IND vs AUS 3rd T20 Highlights: ರುತುರಾಜ್ ಶತಕ ವ್ಯರ್ಥ; 3ನೇ ಟಿ20 ಪಂದ್ಯ ಗೆದ್ದ ಆಸ್ಟ್ರೇಲಿಯಾ

ಪೃಥ್ವಿಶಂಕರ
|

Updated on:Nov 28, 2023 | 11:09 PM

India vs Australia 3rd T20I Highlights in Kannada: ಗ್ಲೆನ್ ಮ್ಯಾಕ್ಸ್‌ವೆಲ್ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಗುವಾಹಟಿಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ಇದರೊಂದಿಗೆ ಆಸ್ಟ್ರೇಲಿಯಾ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಇನ್ನೂ 2-1 ಅಂತರದಿಂದ ಮುನ್ನಡೆಯಲ್ಲಿದೆ.

IND vs AUS 3rd T20 Highlights: ರುತುರಾಜ್ ಶತಕ ವ್ಯರ್ಥ; 3ನೇ ಟಿ20 ಪಂದ್ಯ ಗೆದ್ದ ಆಸ್ಟ್ರೇಲಿಯಾ
ಭಾರತ- ಆಸ್ಟ್ರೇಲಿಯಾ

ಗ್ಲೆನ್ ಮ್ಯಾಕ್ಸ್‌ವೆಲ್ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಗುವಾಹಟಿಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ಇದರೊಂದಿಗೆ ಆಸ್ಟ್ರೇಲಿಯಾ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಇನ್ನೂ 2-1 ಅಂತರದಿಂದ ಮುನ್ನಡೆಯಲ್ಲಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ರುತುರಾಜ್ ಅವರ ಅಜೇಯ 123 ರನ್‌ಗಳ ಆಧಾರದ ಮೇಲೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 222 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಮ್ಯಾಕ್ಸ್‌ವೆಲ್ ಅವರ ಅಜೇಯ 104 ರನ್‌ಗಳ ಆಧಾರದ ಮೇಲೆ ಐದು ವಿಕೆಟ್‌ಗಳನ್ನು ಕಳೆದುಕೊಂಡು ಕೊನೆಯ ಓವರ್‌ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಮ್ಯಾಕ್ಸ್‌ವೆಲ್ ತಮ್ಮ ಇನ್ನಿಂಗ್ಸ್‌ನಲ್ಲಿ 48 ಎಸೆತಗಳನ್ನು ಎದುರಿಸಿ ಎಂಟು ಬೌಂಡರಿಗಳ ಹೊರತಾಗಿ ಎಂಟು ಸಿಕ್ಸರ್‌ಗಳನ್ನು ಬಾರಿಸಿದರು. ರುತುರಾಜ್ 57 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ ಶತಕ ಸಿಡಿಸಿದರು. ಇದು ರುತುರಾಜ್ ಅವರ ಮೊದಲ ಟಿ20 ಅಂತಾರಾಷ್ಟ್ರೀಯ ಶತಕವಾಗಿದೆ.

LIVE NEWS & UPDATES

The liveblog has ended.
  • 28 Nov 2023 10:50 PM (IST)

    ಭಾರತಕ್ಕೆ ಸೋಲು

    ಮ್ಯಾಕ್ಸ್‌ವೆಲ್‌ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಗುವಾಹಟಿಯಲ್ಲಿ ನಡೆದ ಮೂರನೇ ಟಿ20 ಪಂದ್ಯವನ್ನು ಆಸ್ಟ್ರೇಲಿಯಾ 5 ವಿಕೆಟ್‌ಗಳಿಂದ ಗೆದ್ದುಕೊಂಡಿದೆ.

  • 28 Nov 2023 10:49 PM (IST)

    ಮ್ಯಾಕ್ಸ್‌ವೆಲ್‌ ಶತಕ

    ಮ್ಯಾಕ್ಸ್‌ವೆಲ್‌ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಆಸ್ಟ್ರೇಲಿಯಾಕ್ಕೆ ಒಂದು ಎಸೆತದಲ್ಲಿ 2 ರನ್ ಅಗತ್ಯವಿದೆ

  • 28 Nov 2023 10:48 PM (IST)

    6 ಎಸೆತಗಳಲ್ಲಿ 12 ರನ್ ಅಗತ್ಯ

    ಆಸ್ಟ್ರೇಲಿಯಾಕ್ಕೆ 6 ಎಸೆತಗಳಲ್ಲಿ 12 ರನ್ ಅಗತ್ಯವಿದೆ, ಭಾರತಕ್ಕೆ ಒಂದು ವಿಕೆಟ್ ಬೇಕಿದೆ.

  • 28 Nov 2023 10:48 PM (IST)

    ವೇಡ್‌ ಕ್ಯಾಚ್ ಬಿಟ್ಟ ಸೂರ್ಯ

    ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರು ಆಸ್ಟ್ರೇಲಿಯಾದ ನಾಯಕ ಮ್ಯಾಥ್ಯೂ ವೇಡ್ ಅವರ ಕ್ಯಾಚ್ ಅನ್ನು ಕೈಬಿಟ್ಟರು. ಪಂದ್ಯ ರೋಚಕವಾಗಿದೆ.

  • 28 Nov 2023 10:46 PM (IST)

    18 ಓವರ್‌ ಅಂತ್ಯ

    ಆಸ್ಟ್ರೇಲಿಯಾ ತಂಡ 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿದೆ.

  • 28 Nov 2023 10:26 PM (IST)

    ಶತಕದತ್ತ ಮ್ಯಾಕ್ಸ್‌ವೆಲ್

    ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಅಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದಾರೆ. ತಂಡಕ್ಕೆ 18 ಎಸೆತಗಳಲ್ಲಿ 48 ರನ್ ಬೇಕು

  • 28 Nov 2023 10:18 PM (IST)

    ಮ್ಯಾಕ್ಸ್‌ವೆಲ್ ಸ್ಫೋಟಕ ಅರ್ಧಶತಕ

    ಗ್ಲೆನ್ ಮ್ಯಾಕ್ಸ್‌ವೆಲ್ ಭಾರತದ ವಿರುದ್ಧ ಕೇವಲ 28 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ್ದಾರೆ.

  • 28 Nov 2023 10:05 PM (IST)

    ಡೇವಿಡ್ ಶೂನ್ಯಕ್ಕೆ ಔಟ್

    ಟೀಂ ಇಂಡಿಯಾ, ಆಸ್ಟ್ರೇಲಿಯಾಕ್ಕೆ ಐದನೇ ಹೊಡೆತ ನೀಡಿದೆ. ರವಿ ಬಿಷ್ಣೋಯ್ ಟಿಮ್ ಡೇವಿಡ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದ್ದಾರೆ.

  • 28 Nov 2023 10:02 PM (IST)

    ಸ್ಟೋಯ್ನಿಸ್ ಔಟ್

    ಆಸ್ಟ್ರೇಲಿಯ ತಂಡ 128 ರನ್‌ಗಳಿಗೆ ನಾಲ್ಕನೇ ವಿಕೆಟ್ ಕಳೆದುಕೊಂಡಿತು. ಮಾರ್ಕಸ್ ಸ್ಟೋಯ್ನಿಸ್ 17 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.

  • 28 Nov 2023 09:55 PM (IST)

    ಆಸೀಸ್​ಗೆ ಮ್ಯಾಕ್ಸ್​ವೆಲ್ ಆಸರೆ

    ಆಸ್ಟ್ರೇಲಿಯ ತಂಡ 12 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿದೆ. ಗ್ಲೆನ್ ಮ್ಯಾಕ್ಸ್‌ವೆಲ್ 33 ರನ್ ಮತ್ತು ಮಾರ್ಕಸ್ ಸ್ಟೊಯಿನಿಸ್ 16 ರನ್ ಗಳಿಸಿ ಆಡುತ್ತಿದ್ದಾರೆ.

  • 28 Nov 2023 09:46 PM (IST)

    8 ಓವರ್‌ ಮುಕ್ತಾಯ

    ಆಸ್ಟ್ರೇಲಿಯ ತಂಡ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಸದ್ಯ ಕ್ರೀಸ್‌ನಲ್ಲಿದ್ದಾರೆ.

  • 28 Nov 2023 09:29 PM (IST)

    ಮೂರನೇ ಹೊಡೆತ

    ಆಸ್ಟ್ರೇಲಿಯ ತಂಡ 68 ರನ್‌ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿತು. ಜೋಶ್ ಇಂಗ್ಲಿಸ್ 10 ರನ್ ಗಳಿಸಿ ಔಟಾದರು.

  • 28 Nov 2023 09:26 PM (IST)

    2ನೇ ವಿಕೆಟ್ ಪತನ

    ಆಸ್ಟ್ರೇಲಿಯದ ತನ್ನ ಎರಡನೇ ವಿಕೆಟ್ ಕಳೆದುಕೊಂಡಿದೆ. ಟ್ರಾವಿಸ್ ಹೆಡ್ 35 ರನ್ ಗಳಿಸಿ ಔಟಾದರು. ಆಸ್ಟ್ರೇಲಿಯಾ 6 ಓವರ್‌ಗಳಲ್ಲಿ 67 ರನ್ ಗಳಿಸಿದೆ.

  • 28 Nov 2023 09:20 PM (IST)

    ಹಾರ್ಡಿ ಔಟ್

    ಆಸ್ಟ್ರೇಲಿಯ ತಂಡ 47 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿದೆ. ಅರ್ಷದೀಪ್ ಸಿಂಗ್, ಆರನ್ ಹಾರ್ಡಿ ವಿಕೆಟ್ ಪಡೆದರು.

  • 28 Nov 2023 09:15 PM (IST)

    4 ಓವರ್‌ಗಳಲ್ಲಿ 46 ರನ್

    ಆಸ್ಟ್ರೇಲಿಯಾ ತಂಡ 4 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 46 ರನ್ ಗಳಿಸಿದೆ. ಟ್ರಾವಿಸ್ ಹೆಡ್ 26 ರನ್ ಮತ್ತು ಆರೋನ್ ಹಾರ್ಡಿ 16 ರನ್ ಗಳಿಸಿ ಆಡುತ್ತಿದ್ದಾರೆ.

  • 28 Nov 2023 09:08 PM (IST)

    ಆಸೀಸ್​ಗೆ ಅಬ್ಬರದ ಆರಂಭ

    ಆಸ್ಟ್ರೇಲಿಯಾ ತಂಡ ವೇಗವಾಗಿ ಆರಂಭ ಮಾಡಿದೆ. ಮೊದಲ 2 ಓವರ್‌ಗಳಲ್ಲಿ ಆಸ್ಟ್ರೇಲಿಯಾ 25 ರನ್ ಗಳಿಸಿದೆ. ಟ್ರಾವಿಸ್ ಹೆಡ್ ಮತ್ತು ಆ್ಯರೋನ್ ಹಾರ್ಡಿ ಕ್ರೀಸ್‌ನಲ್ಲಿದ್ದಾರೆ.

  • 28 Nov 2023 08:46 PM (IST)

    223 ರನ್ ಟಾರ್ಗೆಟ್

    ಮೂರನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ 200 ರನ್ ಗಡಿ ದಾಟಿದೆ. ಸರಣಿಯ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 222 ರನ್ ಗಳಿಸಿದೆ. ರುತುರಾಜ್ ಗಾಯಕ್ವಾಡ್ 123 ರನ್ ಗಳಿಸಿ ಅಜೇಯರಾಗಿ ಉಳಿದರೆ, ಸೂರ್ಯಕುಮಾರ್ ಯಾದವ್ 39 ರನ್ ಹಾಗೂ ತಿಲಕ್ ವರ್ಮಾ ಕೂಡ 31 ರನ್​ಗಳ ಕೊಡುಗೆ ನೀಡಿದರು.

  • 28 Nov 2023 08:43 PM (IST)

    ಗಾಯಕ್ವಾಡ್ ಶತಕ

    ರಿತುರಾಜ್ ಗಾಯಕ್ವಾಡ್ ತಮ್ಮ ಟಿ20 ವೃತ್ತಿಜೀವನದ ಮೊದಲ ಶತಕ ದಾಖಲಿಸಿದ್ದಾರೆ. ಶತಕ ಗಳಿಸಲು ಅವರು 52 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 123 ರನ್ ಕಲೆಹಾಕಿದರು.

  • 28 Nov 2023 08:30 PM (IST)

    ರುತುರಾಜ್ ಸಿಡಿಲಬ್ಬರದ ಬ್ಯಾಟಿಂಗ್

    18ನೇ ಓವರ್​ನಲ್ಲಿ ರುತುರಾಜ್ 3 ಭರ್ಜರಿ ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿದರು.

  • 28 Nov 2023 08:23 PM (IST)

    16 ಓವರ್‌ ಪೂರ್ಣ

    16 ಓವರ್‌ಗಳಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿದೆ. ರಿತುರಾಜ್ ಗಾಯಕ್ವಾಡ್ 66 ರನ್ ಹಾಗೂ ತಿಲಕ್ ವರ್ಮಾ 19 ರನ್ ಗಳಿಸಿ ಆಡುತ್ತಿದ್ದಾರೆ.

  • 28 Nov 2023 08:21 PM (IST)

    ರುತುರಾಜ್ ಅರ್ಧಶತಕ

    ರುತುರಾಜ್ ಗಾಯಕ್ವಾಡ್ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಸತತ ಎರಡನೇ ಪಂದ್ಯದಲ್ಲೂ ಅರ್ಧಶತಕ ಸಿಡಿಸಿದ್ದಾರೆ.

  • 28 Nov 2023 08:13 PM (IST)

    12 ಓವರ್‌ ಮುಕ್ತಾಯ

    12 ಓವರ್‌ಗಳಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದೆ. ರಿತುರಾಜ್ ಗಾಯಕ್ವಾಡ್ 32 ರನ್ ಗಳಿಸಿ ಆಡುತ್ತಿದ್ದಾರೆ. ಅದೇ ಸಮಯದಲ್ಲಿ ತಿಲಕ್ ವರ್ಮಾ ಅವರಿಗೆ ಬೆಂಬಲ ನೀಡಲು ಕ್ರೀಸ್‌ಗೆ ಬಂದಿದ್ದಾರೆ.

  • 28 Nov 2023 07:57 PM (IST)

    ಸೂರ್ಯ ಔಟ್

    ಟೀಂ ಇಂಡಿಯಾ 81 ರನ್‌ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿದೆ. ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 38 ರನ್ ಗಳಿಸಿ ಔಟಾದರು.

  • 28 Nov 2023 07:55 PM (IST)

    10 ಓವರ್‌ಗಳ ಆಟ ಪೂರ್ಣಗೊಂಡಿದೆ

    10 ಓವರ್‌ಗಳಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 80 ರನ್ ಗಳಿಸಿದೆ. ಆರಂಭಿಕ ಹಿನ್ನಡೆಯ ನಂತರ ರಿತುರಾಜ್ ಗಾಯಕ್ವಾಡ್ ಮತ್ತು ಸೂರ್ಯಕುಮಾರ್ ಯಾದವ್ ತಂಡಕ್ಕೆ ನೆರವಾಗಿದ್ದಾರೆ. ರಿತುರಾಜ್ ಗಾಯಕ್ವಾಡ್ 21 ರನ್ ಹಾಗೂ ಸೂರ್ಯಕುಮಾರ್ ಯಾದವ್ 39 ರನ್ ಗಳಿಸಿ ಆಡುತ್ತಿದ್ದಾರೆ.

  • 28 Nov 2023 07:49 PM (IST)

    9 ಓವರ್‌ ಮುಕ್ತಾಯ

    9 ಓವರ್‌ಗಳಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿದೆ.

  • 28 Nov 2023 07:48 PM (IST)

    ಕ್ರೀಸ್‌ನಲ್ಲಿ ರುತುರಾಜ್-ಸೂರ್ಯ

    ರಿತುರಾಜ್ ಗಾಯಕ್ವಾಡ್ 13 ರನ್ ಹಾಗೂ ಸೂರ್ಯಕುಮಾರ್ ಯಾದವ್ 33 ರನ್ ಗಳಿಸಿ ಆಡುತ್ತಿದ್ದಾರೆ.

  • 28 Nov 2023 07:48 PM (IST)

    8 ಓವರ್‌ಗಳ ನಂತರ ಟೀಂ ಇಂಡಿಯಾ ಸ್ಕೋರ್

    8 ಓವರ್‌ಗಳಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 66 ರನ್ ಗಳಿಸಿದೆ.

  • 28 Nov 2023 07:30 PM (IST)

    5 ಓವರ್‌ ಮುಕ್ತಾಯ

    5 ಓವರ್‌ಗಳ ಆಟದಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 39 ರನ್ ಗಳಿಸಿದೆ. ರಿತುರಾಜ್ ಗಾಯಕ್ವಾಡ್ ಮತ್ತು ಸೂರ್ಯಕುಮಾರ್ ಯಾದವ್ ಸದ್ಯ ಕ್ರೀಸ್‌ನಲ್ಲಿದ್ದಾರೆ.

  • 28 Nov 2023 07:21 PM (IST)

    ಎರಡನೇ ವಿಕೆಟ್

    ಟೀಂ ಇಂಡಿಯಾ ಎರಡನೇ ವಿಕೆಟ್ ಕೂಡ ಕಳೆದುಕೊಂಡಿದೆ. ಇಶಾನ್ ಕಿಶನ್ ಖಾತೆ ತೆರೆಯದೇ ವಿಕೆಟ್ ಒಪ್ಪಿಸಿದರು. 24 ರನ್‌ಗಳ ಅಂತರದಲ್ಲಿ ಟೀಂ ಇಂಡಿಯಾ ಮೊದಲ ಎರಡು ಹಿನ್ನಡೆ ಅನುಭವಿಸಿದೆ.

  • 28 Nov 2023 07:13 PM (IST)

    ಜೈಸ್ವಾಲ್ ಔಟ್

    ಟೀಂ ಇಂಡಿಯಾ ಮೊದಲ ವಿಕೆಟ್ ಕಳೆದುಕೊಂಡಿದೆ. ಯಶಸ್ವಿ ಜೈಸ್ವಾಲ್ 6 ರನ್ ಗಳಿಸಿ ಔಟಾದರು.

  • 28 Nov 2023 07:09 PM (IST)

    ಟೀಂ ಇಂಡಿಯಾಗೆ ಉತ್ತಮ ಆರಂಭ

    ಮೊದಲ ಓವರ್‌ನಲ್ಲಿ ಟೀಂ ಇಂಡಿಯಾ ಈಗಾಗಲೇ 14 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್-ರಿತುರಾಜ್ ಗಾಯಕ್ವಾಡ್, ಇಬ್ಬರೂ ಆರಂಭಿಕರು ಮೊದಲ ಓವರ್‌ನಲ್ಲಿ ತಲಾ 1 ಬೌಂಡರಿ ಬಾರಿಸಿದರು.

  • 28 Nov 2023 06:44 PM (IST)

    ಆಸ್ಟ್ರೇಲಿಯಾ ತಂಡ

    ಟ್ರಾವಿಸ್ ಹೆಡ್, ಆರನ್ ಹಾರ್ಡಿ, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವಿರ್ ಸಂಘ, ಕೇನ್ ರಿಚರ್ಡ್ಸನ್.

  • 28 Nov 2023 06:37 PM (IST)

    ಭಾರತ ತಂಡ

    ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ತಿಲಕ್ ವರ್ಮಾ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.

  • 28 Nov 2023 06:34 PM (IST)

    ಟಾಸ್ ಗೆದ್ದ ಆಸ್ಟ್ರೇಲಿಯಾ

    3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟೇಲಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

  • Published On - Nov 28,2023 6:33 PM

    Follow us
    ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
    ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
    ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
    ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
    ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
    ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
    ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
    ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
    ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
    ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
    ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
    ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
    ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
    ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
    ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
    ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
    Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
    Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
    ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
    ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ