
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೂರು ಮ್ಯಾಚ್ಗಳು ಮುಗಿದಿವೆ. ಕ್ಯಾನ್ಬೆರಾದಲ್ಲಿ ನಡೆದ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್ಗಳ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.
ಇಂಡೊ-ಆಸೀಸ್ ನಡುವಣ ನಾಲ್ಕನೇ ಟಿ20 ಪಂದ್ಯವು ನವೆಂಬರ್ 6 ರಂದು ನಡೆಯಲಿದೆ. ಈ ಪಂದ್ಯಕ್ಕೆ ಕ್ವೀನ್ಸ್ಲ್ಯಾಂಡ್ನ ಕ್ಯಾರೆರಾ ಓವಲ್ ಕ್ರಿಕೆಟ್ ಮೈದಾನ ಆತಿಥ್ಯವಹಿಸಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.45 ಕ್ಕೆ ಶುರುವಾಗಲಿದೆ. ಇದಕ್ಕೂ ಮುನ್ನ 1.15 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.
ಇದನ್ನೂ ಓದಿ: AUS vs IND: ಆಸ್ಟ್ರೇಲಿಯಾ ತಂಡದಿಂದ ಮೂವರು ರಿಲೀಸ್..!
Published On - 9:53 am, Tue, 4 November 25