ಇಂದು ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 20 ರನ್‌ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 175 ರನ್‌ಗಳ ಗುರಿ ನೀಡಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ತಂಡವು 154 ರನ್ ಗಳಿಸಲು ಶಕ್ತವಾಗಿ 20 ರನ್‌ಗಳಿಂದ ಪಂದ್ಯವನ್ನು ಕಳೆದುಕೊಂಡಿತು. ಭಾರತದ ಪರ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದರು.
ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು 20 ರನ್‌ಗಳಿಂದ ಸೋಲಿಸಿದೆ. ಈ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿದೆ.
ಆಸ್ಟ್ರೇಲಿಯ ತಂಡ 19 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದೆ. ಕೊನೆಯ ಓವರ್‌ನಲ್ಲಿ ಆಸ್ಟ್ರೇಲಿಯಾ ಗೆಲುವಿಗೆ 31 ರನ್‌ಗಳ ಅಗತ್ಯವಿದೆ.
ಅವೇಶ್ ಖಾನ್ಗೆ ಮೊದಲ ವಿಕೆಟ್ ಸಿಕ್ಕಿದೆ. ಅವರು ಒಂದು ರನ್ ಗಳಿಸಿದ್ದ ಬೆನ್ ದ್ವಾರ್ಶುಯಿಸ್ ಅವರನ್ನು ಬೌಲ್ಡ್ ಮಾಡಿದರು.
ಭಾರತ ತಂಡಕ್ಕೆ ಆರನೇ ಯಶಸ್ಸು ಸಿಕ್ಕಿದೆ. ದೀಪಕ್ ಚಹಾರ್ ಮ್ಯಾಥ್ಯೂ ಶಾರ್ಟ್ ಅವರನ್ನು ಔಟ್ ಮಾಡಿದ್ದಾರೆ. ಈ ಪಂದ್ಯದಲ್ಲಿ ಅವರು ಕೇವಲ 22 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆಸ್ಟ್ರೇಲಿಯ 17 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಿದೆ.
15ನೇ ಓವರ್ ಬೌಲ್ ಮಾಡಿದ ದೀಪಕ್ ಚಹರ್ ಟಿಮ್ ಡೇವಿಡ್ ಅವರ ವಿಕೆಟ್ ಪಡೆದಿದ್ದಾರೆ. ಆಸೀಸ್ 107 ರನ್ಗಳಿಗೆ 5ನೇ ವಿಕೆಟ್ ಕಳೆದುಕೊಂಡಿದೆ.
ಆಸ್ಟ್ರೇಲಿಯಾ ತಂಡ 15ನೇ ಓವರ್‌ನಲ್ಲಿ 100 ರನ್‌ಗಳ ಗಡಿ ದಾಟಿದೆ. ಇದಕ್ಕಾಗಿ ತಂಡ 4 ವಿಕೆಟ್ ಕಳೆದುಕೊಂಡಿದೆ.
ಭಾರತದ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿರುವ ಅಕ್ಷರ್ ಪಟೇಲ್ 3ನೇ ವಿಕೆಟ್ ಪಡೆದಿದ್ದಾರೆ. 22 ಎಸೆತಗಳಲ್ಲಿ 19 ರನ್ ಬಾರಿಸಿದ್ದ ಬೆನ್ ಮೆಕ್ಡರ್ಮಾಟ್ ಕ್ಲೀನ್ ಬೌಲ್ಡ್ ಆಗಿದ್ದಾರೆ.
ಆಸ್ಟ್ರೇಲಿಯಾ ತಂಡದಲ್ಲಿ ಸತತ ವಿಕೆಟ್ ಪತನದ ನಂತರ ಟಿಮ್ ಡೇವಿಡ್ ಇನ್ನಿಂಗ್ಸ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮ್ಯಾಕರ್ಮೊಟ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಕಾಂಗರೂ ತಂಡ 100 ರನ್‌ಗಳಿಂದ 25 ರನ್‌ಗಳ ಅಂತರದಲ್ಲಿದೆ. ಟೀಂ ಇಂಡಿಯಾ ವಿಕೆಟ್‌ಗಳ ಹುಡುಕಾಟದಲ್ಲಿದೆ.
ಭಾರತ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ 175 ರನ್‌ಗಳ ಗುರಿ ಬೆನ್ನತ್ತಿರುವ ಆಸ್ಟ್ರೇಲಿಯಾ 9 ಓವರ್‌ಗಳ ಅಂತ್ಯಕ್ಕೆ 3 ವಿಕೆಟ್ ನಷ್ಟದಲ್ಲಿ 66 ರನ್ ಗಳಿಸಿದೆ.
ಅಕ್ಷರ್ ಪಟೇಲ್ ಎರಡನೇ ವಿಕೆಟ್ ಪಡೆದಿದ್ದಾರೆ. ಹಾರ್ಡಿ 8 ರನ್ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಆಸ್ಟ್ರೇಲಿಯ ತಂಡ 15 ರನ್‌ಗಳ ಅಂತರದಲ್ಲಿ 3 ವಿಕೆಟ್ ಕಳೆದುಕೊಂಡಿತು. ಅಕ್ಷರ್ 2 ವಿಕೆಟ್ ಪಡೆದರು.
6 ಓವರ್‌ಗಳಲ್ಲಿ ಆಸ್ಟ್ರೇಲಿಯಾ ತಂಡ 2 ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿದೆ. ಬೆನ್ ಮೆಕ್‌ಡರ್ಮಾಟ್ 2 ರನ್ ಮತ್ತು ಆರೋನ್ ಹಾರ್ಡಿ 1 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ರವಿ ಬಿಷ್ಣೋಯ್ ನಂತರ ಅಕ್ಷರ್ ಪಟೇಲ್ ಕೂಡ ವಿಕೆಟ್ ಉರುಳಿಸಿದ್ದಾರೆ. ಅಮೋಘ ಶೈಲಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಟ್ರಾವಿಸ್ ಹೆಡ್ ಗೆ ಪೆವಿಲಿಯನ್ ಹಾದಿ ತೋರಿಸಿದ್ದಾರೆ. 4 ರನ್‌ಗಳ ಅಂತರದಲ್ಲಿ ಕಾಂಗರೂ ತಂಡಕ್ಕೆ ಎರಡನೇ ಹೊಡೆತ ಬಿದ್ದಿದೆ.
ಭಾರತದ ಮೊದಲ ಯಶಸ್ಸನ್ನು ಸ್ಟಾರ್ ಸ್ಪಿನ್ನರ್ ರವಿ ಬಿಷ್ಣೋಯ್ ತಂದುಕೊಟ್ಟಿದ್ದಾರೆ. ತಮ್ಮ ಅದ್ಭುತ ಸ್ಪಿನ್‌ನೊಂದಿಗೆ 8 ರನ್ ಗಳಿಸಿದ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಜೋಶ್ ಫಿಲಿಪ್ ಅವರನ್ನು ರವಿ ಬೌಲ್ಡ್ ಮಾಡಿದರು.
ಆಸ್ಟ್ರೇಲಿಯಾ ತಂಡ 3 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ಟ್ರಾವಿಸ್ ಹೆಡ್ 29 ರನ್ ಮತ್ತು ಜೋಸ್ ಫಿಲಿಪ್ಪಿ 8 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಆಸ್ಟ್ರೇಲಿಯ ತಂಡ 1 ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ 7 ರನ್ ಗಳಿಸಿದೆ. ಟ್ರಾವಿಸ್ ಹೆಡ್ 3 ರನ್ ಮತ್ತು ಜೋಸ್ ಫಿಲಿಪ್ಪಿ 4 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಭಾರತ ಆಸ್ಟ್ರೇಲಿಯಕ್ಕೆ ಗೆಲ್ಲಲು 175 ರನ್‌ಗಳ ಗುರಿ ನೀಡಿದೆ. ಟೀಂ ಇಂಡಿಯಾ ಪರ ರಿಂಕು ಸಿಂಗ್ 46 ರನ್ ಗಳ ಇನಿಂಗ್ಸ್ ಆಡಿದರೆ, ಜಿತೇಶ್ ಶರ್ಮಾ 35 ರನ್ ಗಳಿಸಿದರು. ರಿತುರಾಜ್ ಗಾಯಕ್ವಾಡ್ 32 ರನ್ ಕೊಡುಗೆ ನೀಡಿದರು. ಟೀಂ ಇಂಡಿಯಾ ಗೌರವಾನ್ವಿತ ಸ್ಕೋರ್ ತಲುಪಲು ಈ ಬ್ಯಾಟ್ಸ್ಮನ್ಗಳಿಂದಲೇ ಸಾಧ್ಯವಾಯಿತು. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗದೆ 1 ರನ್ ಗಳಿಸಿ ಔಟಾದರು.
ಭಾರತ ತಂಡ 19 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ. ದೀಪಕ್ ಚಹಾರ್ ರನ್ ಗಳಿಸದೆ ಕ್ರೀಸ್‌ನಲ್ಲಿದ್ದರೆ, ರಿಂಕು ಸಿಂಗ್ 46 ರನ್ ಗಳಿಸಿದ್ದಾರೆ.
ಉತ್ತಮ ಫಾರ್ಮ್‌ನಲ್ಲಿದ್ದ ಜಿತೇಶ್ ಶರ್ಮಾ ದೊಡ್ಡ ಹೊಡೆತಕ್ಕೆ ಪ್ರಯತ್ನಿ ಔಟಾದರು. ಅವರು ಪಂದ್ಯದಲ್ಲಿ 19 ಎಸೆತಗಳಲ್ಲಿ 35 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಭಾರತ ತಂಡ 18.4 ಓವರ್‌ಗಳಲ್ಲಿ 167 ರನ್ ಗಳಿಸಿದೆ.
ಭಾರತ ತಂಡ 18 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿದೆ. ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದಾರೆ. ಜಿತೇಶ್ ಶರ್ಮಾ 29 ರನ್ ಮತ್ತು ರಿಂಕು ಸಿಂಗ್ 46 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ಪರ ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. 15 ಓವರ್‌ಗಳಲ್ಲಿ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿದೆ. ಜಿತೇಶ್ ಶರ್ಮಾ 16 ರನ್ ಹಾಗೂ ರಿಂಕು ಸಿಂಗ್ 28 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ 32 ರನ್ ಗಳಿಸಿ ಔಟಾಗಿದ್ದಾರೆ. ಅವರನ್ನು ತನ್ವೀರ್ ಸಂಘ ವಜಾ ಮಾಡಿದ್ದಾರೆ.
12 ಓವರ್‌ಗಳಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿದೆ. ರಿಂಕು ಸಿಂಗ್ 18 ರನ್ ಮತ್ತು ರಿತುರಾಜ್ ಗಾಯಕ್ವಾಡ್ 22 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಭಾರತ ತಂಡ 10 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 79 ರನ್ ಗಳಿಸಿದೆ. ರಿಂಕು ಸಿಂಗ್ 5 ಹಾಗೂ ರಿತುರಾಜ್ ಗಾಯಕ್ವಾಡ್ 19 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದಂತಿದೆ. ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೇವಲ 1 ರನ್ ಗಳಿಸಿ ಔಟಾದರು. 9 ಓವರ್‌ಗಳಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 70 ರನ್ ಗಳಿಸಿದೆ.
ನಾಲ್ಕನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಅವಕಾಶ ಪಡೆದರೂ ದೊಡ್ಡ ಇನ್ನಿಂಗ್ಸ್ ಆಡಲಾಗದೆ ಕೇವಲ 8 ರನ್ ಗಳಿಸಿ ಔಟಾದರು.
ಟೀಮ್ ಇಂಡಿಯಾ ತನ್ನ ಮೊದಲ ವಿಕೆಟ್ ಕಳೆದುಕೊಂಡಿದೆ. ಸ್ಫೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ 37 ರನ್ ಗಳಿಸಿದ ನಂತರ ಆರೋನ್ ಹಾರ್ಡಿ ಎಸೆತದಲ್ಲಿ ಕ್ಯಾಚ್ ಔಟ್ ಆದರು.
ಪವರ್‌ಪ್ಲೇಯಲ್ಲಿ ಟೀಮ್ ಇಂಡಿಯಾದಿಂದ ಉತ್ತಮ ಬ್ಯಾಟಿಂಗ್ ಮಾಡಿತು. ತಂಡದ ಪರ ಜೈಸ್ವಾಲ್ ಅವರ 32 ರನ್ ಮತ್ತು ಗಾಯಕ್ವಾಡ್ 6 ಗಳಿಸಿ ಆಡುತ್ತಿದ್ದಾರೆ. ಈ 6 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 43 ರನ್ ಕಲೆಹಾಕಿದೆ.
5 ಓವರ್‌ಗಳ ನಂತರ ಟೀಂ ಇಂಡಿಯಾ 43 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 32 ರನ್ ಮತ್ತು ರಿತುರಾಜ್ ಗಾಯಕ್ವಾಡ್ 6 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಅಮೋಘ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.
4 ಓವರ್‌ಗಳ ನಂತರ ಟೀಂ ಇಂಡಿಯಾ 29 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 19 ರನ್ ಮತ್ತು ರಿತುರಾಜ್ ಗಾಯಕ್ವಾಡ್ 5 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ. ಇದರಲ್ಲಿ ಜೈಸ್ವಾಲ್ ಬೌಂಡರಿಗಳಿಂದಲೇ ಸ್ಕೋರ್ ಹೆಚ್ಚಿಸುತ್ತಿದ್ದಾರೆ.
2 ಓವರ್‌ಗಳ ನಂತರ ಟೀಂ ಇಂಡಿಯಾ 11 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 7 ರನ್ ಮತ್ತು ರಿತುರಾಜ್ ಗಾಯಕ್ವಾಡ್ ಕ್ರೀಸ್‌ನಲ್ಲಿದ್ದಾರೆ. ಈ ಓವರ್‌ನಲ್ಲಿ ಜೈಸ್ವಾಲ್ 1 ಬೌಂಡರಿ ಹೊಡೆದರು.
ಆಸ್ಟ್ರೇಲಿಯ ತಂಡ ಉತ್ತಮ ಆರಂಭ ನೀಡಿದೆ.ಮೊದಲ ಓವರ್ ಎಸೆದ ಹಾರ್ಡಿ ಯಾವುದೇ ರನ್ ನೀಡಲಿಲ್ಲ. ಆದರೆ ಬೈಸ್ ಮೂಲಕ ತಂಡ 1 ರನ್ ಕಲೆಹಾಕಿತು.
ಪಂದ್ಯ ಆರಂಭವಾಗಿದೆ. ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಜೋಡಿ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ.
ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ.
ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ, ರಿಂಕು ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಾಹರ್, ಅವೇಶ್ ಖಾನ್, ಅಕ್ಸರ್ ಪಟೇಲ್ ಮತ್ತು ರವಿ ಬಿಷ್ಣೋಯ್.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ವೇಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
Published On - 6:31 pm, Fri, 1 December 23