AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ vs ಆಸ್ಟ್ರೇಲಿಯಾ 4ನೇ ಟಿ20 ಪಂದ್ಯ ಯಾವಾಗ?

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಉಭಯ ತಂಡಗಳು ಗೆಲುವು ದಾಖಲಿಸಿದೆ. ಇದೀಗ ನಾಲ್ಕನೇ ಪಂದ್ಯಕ್ಕಾಗಿ ಎರಡು ತಂಡಗಳು ಸಜ್ಜಾಗಿದ್ದು, ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

IND vs AUS: ಭಾರತ vs ಆಸ್ಟ್ರೇಲಿಯಾ 4ನೇ ಟಿ20 ಪಂದ್ಯ ಯಾವಾಗ?
Ind Vs Aus
ಝಾಹಿರ್ ಯೂಸುಫ್
|

Updated on:Nov 06, 2025 | 8:00 AM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೂರು ಮ್ಯಾಚ್​ಗಳು ಮುಗಿದಿವೆ. ಕ್ಯಾನ್​ಬೆರಾದಲ್ಲಿ ನಡೆದ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್​ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಭಾರತ vs ಆಸ್ಟ್ರೇಲಿಯಾ 4ನೇ ಟಿ20 ಪಂದ್ಯ ಯಾವಾಗ?

ಇಂಡೊ-ಆಸೀಸ್ ನಡುವಣ ನಾಲ್ಕನೇ ಟಿ20 ಪಂದ್ಯವು ನವೆಂಬರ್ 6 ರಂದು ನಡೆಯಲಿದೆ. ಈ ಪಂದ್ಯಕ್ಕೆ ಕ್ವೀನ್ಸ್​ಲ್ಯಾಂಡ್​ನ ಕ್ಯಾರೆರಾ ಓವಲ್ ಕ್ರಿಕೆಟ್ ಮೈದಾನ ಆತಿಥ್ಯವಹಿಸಲಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.45 ಕ್ಕೆ ಶುರುವಾಗಲಿದೆ. ಇದಕ್ಕೂ ಮುನ್ನ 1.15 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಇದನ್ನೂ ಓದಿ: AUS vs IND: ಆಸ್ಟ್ರೇಲಿಯಾ ತಂಡದಿಂದ ಮೂವರು ರಿಲೀಸ್..!

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್.

Published On - 9:53 am, Tue, 4 November 25

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!