
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯವನ್ನು 48 ರನ್ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ (India vs Australia) ಐದು ಪಂದ್ಯಗಳ ಸರಣಿಯಲ್ಲಿ 2-1 ಅಂತರದ ಮುನ್ನಡೆ ಪಡೆದುಕೊಂಡಿದೆ. ಸರಣಿಯನ್ನು ಹಿನ್ನಡೆಯೊಂದಿಗೆ ಆರಂಭಿಸಿದ್ದ ಸೂರ್ಯಕುಮಾರ್ ಪಡೆ ಆ ಬಳಿಕ ಅದ್ಭುತ ಪುನರಾಗಮನ ಮಾಡಿ ಇದೀಗ ಆತಿಥೇಯರನ್ನು ಅವರ ನೆಲದಲ್ಲೇ ಸರಣಿ ಸೋಲಿನ ಮುಜುಗರಕ್ಕೊಳಪಡಿಸಲು ನೋಡುತ್ತಿದೆ. ವಾಸ್ತವವಾಗಿ ಉಭಯ ತಂಡಗಳ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ನಂತರದ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದಿತ್ತು. ಆ ಬಳಿಕ ನಡೆದಿರುವ ಎರಡೂ ಪಂದ್ಯಗಳನ್ನು ಭಾರತ ಗೆದ್ದುಕೊಂಡಿದೆ. ಇದೀಗ ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ನೋಡುತ್ತಿದೆ. ಇದರೊಂದಿಗೆ ಏಕದಿನ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯ ನವೆಂಬರ್ 8 ರಂದು ನಡೆಯಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯ ಪ್ರಸಿದ್ಧ ಗಬ್ಬಾ ಮೈದಾನದಲ್ಲಿ ನಡೆಯಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:45 ಕ್ಕೆ ಆರಂಭವಾಗಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ನ ವಿವಿದ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ, ಶಿವಂ ದುಬೆ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ