IND vs AUS: ಟೀಂ ಇಂಡಿಯಾದಿಂದ ಸ್ಟಾರ್ ಬೌಲರ್ ಔಟ್; ಉಭಯ ತಂಡಗಳು ಹೀಗಿವೆ
IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಐದು ಪಂದ್ಯಗಳ ಸರಣಿಯಲ್ಲಿ ಇದು ಮೂರನೇ ಪಂದ್ಯವಾಗಿದೆ. ಭಾರತ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ.
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಮೂರನೇ ಟಿ20 ಪಂದ್ಯ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಐದು ಪಂದ್ಯಗಳ ಸರಣಿಯಲ್ಲಿ ಇದು ಮೂರನೇ ಪಂದ್ಯವಾಗಿದೆ. ಭಾರತ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಮೂರನೇ ಪಂದ್ಯ ಗೆದ್ದರೆ ಭಾರತ ಸರಣಿ ಕೈವಶ ಮಾಡಿಕೊಳ್ಳಲಿದೆ. ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಅಲ್ಲದೆ ಟಾಸ್ ಮೂಲಕ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳು ಬದಲಾವಣೆ ಮೂಲಕ ಕಣಕ್ಕಿಳಿಯುತ್ತಿವೆ.
ಮುಖೇಶ್ ಕುಮಾರ್ ಲಭ್ಯರಿಲ್ಲ
ಮೇಲೆ ಹೇಳಿದಂತೆ ಉಭಯ ತಂಡಗಳು ಕೆಲವು ಬದಲಾವಣೆಗಳನ್ನು ಮಾಡಿವೆ. ಅದರಲ್ಲಿ ಭಾರತದ ಮಟ್ಟಿಗೆ ಹೇಳುವುದಾದರೆ, ತಂಡ ಒಂದು ಬದಲಾವಣೆ ಮಾಡಿದೆ. ಈ ಪಂದ್ಯಕ್ಕೆ ಮುಖೇಶ್ ಕುಮಾರ್ ಲಭ್ಯರಿಲ್ಲ. ಹಾಗಾಗಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವೇಶ್ ಖಾನ್ಗೆ ಅವಕಾಶ ಸಿಕ್ಕಿದೆ. ಟಾಸ್ ಸೋತ ನಂತರ ಈ ಬಗ್ಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ‘‘ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಮುಖೇಶ್ ಬದಲಿಗೆ ಅವೇಶ್ ಬಂದಿದ್ದಾರೆ. ಮುಖೇಶ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ಆ ಕಾರಣದಿಂದ ಅವರು ತಂಡದಿಂದ ಹೊರನಡೆದಿದ್ದಾರೆ. ನಾವು ಅವರಿಗೆ ಶುಭ ಹಾರೈಸುತ್ತೇವೆ” ಎಂದರು.
IND vs AUS 3rd T20 Live Score: ಟಾಸ್ ಗೆದ್ದ ಆಸ್ಟ್ರೇಲಿಯಾ; ಭಾರತ ಮೊದಲು ಬ್ಯಾಟಿಂಗ್
ಆಸ್ಟ್ರೇಲಿಯಾ ತಂಡದಲ್ಲೂ ಮೂರು ಬದಲಾವಣೆಗಳಾಗಿದ್ದು, ಮ್ಯಾಥ್ಯೂ ಶಾರ್ಟ್ ಬದಲಿಗೆ ವಿಶ್ವಕಪ್ ಫೈನಲ್ ಹೀರೋ ಟ್ರಾವಿಸ್ ಹೆಡ್ ತಂಡ ಸೇರಿಕೊಂಡಿದ್ದಾರೆ. ಇವರಲ್ಲದೆ ಕೇನ್ ರಿಚರ್ಡ್ಸನ್ ಮತ್ತು ಜೇಸನ್ ಬೆಹ್ರೆನ್ಡಾರ್ಫ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಉಭಯ ತಂಡಗಳು
ಭಾರತ ತಂಡ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ತಿಲಕ್ ವರ್ಮಾ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಆರನ್ ಹಾರ್ಡಿ, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ), ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವಿರ್ ಸಂಘ, ಕೇನ್ ರಿಚರ್ಡ್ಸನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:42 pm, Tue, 28 November 23