AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 3rd Test: ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯ ಯಾವಾಗ ಆರಂಭ?, ಎಲ್ಲಿ ನಡೆಯಲಿದೆ?

IND vs AUS 3rd Test: ಎರಡೂ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸುವ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಹಾಗಾದರೆ, ಇಂಡೋ- ಆಸೀಸ್ ಮೂರನೇ ಟೆಸ್ಟ್ ಯಾವಾಗ ಆರಂಭ?, ಎಲ್ಲಿ ನಡೆಯಲಿದೆ?.

India vs Australia 3rd Test: ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯ ಯಾವಾಗ ಆರಂಭ?, ಎಲ್ಲಿ ನಡೆಯಲಿದೆ?
India vs Australia
Vinay Bhat
|

Updated on:Feb 25, 2023 | 7:19 AM

Share

ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲೆರಡು ಟೆಸ್ಟ್ ಪಂದ್ಯ ಮುಕ್ತಾಯಗೊಂಡಿದೆ. ಈ ಎರಡೂ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸುವ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಅಲ್ಲದೆ ಬಾರ್ಡರ್- ಗವಾಸ್ಕರ್ (Border Gavaskar Trophy) ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೊದಲ ಪಂದ್ಯದಲ್ಲಿ ಜಡೇಜಾ (Ravindra Jadeja) ಹಾಗೂ ಅಶ್ವಿನ್ ಸ್ಪಿನ್ ತಂತ್ರ ಅರಿಯುವಲ್ಲಿ ವಿಫಲರಾದ ಪ್ಯಾಟ್ ಕಮಿನ್ಸ್ ಪಡೆ ಹೀನಾಯ ಸೋಲುಂಡಿತು. ದ್ವಿತೀಯ ಪಂದ್ಯದಲ್ಲೂ ಇದೇ ಮುಂದುವರೆಯಿತು. ಇದೀಗ ಉಭಯ ತಂಡಗಳು ತೃತೀಯ ಕದನಕ್ಕೆ ಸಜ್ಜಾಗುತ್ತಿದೆ. ಹಾಗಾದರೆ, ಇಂಡೋ- ಆಸೀಸ್ ಮೂರನೇ ಟೆಸ್ಟ್ ಯಾವಾಗ ಆರಂಭ?.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ತೃತೀಯ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಮಾರ್ಚ್ 5 ರವರೆಗೆ ನಡೆಯಲಿದೆ.

ಇದನ್ನೂ ಓದಿ
Image
Yash: ರಾಕಿ ಭಾಯ್ ಯಶ್​ಗೆ ಸಲಾಂ ಹೇಳಿದ ಕ್ರಿಕೆಟಿಗ ದಿನೇಶ್ ಕಾರ್ತಿಕ್
Image
KCC: ‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಇಲ್ಲಿದೆ ಫೋಟೋ ಗ್ಯಾಲರಿ
Image
IPL 2023: ಎಲ್ಲಾ ಐಪಿಎಲ್ ತಂಡಗಳ ನಾಯಕರ ಹೆಸರು ಪ್ರಕಟ; ಸಂಪೂರ್ಣ ಪಟ್ಟಿ ಇಲ್ಲಿದೆ
Image
ಏರ್‌ಲೈನ್ ಕೆಲಸಕ್ಕೆ ಗುಡ್​ಬೈ; ಕತಾರ್​ನಲ್ಲಿ 4ನೇ ಗಿನ್ನಿಸ್ ದಾಖಲೆ ಬರೆದ ಅಲ್ಟ್ರಾ ರನ್ನರ್ ಸೂಫಿಯಾ ಸೂಫಿ!

ಮೂರನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಪಂದ್ಯ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

Virat Kohli: ಅಲಿಬಾಗ್‌ನಲ್ಲಿ ಮತ್ತೊಂದು ವಿಲ್ಲಾ ಖರೀದಿಸಿದ ಕೊಹ್ಲಿ; ಅದರ ಬೆಲೆ ಎಷ್ಟು ಕೋಟಿ ಗೊತ್ತಾ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಮೂರನೇ ಟೆಸ್ಟ್ ಪಂದ್ಯವು ಬೆಳಗ್ಗೆ 09:30 ಕ್ಕೆ ಆರಂಭವಾಗಲಿದೆ. ಒಂಬತ್ತು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ.

ಸಂಕಷ್ಟದಲ್ಲಿ ಆಸ್ಟ್ರೇಲಿಯಾ:

ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾಕ್ಕೆ ಇದುವರೆಗೂ ಯಾವುದೇ ಶುಭ ಸುದ್ದಿ ಸಿಕ್ಕಿಲ್ಲ. ಬದಲು ಒಂದರ ಹಿಂದೆ ಒಂದು ಆಘಾತ ಅನುಭವಿಸುತ್ತಿದೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಇಡೀ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ. ವಾಸ್ತವವಾಗಿ ಕೌಟುಂಬಿಕ ಕಾರಣಗಳಿಂದಾಗಿ ದೆಹಲಿ ಟೆಸ್ಟ್ ನಂತರ ಆಸ್ಟ್ರೇಲಿಯಾಕ್ಕೆ ಮರಳಿದ್ದ ಕಮಿನ್ಸ್ ಉಳಿದಿರುವ 2 ಟೆಸ್ಟ್​ ಪಂದ್ಯಗಳಿಗೆ ಗೈರಾಗಲಿದ್ದಾರೆ. ಇವರ ತಾಯಿಯ ಆರೋಗ್ಯ ಹದಗೆಟ್ಟಿರುವುದರಿಂದ ಅವರು ತಮ್ಮ ತಾಯಿಯೊಂದಿಗೆ ಇರಲು ಬಯಸಿದ್ದಾರೆ ಎಂದು ವರದಿಯಾಗಿದೆ.

ಕಮಿನ್ಸ್​ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇನ್ನು ಮೊಣಕೈ ಸಮಸ್ಯೆಯಿಂದಾಗಿ ಈಗಾಗಲೇ ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇವರೊಂದಿಗೆ ಹ್ಯಾಜಲ್‌ವುಡ್ ಕೂಡ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಮ್ಯಾಥ್ಯೂ ರೆನ್ಶಾ ಕೂಡ ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಆಷ್ಟನ್ ಅಗರ್ ಕೂಡ ಅಲಭ್ಯರಾಗಿದ್ದಾರೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:19 am, Sat, 25 February 23

ದೆಹಲಿ ಸ್ಫೋಟಕ್ಕೂ ಮುನ್ನ ಮಸೀದಿ ಹೊರಗೆ ಉಗ್ರ ಉಮರ್ ಸುತ್ತಾಡಿದ್ದ
ದೆಹಲಿ ಸ್ಫೋಟಕ್ಕೂ ಮುನ್ನ ಮಸೀದಿ ಹೊರಗೆ ಉಗ್ರ ಉಮರ್ ಸುತ್ತಾಡಿದ್ದ
ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ, ಪರಿಶೀಲಿಸಿದ ಪೊಲೀಸರಿಗೇ ಆಘಾತ!
ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ, ಪರಿಶೀಲಿಸಿದ ಪೊಲೀಸರಿಗೇ ಆಘಾತ!
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್