IND vs AUS: ಭಾರತ vs ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಯಾವಾಗ? ಇಲ್ಲಿದೆ ಮಾಹಿತಿ
India vs Australia: ಬಾರ್ಡರ್-ಗವಾಸ್ಕರ್ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಭಾರತ ತಂಡವು ಅಮೋಘ ಗೆ;ಲುವು ದಾಖಲಿಸಿತ್ತು. ಇದೀಗ ಎರಡನೇ ಮ್ಯಾಚ್ನಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿಯುವಲ್ಲಿ ಆಸ್ಟ್ರೇಲಿಯನ್ ಪಡೆ ಯಶಸ್ವಿಯಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿವೆ. ಪರ್ತ್‌ನಲ್ಲಿ ನಡೆದ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ 295 ರನ್ ಗಳ ಜಯ ಸಾಧಿಸಿದರೆ, ಅಡಿಲೇಡ್ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ಗೆಲುವು ಕಂಡಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯು ಆರಂಭದಲ್ಲೇ 1-1 ಅಂತರದಿಂದ ಸಮಗೊಂಡಿದೆ.
ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದ್ದು, ಈ ಪಂದ್ಯವು ಡಿಸೆಂಬರ್ 14 ರಿಂದ ಶುರುವಾಗಲಿದೆ. ಬ್ರಿಸ್ಬೇನ್‌ನ ಗಾಬ್ಬಾ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಬೆಳಿಗಿನ ಜಾವ 5.50 ಕ್ಕೆ ಆರಂಭವಾಗಲಿದೆ.
ಇನ್ನು ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದ್ದು, ಈ ಮೂಲಕ ಸರಣಿ ಗೆಲುವಿನ ಸನಿಹಕ್ಕೆ ತಲುಪಬಹುದು. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಹಾಗೆಯೇ ಈ ಪಂದ್ಯವು ಸಾಮಾನ್ಯ ಟೆಸ್ಟ್ ಪಂದ್ಯವಾಗಿದ್ದು, ರೆಡ್ ಬಾಲ್ನಲ್ಲಿ ಆಡಲಾಗುತ್ತದೆ. ಹಾಗಾಗಿ ಪರ್ತ್ ಟೆಸ್ಟ್ ಪಂದ್ಯದಲ್ಲಿನ ಫಲಿತಾಂಶವನ್ನು ಟೀಮ್ ಇಂಡಿಯಾ ಪುನರಾವರ್ತಿಸಬಹುದು.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.
ಇದನ್ನೂ ಓದಿ: 147 ವರ್ಷಗಳ ಇತಿಹಾಸದಲ್ಲೇ ಅಚ್ಚರಿಯ ವಿಶ್ವ ದಾಖಲೆ ಬರೆದ ಟೆಂಬಾ ಬವುಮಾ
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.
ಭಾರತ-ಆಸ್ಟ್ರೇಲಿಯಾ ನಡುವಣ ಉಳಿದ ಟೆಸ್ಟ್ ಪಂದ್ಯಗಳ ವೇಳಾಪಟ್ಟಿ:
- ಭಾರತ vs ಆಸ್ಟ್ರೇಲಿಯಾ, 3ನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್ (5:50 AM IST)
- ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್ (5:00 AM IST)
- ಭಾರತ vs ಆಸ್ಟ್ರೇಲಿಯಾ, 5ನೇ ಟೆಸ್ಟ್: ಜನವರಿ 2-7, ಸಿಡ್ನಿ (5:00 AM IST)
Published On - 7:30 am, Mon, 9 December 24