AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಚಕ್ಕನೆ ಜಿಗಿದು ಅತ್ಯದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಉಸ್ಮಾನ್ ಖ್ವಾಜಾ

India vs Australia 3rd Test: 88 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರೋಹಿತ್ ಶರ್ಮಾ (12) ಹಾಗೂ ಶುಭ್​ಮನ್ ಗಿಲ್ (5) ಬೇಗನೆ ನಿರ್ಗಮಿಸಿ ನಿರಾಸೆ ಮೂಡಿಸಿದರು.

VIDEO: ಚಕ್ಕನೆ ಜಿಗಿದು ಅತ್ಯದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಉಸ್ಮಾನ್ ಖ್ವಾಜಾ
Usman Khawaja
TV9 Web
| Updated By: Digi Tech Desk|

Updated on:Mar 02, 2023 | 4:22 PM

Share

India vs Australia 3rd Test: ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ 3ನೇ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ (Team India) ಕೇವಲ 109 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ ಅನ್ನು 197 ರನ್​ಗಳಿಗೆ ಅಂತ್ಯಗೊಳಿಸಿತ್ತು. ಇದಾದ ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮತ್ತೊಮ್ಮೆ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದೆ.

88 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರೋಹಿತ್ ಶರ್ಮಾ (12) ಹಾಗೂ ಶುಭ್​ಮನ್ ಗಿಲ್ (5) ಬೇಗನೆ ನಿರ್ಗಮಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನು 13 ರನ್​ಗಳಿಸಿ ವಿರಾಟ್ ಕೊಹ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು. ಆ ಬಳಿಕ ಬಂದ ರವೀಂದ್ರ ಜಡೇಜಾ 7 ರನ್​ಗಳಿಸಲಷ್ಟೇ ಶಕ್ತರಾದರು.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಕ್ರೀಸ್ ಕಚ್ಚಿ ನಿಲ್ಲುವ ಸೂಚನೆ ನೀಡಿದರು. ರಕ್ಷಣಾತ್ಮಕ ಆಟದೊಂದಿಗೆ 26 ರನ್​ ಬಾರಿಸಿದ ಅಯ್ಯರ್ ಅವರು ಉಸ್ಮಾನ್ ಖ್ವಾಜಾ ಅವರ ಅದ್ಭುತ ಫೀಲ್ಡಿಂಗ್ ಕಾರಣ

ಮಿಚೆಲ್ ಸ್ಟಾರ್ಕ್ ಎಸೆದ 38ನೇ ಓವರ್​ನ 2ನೇ ಎಸೆತವನ್ನು ಶ್ರೇಯಸ್ ಅಯ್ಯರ್ ಲೆಗ್​ ಸೈಡ್​ನತ್ತ ಫ್ಲಿಕ್ ಮಾಡಲು ಯತ್ನಿಸಿದ್ದರು. ಆದರೆ ಮುಂಭಾಗದಲ್ಲಿ ಫೀಲ್ಡಿಂಗ್​ನಲ್ಲಿ ಉಸ್ಮಾನ್ ಖ್ವಾಜಾ ತಕ್ಷಣವೇ ಎಡಭಾಗಕ್ಕೆ ಜಿಗಿದು ಕೆಳ ಹಂತದಲ್ಲಿದ್ದ ಚೆಂಡನ್ನು ಒಂದೇ ಕೈಯಲ್ಲಿ ಅದ್ಭುತವಾಗಿ ಹಿಡಿದರು. ಈ ಅದ್ಭುತ ಫೀಲ್ಡಿಂಗ್ ಕಾರಣ ಶ್ರೇಯಸ್ ಅಯ್ಯರ್ (26) ಹೊರ ನಡೆಯಬೇಕಾಯಿತು.

ಇದೀಗ ಉಸ್ಮಾನ್ ಖ್ವಾಜಾ ಅವರ ಈ ಅತ್ಯಾದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆಸೀಸ್ ಕ್ರಿಕೆಟಿಗನ ಅತ್ಯುತ್ತಮ ಡೈವಿಂಗ್ ಕ್ಯಾಚ್​ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭ್​ಮನ್ ಗಿಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ರವೀಂದ್ರ ಜಡೇಜಾ , ಶ್ರೀಕರ್ ಭರತ್ ( ವಿಕೆಟ್ ಕೀಪರ್ ) , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಉಮೇಶ್ ಯಾದವ್ , ಮೊಹಮ್ಮದ್ ಸಿರಾಜ್

ಇದನ್ನೂ ಓದಿ: Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಟ್ರಾವಿಸ್ ಹೆಡ್ , ಮಾರ್ನಸ್ ಲ್ಯಾಬುಶೇನ್ , ಸ್ಟೀವ್ ಸ್ಮಿತ್ (ನಾಯಕ) , ಪೀಟರ್ ಹ್ಯಾಂಡ್ಸ್​ಕ್ಯಾಂಬ್ , ಕ್ಯಾಮರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಟಾಡ್ ಮರ್ಫಿ , ಮ್ಯಾಥ್ಯೂ ಕುಹ್ನೆಮನ್.

Published On - 4:03 pm, Thu, 2 March 23

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ