IND vs AUS: ಉಭಯ ತಂಡಗಳಿಗೂ ನಿರ್ಣಾಯಕವಾಗಿರುವ 4ನೇ ಟಿ20 ಪಂದ್ಯ ಯಾವಾಗ? ಎಲ್ಲಿ ನಡೆಯಲ್ಲಿದೆ?
IND vs AUS: ಸರಣಿಯಲ್ಲಿ ಉಳಿಯಲು ಆಸ್ಟ್ರೇಲಿಯಾ ನಾಲ್ಕನೇ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಅದೇ ವೇಳೆ ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿ ವಶಪಡಿಸಿಕೊಳ್ಳಲಿದೆ.
ಟೀಂ ಇಂಡಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ (India vs Australia) ತಂಡ ಭರ್ಜರಿ ಪುನರಾಗಮನ ಮಾಡಿದೆ. ಸರಣಿಯ ಮೊದಲೆರಡು ಪಂದ್ಯಗಳನ್ನು ಟೀಂ ಇಂಡಿಯಾ (Team India) ಗೆದ್ದಿತ್ತು. ಆದರೆ, ಮೂರನೇ ಪಂದ್ಯವನ್ನು ಗೆದ್ದಿರುವ ಆಸ್ಟ್ರೇಲಿಯಾ ಸರಣಿಯನ್ನು ಇನ್ನು ಜೀವಂತವಾಗಿರಿಸಿದೆ. ಹೀಗಿರುವಾಗ ಸರಣಿಯ ನಾಲ್ಕನೇ ಪಂದ್ಯ ರೋಚಕತೆಯಿಂದ ಕೂಡಿರಲಿದೆ. ಸರಣಿಯಲ್ಲಿ ಉಳಿಯಲು ಆಸ್ಟ್ರೇಲಿಯಾ ನಾಲ್ಕನೇ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಅದೇ ವೇಳೆ ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿ ವಶಪಡಿಸಿಕೊಳ್ಳಲಿದೆ.
ಈ ಮೈದಾನದಲ್ಲಿ ಇದು ಮೊದಲ ಅಂತಾರಾಷ್ಟ್ರೀಯ ಟಿ20 ಪಂದ್ಯವಾಗಿದ್ದು, ಇದಕ್ಕೂ ಮುನ್ನ ಈ ಮೈದಾನದಲ್ಲಿ ಏಕೈಕ ಏಕದಿನ ಪಂದ್ಯ ನಡೆದಿತ್ತು. ಇದರಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತ್ತು.
ಪಂದ್ಯದ ಬಗ್ಗೆ ಇಲ್ಲಿದೆ ಪೂರ್ಣ ಮಾಹಿತಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಡಿಸೆಂಬರ್ 1 ರಂದು ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ರಾಯ್‌ಪುರ ನಗರದಲ್ಲಿ ನಡೆಯಲಿದೆ. ಎರಡೂ ತಂಡಗಳು ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯನ್ನು ಸ್ಪೋರ್ಟ್ಸ್-18 ಮತ್ತು ಕಲರ್ಸ್ ಸಿನೆಪ್ಲೆಕ್ಸ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಅದೇ ಸಮಯದಲ್ಲಿ, ಡಿಡಿ ಫ್ರೀ ಡಿಶ್ ಬಳಸುವ ವೀಕ್ಷಕರು ಡಿಡಿ ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?
ಎರಡನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದ್ದು, ಇದು ಸಂಪೂರ್ಣವಾಗಿ ಉಚಿತವಾಗಿದೆ.
ಟಿ20 ಸರಣಿಗೆ ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್‌ದೀಪ್ ಸಿಂಗ್ ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.
ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ:
ಮ್ಯಾಥ್ಯೂ ವೇಡ್ (ನಾಯಕ), ಜೇಸನ್ ಬೆಹ್ರೆನ್‌ಡಾರ್ಫ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ರಿಸ್ ಗ್ರೀನ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಜೋಶ್ ಫಿಲಿಪ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಕೇನ್ ರಿಚರ್ಡ್ಸನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.