AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೊತ್ತಾರೆ ಹೊತ್ತಿನಲ್ಲಿ ಶುರುವಾಗಲಿದೆ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್​

India vs Australia 4th Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ. ಇನ್ನು ದ್ವಿತೀಯ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳಿಂದ ಜಯಭೇರಿ ಬಾರಿಸಿತ್ತು. ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದ್ದು, ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗಿದೆ.

IND vs AUS: ಹೊತ್ತಾರೆ ಹೊತ್ತಿನಲ್ಲಿ ಶುರುವಾಗಲಿದೆ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್​
India vs Australia
ಝಾಹಿರ್ ಯೂಸುಫ್
|

Updated on: Dec 24, 2024 | 9:57 AM

Share

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ. ಈ ಪಂದ್ಯದ ಟಾಸ್ ಪ್ರಕ್ರಿಯೆ ಆಸ್ಟ್ರೇಲಿಯಾ ಸಮಯ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಅಂದರೆ ಭಾರತೀಯ ಕಾಲಮಾನ 4.30 ಕ್ಕೆ ಟಾಸ್ ಪ್ರಕ್ರಿಯೆ ಮುಗಿಯಲಿದೆ. ಇನ್ನು ಭಾರತದಲ್ಲಿ ಪಂದ್ಯವನ್ನು ಮುಂಜಾನೆ 5 ಗಂಟೆಯಿಂದ ಲೈವ್ ವೀಕ್ಷಿಸಬಹುದು.

ಬ್ರಿಸ್ಬೇನ್​ನಲ್ಲಿ ನಡೆದ ಮೂರನೇ ಪಂದ್ಯವು ಬೆಳಿಗ್ಗೆ 9.30 ಕ್ಕೆ (ಭಾರತದಲ್ಲಿ 5.30 ಕ್ಕೆ) ಆರಂಭವಾಗಿತ್ತು. ಆದರೀಗ ಮೆಲ್ಬೋರ್ನ್ ಟೆಸ್ಟ್ ಪಂದ್ಯವನ್ನು ಬೆಳಿಗ್ಗೆ 10.30 ಕ್ಕೆ (ಭಾರತದಲ್ಲಿ 5 ಗಂಟೆ) ಆರಂಭಿಸಲು ನಿರ್ಧರಿಸಲಾಗಿದೆ. ಅದರಂತೆ ಮೊದಲ ಸೆಷನ್ ಬೆಳಿಗ್ಗೆ 5 am IST ಗಂಟೆಯಿಂದ 7 am IST ಗಂಟೆಯವರೆಗೆ ನಡೆಯಲಿದೆ.

ಇನ್ನು ದ್ವಿತೀಯ ಸೆಷನ್ ಶುರುವಾಗುವುದು ಭಾರತೀಯ ಕಾಲಮಾನ 7.40 am ರಿಂದ,  9.40 am ವರೆಗೆ ಎರಡನೇ ಸೆಷನ್ ನಡೆಯಲಿದೆ. ಇದಾದ ಬಳಿಕ ಟೀ ಬ್ರೇಕ್ ಇರಲಿದೆ. ಆ ಬಳಿಕ 10 am ರಿಂದ 12 pm ರವರೆಗೆ ಮೂರನೇ ಸೆಷನ್ ಜರುಗಲಿದೆ. ಅಂದರೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಯಾಗುವಷ್ಟರಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಗಿಯಲಿದೆ.

ಬಾಕ್ಸಿಂಗ್ ಡೇ ಟೆಸ್ಟ್ ಸಮಯ:

  • ಟಾಸ್ ಪ್ರಕ್ರಿಯೆ – 4.30 am IST.
  • ಮೊದಲ ಸೆಷನ್ – 5 am to 7 am IST.
  • ಎರಡನೇ ಸೆಷನ್ – 7.40 am toಇ 9.40 am IST.
  • ಮೂರನೇ ಸೆಷನ್ – 10 am to 12 pm IST.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯವನ್ನು ಸ್ಟಾರ್​ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್​ ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

ಇದನ್ನೂ ಓದಿ: ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ರೋಹಿತ್ ಶರ್ಮಾ

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಶಾನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಸ್ಯಾಮ್ ಕೊನ್​ಸ್ಟಾಸ್, ಮಾರ್ನಸ್ ಲಾನುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಜ್ಯೆ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ , ಬ್ಯೂ ವೆಬ್‌ಸ್ಟರ್​.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ