IND vs AUS 4th Test: ಟಾಸ್ ಗೆದ್ದ ಆಸ್ಟ್ರೇಲಿಯಾ: ಭಾರತದ ಪ್ಲೇಯಿಂಗ್ XIನಲ್ಲಿ ಒಂದು ಬದಲಾವಣೆ
India vs Australia 4th Test: ಭಾರತ ಈ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ಅರ್ಹತೆ ಪಡೆದುಕೊಳ್ಳಲು ಗೆಲ್ಲಲೇ ಬೇಕಿದೆ. ಇತ್ತ ಸರಣಿಯಲ್ಲಿ 1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲುವ ಯೋಜನೆ ರೂಪಿಸಿದೆ.
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ (Steve Smith) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ಈ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ಅರ್ಹತೆ ಪಡೆದುಕೊಳ್ಳಲು ಗೆಲ್ಲಲೇ ಬೇಕಿದೆ. ಇತ್ತ ಸರಣಿಯಲ್ಲಿ 1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲುವ ಯೋಜನೆ ರೂಪಿಸಿದೆ. ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದಾರೆ.
ಅಂದುಕೊಂಡಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವಿಶ್ರಾಂತಿಯಲ್ಲಿದ್ದ ಮೊಹಮ್ಮದ್ ಶಮಿ ತಂಡಕ್ಕೆ ಮರಳಿದ್ದು, ಮೊಹಮ್ಮದ್ ಸಿರಾಜ್ ಹೊರಗುಳಿದಿದ್ದಾರೆ. ಉಳಿದಂತೆ ಗಿಲ್ ಹಾಗೂ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರೆ, ಪೂಜಾರ, ಕೊಹ್ಲಿ, ಶ್ರೇಯಸ್, ಶ್ರೀಕರ್ ಭರತ್, ಜಡೇಜಾ, ಅಶ್ವಿನ್, ಅಕ್ಷರ್, ಶಮಿ, ಉಮೇಶ್ ಯಾದವ್ ಸ್ಥಾನ ಪಡೆದುಕೊಂಡಿದ್ದಾರೆ.
ಇತ್ತ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ನಾಲ್ಕನೇ ಟೆಸ್ಟ್ನಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಅವರು ನಾಯಕನಾಗಿ ಮುಂದುವರೆದಿದ್ದಾರೆ. ಟಾಡ್ ಮರ್ಫಿ, ನೇಥನ್ ಲಿಯಾನ್ ಹಾಗೂ ಮ್ಯಾಟ್ ಕುನೆಮನ್ ತಂಡದ ಪ್ರಮುಖ ಸ್ಪಿನ್ ಅಸ್ತ್ರವಾಗಿದೆ. ಬ್ಯಾಟಿಂಗ್ನಲ್ಲಿ ಸ್ಮಿತ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ, ಉಸ್ಮಾನ್ ಖವಾಜಾ, ಪೀಟರ್ ಹ್ಯಾಂಡ್ಸ್‌ಕಂಬ್, ಕ್ಯಾಮರಾನ್ ಗ್ರೀನ್, ಮಾರ್ನಸ್ ಲಾಬುಷೇನ್ ಮಿಂಚಬೇಕಿದೆ.
AB De Villier: ‘ಸಾರ್ವಕಾಲಿಕ ಶ್ರೇಷ್ಠ T20 ಆಟಗಾರ’ನನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಷೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್‌ಕಂಬ್, ಕ್ಯಾಮರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ನೇಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಟ್ ಕುನೆಮನ್.
ಭಾರತ ಗೆಲ್ಲಲೇ ಬೇಕು:
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಿಸ ಬೇಕಾದಲ್ಲಿ ಭಾರತ ಈ ಟೆಸ್ಟ್ ಪಂದ್ಯದಲ್ಲಿ ಗೆಲ್ಲಬೇಕಿದೆ. ಇಲ್ಲದಿದ್ದಲ್ಲಿ ಶ್ರೀಲಂಕಾ ಫೈನಲ್ಗೆ ಹೋಗುವ ಅವಕಾಶ ಮಾಡಿಕೊಳ್ಳುವ ಸಾಧ್ಯತೆ ಇದೆ. ಇಂದಿನಿಂದ ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಶ್ರೀಲಂಕಾಗೆ ಕೂಡ ಪಂದ್ಯ ಆರಂಭವಾಗಲಿದೆ. ಎರಡು ಟೆಸ್ಟ್ ಪಂದ್ಯದ ಸರಣಿಯಲ್ಲಿ ಕಿವಿಸ್ನ್ನು ತವರಿನಲ್ಲಿ ಕ್ಲೀನ್ ಸ್ವೀಪ್ ಮಾಡಿದರೆ ಲಂಕಾ WTC ಫೈನಲ್ ಪ್ರವೇಶಿಸಲಿದೆ. ಹೀಗಾಗಿ ಭಾರತಕ್ಕೆ ಗೆದ್ದರಷ್ಟೆ ಉಳಿಗಾಲ. ಭಾರತ-ಆಸ್ಟ್ರೇಲಿಯಾ 105 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ ಕಾಂಗರೂ ಪಡೆ 44 ಮತ್ತು ಭಾರತ 32 ಪಂದ್ಯಗಳನ್ನು ಗೆದ್ದಿದೆ. 28 ಪಂದ್ಯ ಡ್ರಾ ಹಾಗೂ ಒಂದು ಪಂದ್ಯ ಟೈ ಆಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:10 am, Thu, 9 March 23