IND vs AUS: ಭಾರತ ಮೊದಲು ಬ್ಯಾಟಿಂಗ್; ತಂಡದಲ್ಲಿ 4 ಬದಲಾವಣೆ
IND vs AUS: ಈ ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದೆ. ಇದರೊಂದಿಗೆ ಉಭಯ ತಂಡಗಳು ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ.
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟಿ20 ಸರಣಿಯ ಸಂಭ್ರಮ ಇದೀಗ ನಾಲ್ಕನೇ ಪಂದ್ಯಕ್ಕೆ ಕಾಲಿಟ್ಟಿದೆ. ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರಿ ರನ್ ಮಳೆಯಾಗಿದ್ದು, ಇದೀಗ ನಾಲ್ಕನೇ ಪಂದ್ಯದಲ್ಲೂ ಅದೇ ನಿರೀಕ್ಷೆಯಿದೆ. ಸರಣಿಯ ನಾಲ್ಕನೇ ಪಂದ್ಯ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ (Raipur) ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದೆ. ಇದರೊಂದಿಗೆ ಉಭಯ ತಂಡಗಳು ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ.
ಭಾರತ ತಂಡದಲ್ಲಿ ನಾಲ್ಕು ಬದಲಾವಣೆ
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೆ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ನಾಲ್ಕು ಬದಲಾವಣೆ ಮಾಡಲಾಗಿದೆ. ಪ್ರಸಿದ್ಧ್ ಕೃಷ್ಣ ಬದಲಿಗೆ ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್ ಬದಲಿಗೆ ದೀಪಕ್ ಚಹಾರ್, ತಿಲಕ್ ವರ್ಮಾ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಬದಲಿಗೆ ಜಿತೇಶ್ ಶರ್ಮಾಗೆ ಅವಕಾಶ ಸಿಕ್ಕಿದೆ. ಹಾಗೆಯೇ ಆಸ್ಟ್ರೇಲಿಯಾ ತಂಡದಲ್ಲೂ ಬದಲಾವಣೆಗಳಾಗಿವೆ.
IND vs AUS 4th T20I Live Score: ಟಾಸ್ ಗೆದ್ದ ಆಸ್ಟ್ರೇಲಿಯಾ; ಭಾರತ ಮೊದಲು ಬ್ಯಾಟಿಂಗ್
ಉಭಯ ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ, ರಿಂಕು ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಾಹರ್, ಅವೇಶ್ ಖಾನ್, ಅಕ್ಸರ್ ಪಟೇಲ್ ಮತ್ತು ರವಿ ಬಿಷ್ಣೋಯ್.
A look at #TeamIndia’s Playing XI for the 4th T20I 👌🏻👌🏻
Follow the Match ▶️ https://t.co/iGmZmBsSDt#INDvAUS | @IDFCFIRSTBank pic.twitter.com/DgHpRsNjyS
— BCCI (@BCCI) December 1, 2023
ಆಸ್ಟ್ರೇಲಿಯ ತಂಡ: ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:44 pm, Fri, 1 December 23