಾರತ-ಆಸ್ಟ್ರೇಲಿಯಾ ಫೈನಲ್ ಫೈಟ್: ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
IND vs AUS
Updated By: ಝಾಹಿರ್ ಯೂಸುಫ್

Updated on: Mar 21, 2023 | 6:19 PM

India Vs Australia 3rd Odi: ಭಾರತ-ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯವು ನಾಳೆ (ಮಾ.22) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಅನ್ನು ಟೀಮ್ ಇಂಡಿಯಾ ಗೆದ್ದುಕೊಂಡರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಇದೀಗ ಅಂತಿಮ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಟ್ರೋಫಿಯನ್ನು ತನ್ನದಾಗಿಸಿಕೊಳ್ಳಲಿದೆ. ಇದೇ ಕಾರಣದಿಂದಾಗಿ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇನ್ನು ಈ ಪಂದ್ಯವು ಎಷ್ಟು ಗಂಟೆಗೆ ಶುರುವಾಗಲಿದೆ? ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

IND vs AUS 3ನೇ ದಿನ ಪಂದ್ಯ ಯಾವಾಗ ನಡೆಯಲಿದೆ?

3ನೇ ಏಕದಿನ ಪಂದ್ಯ ಮಾರ್ಚ್ 22, ಬುಧವಾರ ನಡೆಯಲಿದೆ.

ಈ ಪಂದ್ಯವು ಎಲ್ಲಿ ನಡೆಯಲಿದೆ?

ಮೂರನೇ ಏಕದಿನ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?

ಮಧ್ಯಾಹ್ನ 1:30 IST ಕ್ಕೆ ಪಂದ್ಯ ಆರಂಭವಾಗಲಿದೆ. ಇನ್ನು ಟಾಸ್ ಅನ್ನು ಪ್ರಕ್ರಿಯೆ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್​ನಲ್ಲಿ ಇರಲಿದೆ. ಹಾಗೆಯೇ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್-ಸ್ಟ್ರೀಮ್ ವೀಕ್ಷಿಸಬಹುದು.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಯುಜ್ವೇಂದ್ರ ಚಾಹಲ್ , ಇಶಾನ್ ಕಿಶನ್, ರವೀಂದ್ರ ಜಡೇಜಾ , ವಿರಾಟ್ ಕೊಹ್ಲಿ , ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ಕೆಎಲ್ ರಾಹುಲ್ , ಶುಭಮನ್ ಗಿಲ್ , ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್ , ವಾಷಿಂಗ್ಟನ್ ಸುಂದರ್, ಸೂರ್ಯಕುಮಾರ್ ಯಾದವ್.

ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವ್ ಸ್ಮಿತ್ (ನಾಯಕ) ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜ್ಯೆ ರಿಚರ್ಡ್ಸನ್ , ಸ್ಟೀವ್ ಸ್ಮಿತ್ , ಮಾರ್ಕಸ್ ಸ್ಟೋಯಿನಿಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.