Virat Kohli Dance: ಮೈದಾನದಲ್ಲಿ ಕಿಂಗ್ ಕೊಹ್ಲಿಯ ಮಸ್ತ್ ಡ್ಯಾನ್ಸ್: ವಿಡಿಯೋ ವೈರಲ್
India vs Australia 3rd Odi: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಏಕದಿನ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್ಗಳಿಂದ ಗೆದ್ದುಕೊಂಡಿದ್ದರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ಗಳಿಂದ ಜಯಭೇರಿ ಬಾರಿಸಿತ್ತು.

India vs Australia 3rd Odi: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿಯಾಗಿದೆ. ಮೂರು ಪಂದ್ಯಗಳ ಸರಣಿಯ ಅಂತಿಮ ಪಂದ್ಯವು ನಿರ್ಣಾಯಕವಾಗಿದ್ದು, ಹೀಗಾಗಿ ಉಭಯ ತಂಡಗಳು ಗೆಲ್ಲುವ ಛಲದೊಂದಿಗೆ ಕಣಕ್ಕಿಳಿದಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಟೀಮ್ ಇಂಡಿಯಾ ಫೀಲ್ಡಿಂಗ್ಗೆ ಇಳಿದಿದ್ದರು. ಇತ್ತ ಭಾರತ ತಂಡದ ಕೆಲ ಆಟಗಾರರು ಹಡ್ಡಲ್ಗಾಗಿ ಸಹ ಆಟಗಾರರನ್ನು ಕಾಯುತ್ತಾ ನಿಂತಿದ್ದರು. ಇದೇ ವೇಳೆ ತಮ್ಮದೇ ಲೋಕದಲ್ಲಿ ಮುಳುಗಿದ್ದ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ಮೈದಾನದಲ್ಲಿ ಮಸ್ತ್ ಸ್ಟೆಪ್ಸ್ ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸಿದರು.
ಸ್ಟೇಡಿಯಂನಲ್ಲಿ ಮೊಳಗಿದ ಜನಪ್ರಿಯ ಲುಂಗಿ ಡ್ಯಾನ್ಸ್ ಹಾಡಿಗೆ ಕೆಲ ಕ್ಷಣಗಳ ಕಾಲ ನರ್ತಿಸುವ ಮೂಲಕ ವಿರಾಟ್ ಕೊಹ್ಲಿ ತಮ್ಮದೇ ಲೋಕದಲ್ಲಿ ತೇಲಾಡಿದರು. ಇದೀಗ ಕಿಂಗ್ ಕೊಹ್ಲಿಯ ಲುಂಗಿ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ತಮ್ಮ ನೆಚ್ಚಿನ ಕ್ರಿಕೆಟಿಗನ ಡ್ಯಾನ್ಸ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ವಿರಾಟ್ ಕೊಹ್ಲಿ ಮೈದಾನದಲ್ಲಿ ಡ್ಯಾನ್ಸ್ ಮಾಡುತ್ತಿರುವುದು ಇದೇ ಮೊದಲೇನಲ್ಲ. ಮೈದಾನದಲ್ಲಿ ಸದಾ ಸಕ್ರೀಯರಾಗಿರುವ ಕೊಹ್ಲಿ ಈ ಹಿಂದೆ ಕೂಡ ಹಾಡು ಮೊಳಗುತ್ತಿದ್ದಂತೆ ಡ್ಯಾನ್ಸ್ ಮಾಡಿ ಹಲವು ಬಾರಿ ರಂಜಿಸಿದ್ದರು. ಅದರ ಮುಂದುವರೆದ ಭಾಗ ಈಗಿನ ಲುಂಗಿ ಡ್ಯಾನ್ಸ್.
Lungi Dance per Virat KOhli ka dance pic.twitter.com/mBKvZizPaN
— javed ansari (@javedan00643948) March 22, 2023
ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಏಕದಿನ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್ಗಳಿಂದ ಗೆದ್ದುಕೊಂಡಿದ್ದರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ಗಳಿಂದ ಜಯಭೇರಿ ಬಾರಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಗೆದ್ದ ತಂಡವು ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿಯೇ ಈ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಕೆಎಲ್ ರಾಹುಲ್ ( ವಿಕೆಟ್ ಕೀಪರ್ ) , ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ , ಕುಲದೀಪ್ ಯಾದವ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಸ್ಟೀವನ್ ಸ್ಮಿತ್ (ನಾಯಕ) , ಮಾರ್ನಸ್ ಲ್ಯಾಬುಶೇನ್, ಅಲೆಕ್ಸ್ ಕ್ಯಾರಿ ( ವಿಕೆಟ್ ಕೀಪರ್ ) , ಮಾರ್ಕಸ್ ಸ್ಟೊಯಿನಿಸ್ , ಆಷ್ಟನ್ ಅಗರ್ , ಸೀನ್ ಅಬಾಟ್ , ಮಿಚೆಲ್ ಸ್ಟಾರ್ಕ್ , ಆ್ಯಡಂ ಝಂಪಾ.




