IND vs AUS: ಹೆಚ್ಚುವರಿ ಬೌಲರ್​ಗೆ ಆಧ್ಯತೆ; 3ನೇ ಟಿ20 ಪಂದ್ಯಕ್ಕೆ ತಂಡ ಬದಲಿಸ್ತಾರಾ ಸೂರ್ಯ?

IND vs AUS: ವಾಸ್ತವವಾಗಿ, ಯಾವುದೇ ನಾಯಕನು ತನ್ನ ವಿಜೇತ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಬಯಸುವುದಿಲ್ಲ. ಆದರೆ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ.

IND vs AUS: ಹೆಚ್ಚುವರಿ ಬೌಲರ್​ಗೆ ಆಧ್ಯತೆ; 3ನೇ ಟಿ20 ಪಂದ್ಯಕ್ಕೆ ತಂಡ ಬದಲಿಸ್ತಾರಾ ಸೂರ್ಯ?
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Nov 27, 2023 | 6:46 PM

ಏಕದಿನ ವಿಶ್ವಕಪ್​ನ (ODI World Cup 2023) ಫೈನಲ್ ಪಂದ್ಯದಲ್ಲಿ ಸೋತು ಚಾಂಪಿಯನ್ ಪಟ್ಟದಿಂದ ವಂಚಿತವಾಗಿದ್ದ ಟೀಂ ಇಂಡಿಯಾ ತನ್ನ ಉತ್ತಮ ಫಾರ್ಮ್‌ ಅನ್ನು ಮುಂದುವರೆಸಿದೆ. ಆಸ್ಟ್ರೇಲಿಯಾ ವಿರುದ್ಧ (India vs Australia) ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಈ ತಂಡ ಅದ್ಭುತ ಪ್ರದರ್ಶನ ನೀಡಿದ್ದು, ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ 2-0 ಮುನ್ನಡೆ ಸಾಧಿಸಿದೆ. ಮೂರನೇ ಪಂದ್ಯ ಮಂಗಳವಾರ ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವುದರ ಮೇಲೆ ಟೀಂ ಇಂಡಿಯಾದ (Team India) ದೃಷ್ಟಿ ನೆಟ್ಟಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿ ತನ್ನ ಕೈವಶವಾಗಲಿದೆ. ಅದಕ್ಕೂ ಮೊದಲು ಮೂರನೇ ಪಂದ್ಯಕ್ಕೆ ಯಾವ ಆಡುವ ಹನ್ನೊಂದರ ಬಳಗದೊಂದಿಗೆ ಸೂರ್ಯ (Suryakumar Yadav) ಕಣಕ್ಕಿಳಿಯುತ್ತಾರೆ ಎಂಬುದು ಪ್ರಶ್ನೆಯಾಗಿದೆ.

ಮೊದಲೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಒಂದೇ ತಂಡವನ್ನು ಕಣಕ್ಕಿಳಿಸಿತ್ತು. ವಿಶಾಖಪಟ್ಟಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದರೆ, ತಿರುವನಂತಪುರಂನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ ಅದೇ ತಂಡವನ್ನು ಸೋಲಿಸಿತ್ತು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ತನ್ನ ಪ್ಲೇಯಿಂಗ್-11ರಲ್ಲಿ ಬದಲಾವಣೆ ಮಾಡುತ್ತಾದೋ? ಇಲ್ಲವೋ ಎಂಬುದನ್ನು ಮೂರನೇ ಪಂದ್ಯದಲ್ಲಿ ನೋಡಬೇಕಿದೆ.

ಕ್ರೀಡಾ ಸಚಿವರಿಗೆ ಗೇಟ್​ಪಾಸ್! ಕ್ರಿಕೆಟ್​ಗೋಸ್ಕರ ಶ್ರೀಲಂಕಾದಲ್ಲಿ ಏನೇನೆಲ್ಲ ನಡೆಯುತ್ತಿದೆ ಗೊತ್ತಾ?

ತಂಡದಲ್ಲಾಗುತ್ತಾ ಬದಲಾವಣೆ?

ವಾಸ್ತವವಾಗಿ, ಯಾವುದೇ ನಾಯಕನು ತನ್ನ ವಿಜೇತ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಬಯಸುವುದಿಲ್ಲ. ಆದರೆ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಈ ಪಂದ್ಯ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಕ್ರೀಡಾಂಗಣದ ಪಿಚ್‌ ಬ್ಯಾಟರ್​ಗಳಿಗೆ ಹೆಚ್ಚು ಸಹಕಾರಿಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸೂರ್ಯಕುಮಾರ್ ತನ್ನ ತಂಡದಲ್ಲಿ ಹೆಚ್ಚುವರಿಯಾಗಿ ಬೌಲರ್​ನನ್ನು ಆಯ್ಕೆ ಮಾಡಬಹುದಾಗಿದೆ. ಸದ್ಯ ತಂಡದಲ್ಲಿ ಐವರು ಬೌಲರ್‌ಗಳಿದ್ದಾರೆ. ಸೂರ್ಯಕುಮಾರ್ ಈ ಪಂದ್ಯದಲ್ಲಿ ತಿಲಕ್ ವರ್ಮಾ ಅವರನ್ನು ಬಿಟ್ಟು ಶಿವಂ ದುಬೆಗೆ ಅವಕಾಶ ನೀಡಬಹುದಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್‌ನಲ್ಲಿ ಖ್ಯಾತಿ ಗಳಿಸಿದ್ದ ತಿಲಕ್ ಮೊದಲೆರಡು ಪಂದ್ಯಗಳಲ್ಲಿ ವಿಶೇಷ ಏನನ್ನೂ ಮಾಡಿಲ್ಲ.

ಹೀಗಾಗಿ ಶಿವಂ ದುಬೆ ಆಲ್ ರೌಂಡರ್ ಆಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಆರನೇ ಬೌಲಿಂಗ್ ಆಯ್ಕೆಯನ್ನು ಹೊಂದಿರುತ್ತದೆ. ಒಂದು ವೇಳೆ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಯಾವುದೇ ಬೌಲರ್ ದುಬಾರಿಯಾದರೂ ದುಬೆ ಅಧಿಕ ಬೌಲರ್​ ಆಗಿ ತಂಡಕ್ಕೆ ನೆರವಾಗಬಹುದು. ದುಬೆ ಕೂಡ ಬ್ಯಾಟಿಂಗ್​ನಲ್ಲಿ ವೇಗವಾಗಿ ರನ್ ಕಲೆಹಾಕುವ ಸಾಮಥ್ಯ್ರ ಹೊಂದಿದ್ದಾರೆ. ಆದ್ದರಿಂದ ದುಬೆಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

ಬ್ಯಾಟಿಂಗ್​ ವಿಭಾಗದಲ್ಲಿ ಬದಲಾವಣೆಗಳಿಲ್ಲ

ಈ ಸರಣಿಯಲ್ಲಿ ಭಾರತ ತಂಡದ ಬ್ಯಾಟಿಂಗ್ ಅತ್ಯುತ್ತಮವಾಗಿದೆ. ಕಳೆದ ಪಂದ್ಯದಲ್ಲಿ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ಗಳಿಬ್ಬರೂ ಅರ್ಧಶತಕ ಸಿಡಿಸಿದ್ದರು. ಯಶಸ್ವಿ ಜೈಸ್ವಾಲ್ 53 ರನ್ ಮತ್ತು ರುತುರಾಜ್ ಗಾಯಕ್ವಾಡ್ 58 ರನ್ ಗಳಿಸಿದರು. ಇಶಾನ್ ಕಿಶನ್ 52 ರನ್ ಬಾರಿಸಿದ್ದರು. ಅಲ್ಲದೆ ಎರಡೂ ಪಂದ್ಯಗಳಲ್ಲಿ ರಿಂಕು ಸಿಂಗ್ ಬಿರುಸಿನ ಬ್ಯಾಟಿಂಗ್ ನಡೆಸಿದರು. ಇಂತಹ ಪರಿಸ್ಥಿತಿಯಲ್ಲಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಇಲ್ಲ.

ಭಾರತ ಸಂಭಾವ್ಯ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:43 pm, Mon, 27 November 23

ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್