IND vs AUS 4th Test: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಲಾಭವೇನು? ಸೋತರೆ ನಷ್ಟವೇನು?

India vs Australia 4t Test: 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಅಥವಾ ಡ್ರಾ ಮಾಡಿಕೊಳ್ಳುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಈ ಮೂಲಕ ಸತತವಾಗಿ 4 ಬಾರಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದ ಹಿರಿಮೆಗೂ ಪಾತ್ರವಾಗಲಿದೆ.

IND vs AUS 4th Test: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಲಾಭವೇನು? ಸೋತರೆ ನಷ್ಟವೇನು?
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 09, 2023 | 4:00 PM

India vs Australia 4th Test: ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್​ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಶುರುವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲು ಉಭಯ ತಂಡಗಳು ಪಣತೊಟ್ಟಿದೆ. ಹೀಗಾಗಿಯೇ 4ನೇ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಈಗಾಗಲೇ 4 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇತ್ತ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು 2-2 ಅಂತರದಿಂದ ಅಂತ್ಯಗೊಳಿಸಲು ಆಸ್ಟ್ರೇಲಿಯಾ ತಂಡ ಕೂಡ ಪ್ಲ್ಯಾನ್ ರೂಪಿಸಿದೆ.

ಮತ್ತೊಂದೆಡೆ ಟೀಮ್ ಇಂಡಿಯಾ ಪಾಲಿಗೆ ಈ ಗೆಲುವು ಅನಿವಾರ್ಯ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪ್ರವೇಶವನ್ನು ಈ ಪಂದ್ಯದ ಫಲಿತಾಂಶ ನಿರ್ಧರಿಸಲಿದೆ. ಒಂದು ವೇಳೆ ಭಾರತ ತಂಡವು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಅತ್ತ ಶ್ರೀಲಂಕಾ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​​​ಶಿಪ್ ಫೈನಲ್​ಗೇರುವ ಅವಕಾಶ ಹೆಚ್ಚಾಗಲಿದೆ.

ಹೀಗಾಗಿ ಅಹಮದಾಬಾದ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಇದಲ್ಲದೆ ಈ ಒಂದು ಗೆಲುವಿನೊಂದಿಗೆ ಟೆಸ್ಟ್ ತಂಡಗಳ ಶ್ರೇಯಾಂಕ ಪಟ್ಟಿಯಲ್ಲೂ ನಂಬರ್ 1 ಸ್ಥಾನಕ್ಕೇರಲಿದೆ. ಅದು ಕೂಡ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕುವ ಮೂಲಕ ಎಂಬುದೇ ಇಲ್ಲಿ ವಿಶೇಷ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇನ್ನು 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಅಥವಾ ಡ್ರಾ ಮಾಡಿಕೊಳ್ಳುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಈ ಮೂಲಕ ಸತತವಾಗಿ 4 ಬಾರಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದ ಹಿರಿಮೆಗೂ ಪಾತ್ರವಾಗಲಿದೆ. ಈ ಎಲ್ಲಾ ಕಾರಣಗಳಿಂದ ಅಹಮದಾಬಾದ್ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಹತ್ವದೆನಿಸಿಕೊಂಡಿದೆ.

ಒಂದು ವೇಳೆ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದರೆ ಸರಣಿಯು 2-2 ಅಂತರದಿಂದ ಕೊನೆಗೊಳ್ಳಲಿದೆ. ಇದರ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೇರುವ ಶ್ರೀಲಂಕಾ ತಂಡದ ಕನಸು ಕೂಡ ಜೀವಂತವಾಗಿರಲಿದೆ. ಇಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನು ಸೋತರೆ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಸರಣಿ ಗೆಲ್ಲುವುದನ್ನು ಎದುರು ನೋಡಬೇಕು. ಅಂದರೆ ಇಲ್ಲಿ ಶ್ರೀಲಂಕಾ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​ ಕನಸು ಟೀಮ್ ಇಂಡಿಯಾದ ಫಲಿತಾಂಶದ ಮೇಲೆ ಅವಲಂಭಿತವಾಗಿದೆ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಭಾರತ-ಆಸ್ಟ್ರೇಲಿಯಾ ನಡುವಣ ಕೊನೆಯ ಟೆಸ್ಟ್ ಪಂದ್ಯ ಡ್ರಾ ಆದರೆ?

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಡ್ರಾ ಆದರೂ ಟೀಮ್ ಇಂಡಿಯಾದ ಪಾಲಿಗೆ ಮುಳುವಾಗಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದರೂ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡದ ಗೆಲುವಿನ ಮೇಲೆ ಫೈನಲ್​ ಕನಸು ಆಧಾರಿತವಾಗಿರಲಿದೆ.

ಅಂದರೆ ಇಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಂಡರೆ ಅಥವಾ 2-1 ಅಂತರದಿಂದ ಗೆದ್ದುಕೊಂಡರೆ, ಟೀಮ್ ಇಂಡಿಯಾಗೆ ನೇರವಾಗಿ ಫೈನಲ್​ಗೇರಲು ಸಾಧ್ಯವಾಗುವುದಿಲ್ಲ. ಬದಲಾಗಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು 2-0, 1-0 ಅಂತರದಿಂದ ಸೋಲಿಸಿದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಎಂಟ್ರಿ ಕೊಡಬಹುದು.

ಇತ್ತ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತು, ಅತ್ತ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ 2-0 ಅಂತರದಿಂದ ಟೆಸ್ಟ್ ಸರಣಿ ಗೆದ್ದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಅಹಮದಾಬಾದ್​ ಟೆಸ್ಟ್ ಒಂದಾರ್ಥದಲ್ಲಿ​ ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.