ಭಾರತ ಮತ್ತು ಆಸ್ಟ್ರೇಲಿಯಾ (India and Australia) ನಡುವಿನ 3 ಟಿ20 ಪಂದ್ಯಗಳ ಸರಣಿಯ ಅಂತಿಮ ಪಂದ್ಯ ಹೈದರಾಬಾದ್‌ನಲ್ಲಿ ಸೆಪ್ಟೆಂಬರ್ 25 ರಂದು ನಡೆಯಲಿದೆ. ಮೊಹಾಲಿ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳಿಂದ ಸೋತಿತ್ತು. ಇದಾದ ಬಳಿಕ ನಾಗ್ಪುರದಲ್ಲಿ ಭರ್ಜರಿ ಪ್ರತಿದಾಳಿ ನಡೆಸಿದ ರೋಹಿತ್ ಶರ್ಮಾ (Rohit Sharma) ನಾಯಕತ್ವದ ತಂಡ 6 ವಿಕೆಟ್‌ಗಳಿಂದ ಪಂದ್ಯ ಗೆದ್ದು ಸರಣಿಯನ್ನು 1-1 ರಲ್ಲಿ ಸಮಬಲಗೊಳಿಸಿದೆ. ಈಗ ಎರಡೂ ತಂಡಗಳ ಕಣ್ಣುಗಳು ಫೈನಲ್ ಪಂದ್ಯದತ್ತ ನೆಟ್ಟಿದೆ. ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ (T20 World Cup) ಉಭಯ ತಂಡಗಳಿಗೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡದ ಮುಂದೆ ತನ್ನ ಸಿದ್ಧತೆಯನ್ನು ಪರೀಕ್ಷಿಸಲು ಭಾರತಕ್ಕೆ ಉತ್ತಮ ಅವಕಾಶವಿದೆ.
ಬುಮ್ರಾ ಮತ್ತು ಹರ್ಷಲ್ ಪಟೇಲ್ ಮೇಲೆ ಕಣ್ಣು
ಈ ಸರಣಿಗೆ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಇಂಜುರಿಯಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಇಬ್ಬರೂ ತಮ್ಮ ಹಳೆಯ ಫಾರ್ಮ್ನಲ್ಲಿ ಇನ್ನೂ ಕಾಣಿಸಿಕೊಂಡಿಲ್ಲವಾದರೂ, 2ನೇ ಟಿ20 ಪಂದ್ಯದಲ್ಲಿ ಅಖಾಡಕ್ಕಿಳಿದಿದ್ದ ಬುಮ್ರಾ ನಿಖರ ಯಾರ್ಕರ್ ಮೂಲಕ ಆಸೀಸ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಆದರೆ ಡೆತ್ ಓವರ್ ಸ್ಪೇಷಲಿಸ್ಟ್ ಎಂದೇ ಕರೆಸಿಕೊಳ್ಳುವ ಹರ್ಷಲ್ ಪಟೇಲ್ ಯಾಕೋ ಈ ಎರಡು ಪಂದ್ಯಗಳಲ್ಲಿ ದುಬಾರಿಯಾದರು. 2ನೇ ಟಿ20 ಪಂದ್ಯದಲ್ಲಂತೂ ಹಿಗ್ಗಾಮುಗ್ಗಾ ರನ್ ಬಿಟ್ಟುಕೊಟ್ಟ ಹರ್ಷಲ್ ಮೇಲೆ ರೋಹಿತ್ಗೆ ಕೊಂಚ ವಿಶ್ವಾಸ ಕಡಿಮೆಯಾದಂತೆ ಕಾಣುತ್ತಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಹರ್ಷಲ್ ಆಡುತ್ತಾರೋ, ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ನಾಗ್ಪುರದಲ್ಲಿ ನಡೆದ ಎರಡನೇ ಟಿ20 ಪಂದ್ಯದ ಕುರಿತು ಮಾತನಾಡುವುದಾದರೆ, ಮಳೆ ಪೀಡಿತ ಈ ಪಂದ್ಯವನ್ನು 8 ಓವರ್‌ಗಳವರೆಗೆ ಸೀಮಿತಗೊಳಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ ಓವರ್‌ನಲ್ಲಿ 5 ವಿಕೆಟ್‌ಗೆ 90 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ 4 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.
ನಿರ್ಣಾಯಕ ಪಂದ್ಯದ ಬಗ್ಗೆ ಮಾಹಿತಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಸೆಪ್ಟೆಂಬರ್ 25 ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ನೇ T20 ಪಂದ್ಯ ಎಲ್ಲಿ ನೇರ ಪ್ರಸಾರವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ನೇ T20I ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ T20 ನ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಇದಲ್ಲದೆ, ನೀವು tv9kannada.com ನ ಲೈವ್ ಬ್ಲಾಗ್‌ನಿಂದಲೂ ಪಂದ್ಯದ ಮಾಹಿತಿಯನ್ನು ಪಡೆಯಬಹುದು.
Published On - 5:33 pm, Sat, 24 September 22