IND vs AUS: ಭಾರತ ಬೌಲಿಂಗ್, ಆಸೀಸ್ ತಂಡದಲ್ಲಿ ಬದಲಾವಣೆ; ಉಭಯ ತಂಡಗಳು ಹೀಗಿವೆ

IND vs AUS: ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ.

IND vs AUS: ಭಾರತ ಬೌಲಿಂಗ್, ಆಸೀಸ್ ತಂಡದಲ್ಲಿ ಬದಲಾವಣೆ; ಉಭಯ ತಂಡಗಳು ಹೀಗಿವೆ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Mar 22, 2023 | 1:24 PM

ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ (MA Chidambaram Stadium ) ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವೆ ನಡೆಯುತ್ತಿದೆ. ಈಗಾಗಲೇ ಈ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ (Steve Smith) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯವನ್ನು ಗೆಲ್ಲುವ ತಂಡ ಸರಣಿ ವಿಜೇತರಾಗುವುದರಿಂದ ಈ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು ಭಾರತ ಗೆದ್ದಿತ್ತು. ಆದರೆ ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಅದ್ಭುತವಾಗಿ ಆಡಿ, ಏಕಪಕ್ಷೀಯವಾಗಿ ಭಾರತವನ್ನು ಸೋಲಿಸುವ ಮೂಲಕ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತ್ತು. ಟೆಸ್ಟ್ ಸರಣಿ ಸೋತಿರುವ ಆಸ್ಟ್ರೇಲಿಯಾಕ್ಕೆ ಈ ಸರಣಿ ಮಹತ್ವದಾಗಿದ್ದು, ಈ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇತ್ತ ರೋಹಿತ್ ಶರ್ಮಾ (Rohit Sharma) ಪಡೆ ಟೆಸ್ಟ್ ಸರಣಿಯೊಂದಿಗೆ ಏಕದಿನ ಸರಣಿಯನ್ನು ಬುಟ್ಟಿಗೆ ಹಾಕಿಕೊಳ್ಳುವ ಯೋಜನೆಯಲ್ಲಿದೆ.

ಈ ವರ್ಷ ವಿಶ್ವಕಪ್ ಪಂದ್ಯಾವಳಿ ನಡೆಯಲಿದ್ದು, ರೋಹಿತ್ ಶರ್ಮಾ ತಂಡಕ್ಕೆ ವಿಶ್ವಕಪ್ ತಯಾರಿಯ ದೃಷ್ಟಿಯಿಂದ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಇದುವರೆಗಿನ ಈ ಸರಣಿಯಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್‌ಮನ್‌ಗಳು ಅಟ್ಟರ್ ಫ್ಲಾಪ್ ಆಗಿದ್ದರು.

IND vs AUS 3rd ODI: ಭಾರತ-ಆಸ್ಟ್ರೇಲಿಯಾ ನಿರ್ಣಾಯಕ ಮೂರನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?: ಇಲ್ಲಿದೆ ಮಾಹಿತಿ

ಬ್ಯಾಟಿಂಗ್ ವಿಭಾಗ ಕ್ಲಿಕ್ ಆಗಬೇಕಿದೆ

ಮುಂಬೈ ಏಕದಿನ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆದಿತ್ತು. ಮುಂಬೈನಲ್ಲಿ ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಅವರ ಬ್ಯಾಟ್ ಮಾತ್ರ ಕೆಲಸ ಮಾಡಿತ್ತು. ರಾಹುಲ್ ಔಟಾಗದೆ 75 ರನ್ ಗಳಿಸಿದರೆ, ಜಡೇಜಾ 45 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತ ತಂಡದ ನಿಯಮಿತ ನಾಯಕ ರೋಹಿತ್ ಶರ್ಮಾ ಕೌಟುಂಬಿಕ ಕಾರಣಗಳಿಂದ ಮೊದಲ ಏಕದಿನ ಆಡಲು ಸಾಧ್ಯವಾಗಿರಲಿಲ್ಲ. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ತಂಡಕ್ಕೆ ಎಂಟ್ರಿಕೊಟ್ಟ ರೋಹಿತ್​ಗೆ ಸೋಲಿನ ಸ್ವಾಗತ ಎದುರಾಯಿತು. ಎರಡನೇ ಏಕದಿನ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಭಾರತದ ಪರ ವಿರಾಟ್ ಕೊಹ್ಲಿ ಗರಿಷ್ಠ 31 ರನ್ ಗಳಿಸಿದರೆ, ಶುಭ್​ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಖಾತೆಯನ್ನು ಸಹ ತೆರೆಯಲಿಲ್ಲ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೊಯಿನಿಸ್, ಆಷ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Wed, 22 March 23

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ